ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆಳಂದ ದರ್ಗಾ ಗಲಭೆ ಕೇಸ್ ವಾಪಸ್: ಸರ್ಕಾರದ ವಿರುದ್ಧ ಕಲಬುರ್ಗಿಯಲ್ಲಿ ಬಿಜೆಪಿ ಬೃಹತ್ ರಣಕಹಳೆ! ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ನೀತಿ ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ

On: June 1, 2026 5:53 PM
Follow Us:

​ಕಲಬುರ್ಗಿ: ಆಳಂದದ ಐತಿಹಾಸಿಕ ಲಾಡ್ಲೆ ಮಶಾಕ್ ದರ್ಗಾ ಮತ್ತು ರಾಘವ ಚೈತನ್ಯ ಶಿವಲಿಂಗದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದ ಮೊಕದ್ದಮೆಗಳನ್ನು ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ, ಕಲಬುರ್ಗಿಯಲ್ಲಿ ಇಂದು ಬೃಹತ್ ಪ್ರತಿಭಟನಾ ಪ್ರದರ್ಶನ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, “ಸರ್ಕಾರ ತಕ್ಷಣವೇ ದುಷ್ಕರ್ಮಿಗಳ ವಿರುದ್ಧದ ಪ್ರಕರಣಗಳನ್ನು ಮರು ದಾಖಲಿಸಿಕೊಂಡು, ಕಾನೂನು ರೀತ್ಯಾ ಕಠಿಣ ಕ್ರಮ ಜರುಗಿಸಬೇಕು” ಎಂದು ಆಗ್ರಹಿಸಿದರು.

​ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕರು, ಪವಿತ್ರ ರಾಘವ ಚೈತನ್ಯ ಶ್ರೀ ಶಿವಲಿಂಗ ದೇವಸ್ಥಾನದ ಅಪಚಾರ ನಡೆಸಿ, ಗಲಭೆ ಸೃಷ್ಟಿಸಿದ್ದ ಸಮಾಜಘಾತುಕ ಶಕ್ತಿಗಳ ಮೇಲಿನ ಮೊಕದ್ದಮೆಗಳನ್ನು ಹಿಂಪಡೆದಿರುವ ಕಾಂಗ್ರೆಸ್ ಸರ್ಕಾರದ ಕ್ರಮ ಅತ್ಯಂತ ಖಂಡನೀಯ ಎಂದರು. ಕೇವಲ ತನ್ನ ಓಟ್ ಬ್ಯಾಂಕ್ ಭದ್ರಪಡಿಸಿಕೊಳ್ಳುವ ತುಷ್ಟೀಕರಣದ ರಾಜಕಾರಣಕ್ಕಾಗಿ ರಾಜ್ಯ ಸರ್ಕಾರವೇ ಸಮಾಜಘಾತುಕರ ಪರವಾಗಿ ನಿಂತರೆ ಸಾಮಾನ್ಯ ಜನತೆಯ ಗತಿಯೇನು? ಎಂದು ಅವರು ಪ್ರಶ್ನಿಸಿದರು.



“ಕಾಂಗ್ರೆಸ್ ಸರ್ಕಾರಕ್ಕೆ ‘ಹೇಳುವುದು ಆಚಾರ, ತಿನ್ನುವುದು ಬದನೆಕಾಯಿ’ ಎನ್ನುವ ಗಾದೆ ಮಾತು ಸರಿಯಾಗಿ ಒಪ್ಪುತ್ತದೆ. ಈ ಸರ್ಕಾರದ ನುಡಿಗೂ ಮತ್ತು ನಡೆಗೂ ಯಾವುದೇ ಸಂಬಂಧವಿಲ್ಲ. ಕೇವಲ ಒಂದು ನಿರ್ದಿಷ್ಟ ಮತ ಬ್ಯಾಂಕ್ ಸಂತೃಪ್ತಿಗಾಗಿ ಸಾರ್ವಜನಿಕರ ಧಾರ್ಮಿಕ ನಂಬಿಕೆಗಳ ಮೇಲೆ ಆಕ್ರಮಣ ಮಾಡಿದವರನ್ನು ಹಾಗೂ ಶ್ರದ್ಧಾಕೇಂದ್ರಗಳ ಮೇಲೆ ದಾಳಿ ಮಾಡಿದವರನ್ನು ರಕ್ಷಿಸಲು ಸರ್ಕಾರ ಮುಂದಾಗಿದೆ. ಇದು ಸರ್ಕಾರದ ನೈತಿಕ ಅಧಃಪಾತವನ್ನು ತೋರಿಸುತ್ತದೆ.”



– ಬಿ.ವೈ.ವಿಜಯೇಂದ್ರ, ಬಿಜೆಪಿ ರಾಜ್ಯಾಧ್ಯಕ್ಷ


​ಒಂದು ಧರ್ಮದವರನ್ನು ಓಲೈಸಲು ಹೋಗಿ ಮತ್ತೊಂದು ಧರ್ಮಕ್ಕೆ ಅಪಮಾನ ಮಾಡಿದವರನ್ನು ರಕ್ಷಿಸುತ್ತಿರುವ ಕಾಂಗ್ರೆಸ್, ಸಮಾಜದಲ್ಲಿ ಬೌದ್ಧಿಕ ದಿವಾಳಿತನ ಪ್ರದರ್ಶಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಈ ತುಷ್ಟೀಕರಣದ ರಾಜಕೀಯವು ರಾಜ್ಯದ ಕಾನೂನು ಮತ್ತು ಸುವ್ಯವಸ್ಥೆಯ ಸಂಪೂರ್ಣ ಕುಸಿತಕ್ಕೆ ಕನ್ನಡಿ ಹಿಡಿದಿದೆ. ರಾಜ್ಯ ಸರ್ಕಾರವು ಕೂಡಲೇ ಎಚ್ಚೆತ್ತುಕೊಂಡು ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳದಿದ್ದರೆ, ಕಲಬುರ್ಗಿಯಲ್ಲಿ ಆರಂಭವಾಗಿರುವ ಈ ಪ್ರತಿಭಟನೆಯ ಕಿಚ್ಚು ಶೀಘ್ರದಲ್ಲೇ ರಾಜ್ಯಾದ್ಯಂತ ಹರಡಲಿದೆ ಎಂದು ಬಿಜೆಪಿ ಎಚ್ಚರಿಕೆ ನೀಡಿದೆ.

​

ಬಹುಸಂಖ್ಯಾತರ ಭಾವನೆಗಳೊಂದಿಗೆ ಆಟವಾಡುತ್ತಿರುವ ಕಾಂಗ್ರೆಸ್ ಸರ್ಕಾರದ ಇಂತಹ ಜನವಿರೋಧಿ ಹಾಗೂ ಹಿಂದೂ ವಿರೋಧಿ ಧೋರಣೆಗಳನ್ನು ಪಕ್ಷವು ಎಂದಿಗೂ ಸಹಿಸುವುದಿಲ್ಲ. ನಮ್ಮ ಧರ್ಮ, ಸಂಸ್ಕೃತಿ ಮತ್ತು ಸಮಾಜದ ಶಾಂತಿಯನ್ನು ಕದಡುವ ಶಕ್ತಿಗಳಿಗೆ ಸರ್ಕಾರ ನೀಡುತ್ತಿರುವ ಪ್ರೋತ್ಸಾಹದ ವಿರುದ್ಧದ ಹೋರಾಟವು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳಲಿದೆ. ಕಾಂಗ್ರೆಸ್ ಪಕ್ಷದ ಈ ಧೋರಣೆಗೆ ರಾಜ್ಯದ ಜನರೇ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ನಾಯಕರು ಗುಡುಗಿದರು. No

​ಈ ಬೃಹತ್ ಪ್ರತಿಭಟನಾ ಸಭೆಯಲ್ಲಿ ಪಕ್ಷದ ಕಲಬುರ್ಗಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಅಶೋಕ್ ಬಗಲಿ, ಬೀದರ್ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ್, ಶಾಸಕರಾದ ಶೈಲೇಂದ್ರ ಬೆಲ್ದಾಳೆ, ಬಸವರಾಜ ಮತ್ತಿಮೂಡ್, ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಬಿ.ಜಿ. ಪಾಟೀಲ್, ಶಶಿಲ್ ನಮೋಶಿ, ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ, ಮಾಜಿ ಸಂಸದ ಡಾ. ಉಮೇಶ್ ಜಾಧವ್, ಮಾಜಿ ಶಾಸಕರಾದ ಸುಭಾಷ್ ಗುತ್ತೇದಾರ್, ಅಪ್ಪುಗೌಡ, ಹಾಗೂ ನರಸಿಂಹ ನಾಯಕ್ (ರಾಜು ಗೌಡ) ಸೇರಿದಂತೆ ಜಿಲ್ಲೆಯ ಪ್ರಮುಖ ನಾಯಕರು, ಜನಪ್ರತಿನಿಧಿಗಳು, ಸಾವಿರಾರು ಸಂಖ್ಯೆಯ ಪಕ್ಷದ ಕಾರ್ಯಕರ್ತರು ಮತ್ತು ಸಾರ್ವಜನಿಕರು ಭಾಗವಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

K.M.Sathish Gowda

Join WhatsApp

Join Now

Facebook

Join Now

Read more

ಬರದ ನಡುವೆ ರೈತರ ನೆರವಿಗೆ ಧಾವಿಸದ ಸರ್ಕಾರ: ಎಕರೆಗೆ ₹50 ಸಾವಿರ ಪರಿಹಾರಕ್ಕೆ ಬಿ.ವೈ. ವಿಜಯೇಂದ್ರ ಒತ್ತಾಯ: ರಾಜ್ಯದ ಹಣಕಾಸು ಸ್ಥಿತಿಗತಿ ಕುರಿತು ಶ್ವೇತಪತ್ರಕ್ಕೆ ಆಗ್ರಹ

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

Leave a Comment