ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ದೂರವಿರಿ; ದೈಹಿಕ ಚಟುವಟಿಕೆ ಮತ್ತು ಸಮಾಜಸೇವೆಯಲ್ಲಿ ತೊಡಗಿಸಿಕೊಳ್ಳಿ: ಸಿ.ಎಸ್. ಷಡಾಕ್ಷರಿ ಕರೆ

On: June 22, 2026 1:39 PM
Follow Us:

ಶಿವಮೊಗ್ಗ: ರಾಷ್ಟ್ರೀಯ ವಿಪತ್ತುಗಳು ಹಾಗೂ ತುರ್ತು ಪರಿಸ್ಥಿತಿಗಳನ್ನು ಸಮರ್ಥವಾಗಿ ಎದುರಿಸಲು ಅಗತ್ಯವಾದ ಜ್ಞಾನ, ಕೌಶಲ್ಯ ಮತ್ತು ಧೈರ್ಯವನ್ನು ಮಕ್ಕಳಲ್ಲಿ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗುವ ಯುವ ಆಪತ್ ಮಿತ್ರ ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಆತ್ಮರಕ್ಷಣೆ, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತದೆ ಎಂದು ಲೆಕ್ಕಪತ್ರ ಇಲಾಖೆಯ ಉಪ ನಿರ್ದೇಶಕರು ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅಭಿಪ್ರಾಯಪಟ್ಟರು.

ನಗರದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಆಯೋಜಿಸಲಾದ ಏಳು ದಿನಗಳ ರಾಷ್ಟ್ರೀಯ ವಿಪತ್ತು ನಿರ್ವಹಣೆ ಮತ್ತು ಯುವ ಆಪತ್ ಮಿತ್ರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾಮಾಜಿಕ ಜಾಲತಾಣಗಳ ಅತಿಬಳಕೆಗೆ ಸಿ.ಎಸ್. ಷಡಾಕ್ಷರಿ ಬೇಸರ

ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಒಂದು ಅತ್ಯುನ್ನತ ಮಾನವೀಯ ಸಂಸ್ಥೆಯಾಗಿದೆ. ಅಂತರರಾಷ್ಟ್ರೀಯ ಮಟ್ಟದಲ್ಲಿ ಮಕ್ಕಳಲ್ಲಿ ಮತ್ತು ಯುವಕರಲ್ಲಿ ವಿಶೇಷ ತರಬೇತಿ ನೀಡುವುದರ ಜೊತೆಗೆ, ಇದು ಮಾನವೀಯ ಮೌಲ್ಯಗಳನ್ನು ಹಾಗೂ ಜೀವನದ ವಿಶೇಷ ಕಲೆಗಳನ್ನು ಕಲಿಸಿಕೊಡುತ್ತದೆ. ಆದರೆ, ಇಂದಿನ ಯುವ ಪೀಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿನಿತ್ಯ ಹಲವು ಗಂಟೆಗಳನ್ನು ಕಳೆಯುತ್ತಾ ತಮ್ಮ ಅಮೂಲ್ಯವಾದ ಸಮಯವನ್ನು ವ್ಯರ್ಥ ಮಾಡುತ್ತಿರುವುದು ಬೇಸರದ ಸಂಗತಿ. ಇದರಿಂದ ಅವರ ಬುದ್ಧಿ ಹಾದಿ ತಪ್ಪುತ್ತದೆಯೇ ಹೊರತು ಯಾವುದೇ ರೀತಿಯ ಲಾಭ ಇರುವುದಿಲ್ಲ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

🏃‍♂️ ವ್ಯಕ್ತಿತ್ವ ವಿಕಸನಕ್ಕೆ ದೈಹಿಕ ಕಸರತ್ತು ಅನಿವಾರ್ಯ

ಪ್ರಸ್ತುತ ದಿನಗಳಲ್ಲಿ ಮಕ್ಕಳಲ್ಲಿ ದೈಹಿಕ ಕಸರತ್ತು ಕಡಿಮೆಯಾಗುತ್ತಿದೆ. ಆರೋಗ್ಯ ಮತ್ತು ದೈಹಿಕ ಸಾಮರ್ಥ್ಯವನ್ನು ವೃದ್ಧಿಸಿಕೊಳ್ಳಲು ಯುವಕರು ಇಂತಹ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವುದು ಅತ್ಯಂತ ಅನಿವಾರ್ಯವಾಗಿದೆ. ಈ ಏಳು ದಿನಗಳ ವಿಶೇಷ ತರಬೇತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ತಮ್ಮನ್ನು ತಾವು ಸಂಪೂರ್ಣವಾಗಿ ತೊಡಗಿಸಿಕೊಂಡರೆ, ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ಸಿ.ಎಸ್.ಷಡಾಕ್ಷರಿ ಕಿವಿಮಾತು ಹೇಳಿದರು.

“ಮಕ್ಕಳಲ್ಲಿ ಸಾಹಸ ಮನೋಭಾವನೆ, ಜೀವನ ಕೌಶಲ್ಯಗಳು ಹಾಗೂ ಸಂಕಷ್ಟಗಳು ಎದುರಾದಾಗ ಅವುಗಳನ್ನು ಧೈರ್ಯದಿಂದ ಎದುರಿಸುವ ಕಲೆಯನ್ನು ಕಲಿಸುವುದು ಇಂದಿನ ಅಗತ್ಯವಾಗಿದೆ. ಭಾರತ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆಯು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿ ಮಕ್ಕಳನ್ನು ತೊಡಗಿಸಿಕೊಳ್ಳುತ್ತಿರುವುದರಿಂದ ಯುವ ಜನರಲ್ಲಿ ಸಮಾಜ ಸೇವಾ ಮನೋಭಾವನೆ ವೃದ್ಧಿಸುತ್ತದೆ.”

— ಸಿ.ಎಸ್. ಷಡಾಕ್ಷರಿ

🤝 ಸಿ.ಎಸ್. ಷಡಾಕ್ಷರಿ ಅವರ ಸಮಾಜಮುಖಿ ಕಾರ್ಯಕ್ಕೆ ಶ್ಲಾಘನೆ

ಕೇಂದ್ರ ಸ್ಥಾನಿಕ ಆಯುಕ್ತರಾದ ಜಿ. ವಿಜಯಕುಮಾರ್ ಮಾತನಾಡಿ, ಷಡಾಕ್ಷರಿಯವರು ಅತ್ಯಂತ ಚಿಕ್ಕ ವಯಸ್ಸಿನಲ್ಲೇ ವಿಶೇಷ ಸಾಧನೆ ಮಾಡುವುದರ ಜೊತೆಗೆ ಸಮಾಜಮುಖಿಯಾಗಿ ಸಾಕಷ್ಟು ಗುರುತರವಾದ ಕಾರ್ಯಗಳನ್ನು ನಿರ್ವಹಿಸಿದ್ದಾರೆ. ಉಚಿತವಾಗಿ ಬಡ ಪದವಿ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಿಕೊಡುವ ಮೂಲಕ ಅವರ ಜೀವನಕ್ಕೆ ಆಸರೆಯಾಗಿದ್ದಾರೆ. ಅವರ ಮಾರ್ಗದರ್ಶನ, ಸಲಹೆ ಹಾಗೂ ಸಹಕಾರ ಸದಾ ನಮ್ಮ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗೆ ಇರಲಿ ಎಂದು ವಿನಂತಿಸಿಕೊಂಡರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಮುಖ್ಯ ಆಯುಕ್ತರಾದ ಶಕುಂತಲಾ ಚಂದ್ರಶೇಖರ್ ಮಾತನಾಡಿ, ಪ್ರತಿ ವರ್ಷ ಈ ರೀತಿಯ ತರಬೇತಿಗಳು ನಿರಂತರವಾಗಿ ನಡೆಯುತ್ತಿರುತ್ತವೆ. ವಿದ್ಯಾರ್ಥಿಗಳು ಇಂತಹ ಶಿಬಿರಗಳ ಸದುಪಯೋಗವನ್ನು ಪಡೆದುಕೊಳ್ಳಬೇಕು. ಷಡಕ್ಷರಿಯವರಂತಹ ಸಾಧಕರು ನಮ್ಮ ಯುವ ಪೀಳಿಗೆಗೆ ಮಾರ್ಗದರ್ಶಕರಾಗಬೇಕು ಎಂದು ಆಶಿಸಿದರು.

ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದ ಅಧಿಕಾರಿ ರವಿಕುಮಾರ್ ಮಾನವೀಯ ಮೌಲ್ಯಗಳು ಮತ್ತು ಸಾಮಾಜಿಕ ಜವಾಬ್ದಾರಿಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಆಯುಕ್ತ (ರೋವರ್ಸ್ ವಿಭಾಗ) ಕೆ. ರವಿ ಯುವ ಆಪತ್ ಮಿತ್ರ ರಾಷ್ಟ್ರೀಯ ವಿಪತ್ತು ನಿರ್ವಹಣಾ ತರಬೇತಿಯ ಉದ್ದೇಶ ಹಾಗೂ ಕಾರ್ಯವೈಖರಿಯನ್ನು ವಿವರಿಸಿದರು.

ಬೆಂಗಳೂರುದಿಂದ ಆಗಮಿಸಿದ್ದ ಯುವ ಆಪತ್ ಮಿತ್ರ ಎಎಸ್‌ಸಿ ಲತಾ ಮಂಜುನಾಥ್ ಕಾರ್ಯಕ್ರಮದ ಹಿನ್ನೆಲೆ, ತರಬೇತಿಯ ಮಹತ್ವ ಹಾಗೂ ವಿಪತ್ತು ಸಂದರ್ಭಗಳಲ್ಲಿ ಯುವಕರ ಪಾತ್ರದ ಕುರಿತು ಸವಿಸ್ತಾರವಾಗಿ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಸಿ.ಎಸ್. ಷಡಾಕ್ಷರಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ಡಿಟಿಸಿ ಹೆಚ್. ಶಿವಶಂಕರಪ್ಪ, ಮಲ್ಲಿಕಾರ್ಜುನ ಕಾನೂರ್, ಎಸ್.ಜಿ. ಆನಂದ್, ಚೂಡಾಮಣಿ ಈ. ಪವಾರ್, ಎಸ್.ಕೆ. ಲಕ್ಷ್ಮೀ, ಚಂದ್ರಶೇಖರಯ್ಯ ಕೆ.ವಿ., ಕೆಳದಿ ಶಿವಪ್ಪ ನಾಯಕ ವಿಶ್ವವಿದ್ಯಾಲಯದ ಶಿಕ್ಷಕರು, ಪ್ರಾಧ್ಯಾಪಕರು ಹಾಗೂ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು, ತರಬೇತುದಾರರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment