ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಂಸದ ಬಿ.ವೈ. ರಾಘವೇಂದ್ರ ಅವರ ನಿರಂತರ ಪ್ರಯತ್ನಕ್ಕೆ ಫಲ; ಶಿವಮೊಗ್ಗ–ಬೆಂಗಳೂರು ಸಂಚಾರಕ್ಕೆ ಹೊಸ ಯುಗ: ₹6,400 ಕೋಟಿ ವೆಚ್ಚದ ಹೆದ್ದಾರಿ ಮುಂದಿನ ಮಾರ್ಚ್‌ಗೆ ಪೂರ್ಣ

On: August 1, 2026 2:25 PM
Follow Us:

214.43 ಕಿ.ಮೀ. ಉದ್ದದ ರಾಷ್ಟ್ರೀಯ ಹೆದ್ದಾರಿ-69 ಕಾಮಗಾರಿ ಅಂತಿಮ ಹಂತದಲ್ಲಿ; ಮೂರು ಪ್ಯಾಕೇಜ್‌ಗಳ ಕೆಲಸ ಬಹುತೇಕ ಪೂರ್ಣ – ಕೇಂದ್ರ ಸಚಿವ ನಿತಿನ್ ಗಡ್ಕರಿ ಮಾಹಿತಿ

ಉಳಿದಿರುವ ಭೂಸ್ವಾಧೀನ ಹಾಗೂ ಯುಟಿಲಿಟಿ ಸ್ಥಳಾಂತರ ಕಾರ್ಯಗಳಿಗೆ ರಾಜ್ಯ ಸರ್ಕಾರ ತ್ವರಿತ ಕ್ರಮ ಕೈಗೊಳ್ಳಬೇಕು: ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

ನವದೆಹಲಿ: ಮಲೆನಾಡು ಮತ್ತು ರಾಜ್ಯ ರಾಜಧಾನಿ ಬೆಂಗಳೂರಿನ ನಡುವಿನ ರಸ್ತೆ ಸಂಪರ್ಕಕ್ಕೆ ಹೊಸ ಆಯಾಮ ನೀಡಲಿರುವ ಶಿವಮೊಗ್ಗ–ತುಮಕೂರು ರಾಷ್ಟ್ರೀಯ ಹೆದ್ದಾರಿ-69 (ಹಳೆಯ ರಾಷ್ಟ್ರೀಯ ಹೆದ್ದಾರಿ-206) ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿ ಅಂತಿಮ ಹಂತ ತಲುಪಿದ್ದು, 2027ರ ಮಾರ್ಚ್ ವೇಳೆಗೆ ಸಂಪೂರ್ಣ ಯೋಜನೆ ಪೂರ್ಣಗೊಳ್ಳಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಲೋಕಸಭೆಯಲ್ಲಿ ಅಧಿಕೃತವಾಗಿ ತಿಳಿಸಿದ್ದಾರೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ಸುಮಾರು ₹6,400 ಕೋಟಿ ಅಂದಾಜು ವೆಚ್ಚದಲ್ಲಿ 214.43 ಕಿಲೋಮೀಟರ್ ಉದ್ದದ ಈ ಮಹತ್ವಾಕಾಂಕ್ಷಿ ಯೋಜನೆಯ ಪ್ರಗತಿ ಕುರಿತು ಸಮಗ್ರ ಮಾಹಿತಿ ನೀಡಿದ್ದಾರೆ.

ಕೇಂದ್ರ ಸರ್ಕಾರ ನೀಡಿರುವ ಮಾಹಿತಿಯಂತೆ, ಯೋಜನೆಯ ಒಟ್ಟು ನಾಲ್ಕು ಹಂತಗಳ ಪೈಕಿ ಮೂರು ಹಂತಗಳ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಈಗಾಗಲೇ 197.42 ಕಿಲೋಮೀಟರ್‌ಗಿಂತ ಹೆಚ್ಚು ರಸ್ತೆ ಕಾಮಗಾರಿ ಪೂರ್ಣಗೊಂಡಿದೆ. ಉಳಿದಿರುವ ಕಾಮಗಾರಿ ಕೂಡ ವೇಗವಾಗಿ ಸಾಗುತ್ತಿದ್ದು, ನಿಗದಿತ ಅವಧಿಯೊಳಗೆ ಪೂರ್ಣಗೊಳ್ಳುವ ವಿಶ್ವಾಸ ವ್ಯಕ್ತಪಡಿಸಲಾಗಿದೆ.

ಯೋಜನೆಯ ಮೊದಲ ಹಂತವಾದ ಮಲ್ಲಸಂದ್ರ–ಕರಡಿ (52.89 ಕಿ.ಮೀ.) ವಿಭಾಗದ ಕಾಮಗಾರಿ ಶೇ.100ರಷ್ಟು ಪೂರ್ಣಗೊಂಡಿದೆ. ಎರಡನೇ ಹಂತವಾದ ಕರಡಿ–ಬಾಣಾವರ (56.70 ಕಿ.ಮೀ.) ಹಾಗೂ ಮೂರನೇ ಹಂತವಾದ ಬಾಣಾವರ–ಬೆಟ್ಟದಹಳ್ಳಿ (48.51 ಕಿ.ಮೀ.) ವಿಭಾಗಗಳಲ್ಲಿ ಶೇ.98ಕ್ಕಿಂತ ಹೆಚ್ಚು ಕಾಮಗಾರಿ ಪೂರ್ಣಗೊಂಡಿದ್ದು, ಈ ರಸ್ತೆಗಳಲ್ಲಿ ಈಗಾಗಲೇ ವಾಹನ ಸಂಚಾರ ಆರಂಭವಾಗಿದೆ.

ಉಳಿದಿರುವ ಬೆಟ್ಟದಹಳ್ಳಿ–ಶಿವಮೊಗ್ಗ (56.33 ಕಿ.ಮೀ.) ವಿಭಾಗದಲ್ಲಿ ಶೇ.83.78ರಷ್ಟು ಭೌತಿಕ ಪ್ರಗತಿ ಸಾಧಿಸಲಾಗಿದ್ದು, ಈ ಹಂತದ ಕಾಮಗಾರಿಯೂ 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಯೋಜನೆಗಾಗಿ ಅಗತ್ಯವಿರುವ 1,271.41 ಹೆಕ್ಟೇರ್ ಭೂಮಿಯಲ್ಲಿ 1,268.33 ಹೆಕ್ಟೇರ್ ಭೂಸ್ವಾಧೀನ ಈಗಾಗಲೇ ಪೂರ್ಣಗೊಂಡಿದ್ದು, ಗುತ್ತಿಗೆದಾರರಿಗೆ ಹಸ್ತಾಂತರಿಸಲಾಗಿದೆ. ಉಳಿದಿರುವ ಭೂಸ್ವಾಧೀನ, ಅರಣ್ಯ ಇಲಾಖೆಯ ಅನುಮತಿಗಳು, ರೈಲ್ವೆ ಮೇಲ್ಸೇತುವೆ (ROB) ಹಾಗೂ ಕೆಳಸೇತುವೆ (RUB) ಕಾಮಗಾರಿಗಳಿಗೆ ಸಂಬಂಧಿಸಿದ ತಾಂತ್ರಿಕ ಅಡೆತಡೆಗಳನ್ನು ‘ಭೂಮಿ ರಾಶಿ’ (Bhoomi Rashi) ಮತ್ತು ‘ಪರಿವೇಶ್’ (Parivesh) ಪೋರ್ಟಲ್‌ಗಳ ಮೂಲಕ ಹಂತ ಹಂತವಾಗಿ ಪರಿಹರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಬೃಹತ್ ರಸ್ತೆ ಯೋಜನೆ ಪೂರ್ಣಗೊಂಡ ಬಳಿಕ ಶಿವಮೊಗ್ಗ–ಬೆಂಗಳೂರು ನಡುವಿನ ಪ್ರಯಾಣದ ಅವಧಿ ಗಣನೀಯವಾಗಿ ಕಡಿಮೆಯಾಗಲಿದ್ದು, ಮಲೆನಾಡು ಭಾಗದ ವ್ಯಾಪಾರ, ಕೃಷಿ ಉತ್ಪನ್ನಗಳ ಸಾಗಾಣಿಕೆ, ಕೈಗಾರಿಕೆ, ಪ್ರವಾಸೋದ್ಯಮ ಹಾಗೂ ಹೂಡಿಕೆ ಅವಕಾಶಗಳಿಗೆ ಮಹತ್ತರ ಉತ್ತೇಜನ ದೊರೆಯಲಿದೆ. ಅಲ್ಲದೆ ತುರ್ತು ವೈದ್ಯಕೀಯ ಸೇವೆ, ಶಿಕ್ಷಣ ಹಾಗೂ ಕೈಗಾರಿಕಾ ಸಂಪರ್ಕವೂ ಮತ್ತಷ್ಟು ಸುಗಮವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಯೋಜನೆ ಆರಂಭವಾದ ದಿನದಿಂದಲೇ ಹೆದ್ದಾರಿ ಕಾಮಗಾರಿ ವೇಗವಾಗಿ ಪೂರ್ಣಗೊಳ್ಳಲು ಕೇಂದ್ರ ಸರ್ಕಾರದೊಂದಿಗೆ ನಿರಂತರ ಸಮನ್ವಯ ಸಾಧಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಈ ಯೋಜನೆ ಮಲೆನಾಡಿನ ಜನರ ಹಲವು ದಶಕಗಳ ಕನಸಾಗಿದ್ದು, ಅದನ್ನು ಸಾಕಾರಗೊಳಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರ ವಿಶೇಷ ಸಹಕಾರ ದೊರೆತಿದೆ ಎಂದು ತಿಳಿಸಿದ್ದಾರೆ.

“ಶಿವಮೊಗ್ಗ–ತುಮಕೂರು ಚತುಷ್ಪಥ ಹೆದ್ದಾರಿ ಮಲೆನಾಡಿನ ಅಭಿವೃದ್ಧಿಗೆ ಹೊಸ ಮೈಲಿಗಲ್ಲು; ಕಾಮಗಾರಿ ಶೀಘ್ರ ಪೂರ್ಣಕ್ಕೆ ರಾಜ್ಯ ಸರ್ಕಾರವೂ ಪೂರ್ಣ ಸಹಕಾರ ನೀಡಬೇಕು” – ಸಂಸದ ಬಿ.ವೈ. ರಾಘವೇಂದ್ರ

“ಶಿವಮೊಗ್ಗ ಜಿಲ್ಲೆಯ ಜನರ ಬಹುಕಾಲದ ಕನಸಾಗಿದ್ದ ಶಿವಮೊಗ್ಗ–ತುಮಕೂರು ಚತುಷ್ಪಥ ಹೆದ್ದಾರಿ ನಿರ್ಮಾಣಕ್ಕೆ ₹6,400 ಕೋಟಿಗೂ ಅಧಿಕ ಅನುದಾನ ನೀಡಿ ಕಾಮಗಾರಿಯನ್ನು ವೇಗವಾಗಿ ಮುನ್ನಡೆಸುತ್ತಿರುವ ಗೌರವಾನ್ವಿತ ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಹಾಗೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರಿಗೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಮಸ್ತ ಜನತೆಯ ಪರವಾಗಿ ಹೃತ್ಪೂರ್ವಕ ಕೃತಜ್ಞತೆ ಸಲ್ಲಿಸುತ್ತೇನೆ. ಈಗ ಕಾಮಗಾರಿ ಅಂತಿಮ ಹಂತದಲ್ಲಿದ್ದು, ಉಳಿದಿರುವ ಭೂಸ್ವಾಧೀನ ಹಾಗೂ ಯುಟಿಲಿಟಿ ಸ್ಥಳಾಂತರ ಕಾರ್ಯಗಳಿಗೆ ರಾಜ್ಯ ಸರ್ಕಾರ ಮತ್ತು ಸ್ಥಳೀಯ ಆಡಳಿತ ತ್ವರಿತವಾಗಿ ಪೂರ್ಣ ಸಹಕಾರ ನೀಡಬೇಕು. ಇದರಿಂದ ಯೋಜನೆಯನ್ನು ನಿಗದಿತ ಅವಧಿಯೊಳಗೆ, ಸಾಧ್ಯವಾದರೆ ಅದಕ್ಕೂ ಮುನ್ನ ಪೂರ್ಣಗೊಳಿಸಿ ಸಾರ್ವಜನಿಕರ ಸೇವೆಗೆ ಮುಕ್ತಗೊಳಿಸಲು ಸಾಧ್ಯವಾಗುತ್ತದೆ,” ಎಂದು ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಸಂಸದರು ರಾಜ್ಯ ಸರ್ಕಾರ ಹಾಗೂ ಸಂಬಂಧಿಸಿದ ಜಿಲ್ಲಾಡಳಿತವು ಬಾಕಿ ಇರುವ ಆಡಳಿತಾತ್ಮಕ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಮೂಲಕ ರಾಷ್ಟ್ರೀಯ ಮಹತ್ವದ ಈ ಯೋಜನೆ ಶೀಘ್ರ ಪೂರ್ಣಗೊಳ್ಳಲು ಅಗತ್ಯ ಸಹಕಾರ ನೀಡಬೇಕೆಂದು ಮತ್ತೊಮ್ಮೆ ಮನವಿ ಮಾಡಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment