ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​’ಇರುವುದೊಂದೇ ಭೂಮಿ, ರಕ್ಷಣೆ ನಮ್ಮ ಹೊಣೆ: ಪ್ರಕೃತಿ ಮೇಲಿನ ದಬ್ಬಾಳಿಕೆ ನಿಲ್ಲಿಸಿ ಮನುಷ್ಯನೇ ತಪ್ಪು ಸರಿಪಡಿಸಿಕೊಳ್ಳಲಿ’ – ಜಿ.ಡಿ. ಮಂಜುನಾಥ್

On: June 11, 2026 1:18 PM
Follow Us:

​ನಗರದ ಶಾಂತವೇರಿ ಗೋಪಾಲಗೌಡ ಬಡಾವಣೆಯ ಕ್ರೀಡಾ ಭವನದಲ್ಲಿ ಭಾನುವಾರ ಆಯೋಜಿಸಲಾಗಿದ್ದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಈ ಕಾರ್ಯಕ್ರಮವನ್ನು ಗೋಪಾಲಗೌಡ ಬಡಾವಣೆಯ ಡಿ-ಬ್ಲಾಕ್ ನಿವಾಸಿಗಳು, ಶ್ರೀ ಸಿದ್ಧಿ ವಿನಾಯಕ ಕ್ರೀಡಾ ಮತ್ತು ಸಾಂಸ್ಕೃತಿಕ ಸಂಘ ಹಾಗೂ ಚಂದನ ಪಾರ್ಕಿನ ಗೆಳೆಯರ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿತ್ತು.

🌱 ‘ಇರುವುದೊಂದೇ ಭೂಮಿ, ರಕ್ಷಣೆ ನಮ್ಮ ಹೊಣೆ’

ಗಿಡ ನೆಟ್ಟು ಮಾತನಾಡಿದ ಜಿ.ಡಿ. ಮಂಜುನಾಥ್ ಅವರು, ಪ್ರಕೃತಿಯ ಮೇಲಿನ ಮಾನವನ ಹಸ್ತಕ್ಷೇಪ ಮತ್ತು ದಬ್ಬಾಳಿಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದಕ್ಕೆ ಕಳವಳ ವ್ಯಕ್ತಪಡಿಸಿದರು.

“ಇಂದು ತಂತ್ರಜ್ಞಾನ ಮತ್ತು ನಗರೀಕರಣದ ಹೆಸರಿನಲ್ಲಿ ಪರಿಸರ ತೀವ್ರವಾಗಿ ಕಲುಷಿತಗೊಳ್ಳುತ್ತಿದೆ. ಮಾನವನು ತನ್ನ ಸ್ವಾರ್ಥಕ್ಕಾಗಿ ಮಾಡಿದ ತಪ್ಪುಗಳ ಪರಿಣಾಮವನ್ನು ಇಂದು ನಾವೆಲ್ಲರೂ ಎದುರಿಸುತ್ತಿದ್ದೇವೆ. ನಾವು ಮಾಡಿದ ತಪ್ಪನ್ನು ನಾವೇ ತಿದ್ದಿಕೊಳ್ಳಬೇಕಿದೆ. ‘ಇರುವುದೊಂದೇ ಭೂಮಿ’ ಎಂಬ ಸತ್ಯವನ್ನು ಅರಿತು, ಅದನ್ನು ಮುಂದಿನ ಪೀಳಿಗೆಗಾಗಿ ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಬೇಕು. ಪ್ರತಿಯೊಬ್ಬರೂ ಕನಿಷ್ಠ ಒಂದೊಂದು ಗಿಡವನ್ನು ನೆಟ್ಟು ಪೋಷಿಸುವ ಸಂಕಲ್ಪ ಮಾಡಬೇಕು,” ಎಂದು ಅವರು ನುಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೆಸ್ಕಾಂ ಸಲಹಾ ಸಮಿತಿ ಸದಸ್ಯರಾದ ಆರ್. ರಾಜಶೇಖರ್ ಅವರು ಮಾತನಾಡಿ, ಪರಿಸರ ಜಾಗೃತಿ ಕೇವಲ ಭಾಷಣಕ್ಕೆ ಸೀಮಿತವಾಗದೆ ಕ್ರಿಯಾರೂಪಕ್ಕೆ ಬರಬೇಕು ಎಂದು ಆಶಯ ವ್ಯಕ್ತಪಡಿಸಿದರು.

​ಈ ಸಂದರ್ಭದಲ್ಲಿ ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು ಹಾಗೂ ಪದಾಧಿಕಾರಿಗಳಾದ ಗೀತೇಂದ್ರ ಗೌಡ್ರು, ಗುರುರಾಜ್ ಎಲ್., ಜಿ.ಎಸ್. ಶಿವಕುಮಾರ್, ಅಶೋಕ್, ಬೋರೇಗೌಡರು, ರವಿ, ಬಸವರಾಜ್, ರಂಗಣ್ಣ, ಮಲ್ಲಿಕಾರ್ಜುನ, ರವಿಕುಮಾರ್, ವಿಜಯ್ ಕುಮಾರ್ ಸೇರಿದಂತೆ ಬಡಾವಣೆಯ ನೂರಾರು ಸಾರ್ವಜನಿಕರು ಮತ್ತು ಪರಿಸರ ಪ್ರೇಮಿಗಳು ಉಪಸ್ಥಿತರಿದ್ದು, ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment