ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

​ಶೋಷಿತರ ಧ್ವನಿ ಪ್ರೊ. ಬಿ. ಕೃಷ್ಣಪ್ಪನವರ ಸಾಮಾಜಿಕ ನ್ಯಾಯದ ಹೋರಾಟ ಹಾಗೂ ಆಶಯಗಳು ಇಂದಿಗೂ ಆದರ್ಶ: ಸಿ.ಎಸ್. ಷಡಾಕ್ಷರಿ

On: June 9, 2026 6:53 PM
Follow Us:

ಶಿವಮೊಗ್ಗ: “ಸಮಾಜದ ಶೋಷಿತ, ವಂಚಿತ ಹಾಗೂ ಹಿಂದುಳಿದ ವರ್ಗಗಳ ಧ್ವನಿಯಾಗಿ ನಿಂತು, ಸಾಮಾಜಿಕ ಸಮಾನತೆಗಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟ ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ಹಾದಿ ಇಂದಿನ ಪೀಳಿಗೆಗೆ ಸದಾ ಸ್ಮರಣೀಯ ಹಾಗೂ ಆದರ್ಶವಾಗಿದೆ,” ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರು ತಿಳಿಸಿದರು.

​ನಗರದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್), ಶಿವಮೊಗ್ಗ ಜಿಲ್ಲಾ ಶಾಖೆಯ ವತಿಯಿಂದ ಆಯೋಜಿಸಲಾಗಿದ್ದ ದಸಂಸ ಸಂಸ್ಥಾಪಕರಾದ ಪ್ರೊ. ಬಿ. ಕೃಷ್ಣಪ್ಪನವರ 89ನೇ ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

ಸಮಾನತೆಯ ಧ್ವನಿ: ಪ್ರೊ. ಬಿ. ಕೃಷ್ಣಪ್ಪ

ಕಾರ್ಯಕ್ರಮದಲ್ಲಿ ಪ್ರೊ. ಬಿ. ಕೃಷ್ಣಪ್ಪನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಗೌರವ ನಮನಗಳನ್ನು ಅರ್ಪಿಸಿದ ಸಿ.ಎಸ್. ಷಡಾಕ್ಷರಿಯವರು, ಕೃಷ್ಣಪ್ಪನವರ ಸಮಾಜಮುಖಿ ಕಳಕಳಿಯನ್ನು ಪ್ರಶಂಸಿಸಿದರು.

“ಕರ್ನಾಟಕದಲ್ಲಿ ದಲಿತ ಮತ್ತು ಶೋಷಿತ ಸಮುದಾಯಗಳನ್ನು ಸಂಘಟಿಸಿ, ಅವರಿಗೆ ಸಾಂವಿಧಾನಿಕ ಹಕ್ಕುಗಳನ್ನು ತಂದುಕೊಡುವಲ್ಲಿ ಕೃಷ್ಣಪ್ಪನವರ ಪಾತ್ರ ಅನನ್ಯವಾದುದು. ಕೇವಲ ಭಾಷಣಕ್ಕೆ ಸೀಮಿತವಾಗದೆ, ತಳಮಟ್ಟದ ಜನರ ನೋವಿಗೆ ಮಿಡಿದು ಸಾಮಾಜಿಕ ನ್ಯಾಯಕ್ಕಾಗಿ ಅವರು ನಿರಂತರ ಹೋರಾಟ ನಡೆಸಿದರು,”

– ಸಿ.ಎಸ್. ಷಡಾಕ್ಷರಿ

ಈ ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೋ. ಶರತ್ ಅನಂತಮೂರ್ತಿ, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್, ಅಪರ ಜಿಲ್ಲಾಧಿಕಾರಿಗಳಾದ ಅಭಿಷೇಕ್, ಕೆಡಿಎಸ್ಎಸ್ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ, ವಕೀಲರಾದ ಕೆ.ಪಿ.ಶ್ರೀಪಾಲ್, ಸೇರಿದಂತೆ, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪ್ರಮುಖ ಪದಾಧಿಕಾರಿಗಳು, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ನೌಕರರ ಸಂಘದ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment