ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನೇಕಾರರ ಅಭಿವೃದ್ಧಿಗೆ ಬಿಜೆಪಿ ಬದ್ಧ; ಮತ್ತೆ ಅಧಿಕಾರಕ್ಕೆ ಬಂದರೆ ಹೊಸ ಯೋಜನೆಗಳು: ಬಿ.ವೈ.ವಿಜಯೇಂದ್ರ

On: August 7, 2026 3:28 PM
Follow Us:

  • ರಾಷ್ಟ್ರೀಯ ಕೈಮಗ್ಗ ದಿನಾಚರಣೆಯಲ್ಲಿ ವೃತ್ತಿಪರ ನೇಕಾರರಿಗೆ ಸನ್ಮಾನ
  • ನೇಕಾರರಿಗೆ ಆರ್ಥಿಕ ಶಕ್ತಿ ತುಂಬಿದ ಮೋದಿ ಸರ್ಕಾರ ಎಂದು ಪ್ರಶಂಸೆ
  • ಕೈಮಗ್ಗ ಲಾಭದಾಯಕವಾದರೆ ಮುಂದಿನ ತಲೆಮಾರು ವೃತ್ತಿ ಮುಂದುವರಿಸುತ್ತದೆ
  • ವಿಕಸಿತ ಭಾರತದ ಕನಸು ನನಸಾಗಲು ಗ್ರಾಮೀಣಾಭಿವೃದ್ಧಿಯೂ ಅಗತ್ಯ ಎಂದು ಅಭಿಪ್ರಾಯ

ಬೆಂಗಳೂರು, ಆ.7: ನೇಕಾರ ಸಮುದಾಯಕ್ಕೆ ಆರ್ಥಿಕ ಬಲ ತುಂಬುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೊಳಿಸಿದ್ದು, ಕೈಮಗ್ಗ ಕ್ಷೇತ್ರದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.

ಮಲ್ಲೇಶ್ವರದಲ್ಲಿರುವ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವೃತ್ತಿಪರ ನೇಕಾರರ ಸನ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕೈಮಗ್ಗ ನೇಕಾರರು ಕೇವಲ ಬಟ್ಟೆ ನೇಯುವ ಕೆಲಸ ಮಾಡುವವರಲ್ಲ, ಭಾರತದ ಸಂಸ್ಕೃತಿ, ಪರಂಪರೆ ಮತ್ತು ಕೌಶಲವನ್ನು ಮುಂದಿನ ಪೀಳಿಗೆಗೆ ಕೊಂಡೊಯ್ಯುವ ಶಿಲ್ಪಿಗಳು ಎಂದು ವಿಜಯೇಂದ್ರ ಬಣ್ಣಿಸಿದರು.

ಕೇಂದ್ರ ಸರ್ಕಾರ ನೇಕಾರರ ಬದುಕು ಸುಧಾರಿಸಲು, ಅವರ ಆದಾಯ ಹೆಚ್ಚಿಸಲು ಹಾಗೂ ಉತ್ಪನ್ನಗಳಿಗೆ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಜವಳಿ ಕ್ಷೇತ್ರದಲ್ಲಿ ಕೌಶಲಾಭಿವೃದ್ಧಿ, ಆಧುನಿಕ ತಂತ್ರಜ್ಞಾನ, ಮಾರುಕಟ್ಟೆ ವಿಸ್ತರಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದೆ ಎಂದು ಹೇಳಿದರು.

ಈಗಿನ ಕಾಂಗ್ರೆಸ್ ಸರ್ಕಾರ ಎಷ್ಟೇ ಪ್ರಚಾರ ಮಾಡಿಕೊಂಡರೂ ಜನರ ವಿಶ್ವಾಸ ಕಳೆದುಕೊಂಡಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವುದು ನಿಶ್ಚಿತ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ನೇಕಾರರ ಕಲ್ಯಾಣಕ್ಕಾಗಿ ಇನ್ನಷ್ಟು ಸಮಗ್ರ ಯೋಜನೆಗಳನ್ನು ಜಾರಿಗೊಳಿಸಿ, ಕೈಮಗ್ಗ ಕ್ಷೇತ್ರಕ್ಕೆ ಹೊಸ ಚೈತನ್ಯ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ನೇಕಾರ ಸಮುದಾಯದ ಅಭಿವೃದ್ಧಿಗೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿತ್ತು ಎಂದು ವಿಜಯೇಂದ್ರ ನೆನಪಿಸಿದರು.

“ಅನ್ನ ನೀಡುವ ರೈತ ಒಂದು ಕಣ್ಣಾದರೆ, ಬಟ್ಟೆ ನೀಡುವ ನೇಕಾರ ಮತ್ತೊಂದು ಕಣ್ಣು” ಎಂಬ ಯಡಿಯೂರಪ್ಪ ಅವರ ಮಾತು ಕೇವಲ ಭಾಷಣವಾಗಿರಲಿಲ್ಲ. ಅದಕ್ಕೆ ತಕ್ಕಂತೆ ನೇಕಾರರ ಪರ ಅನೇಕ ಯೋಜನೆಗಳನ್ನು ರೂಪಿಸಿ ಜಾರಿಗೆ ತಂದಿದ್ದರು ಎಂದು ಹೇಳಿದರು.

ಹಿಂದಿನ ಕಾಂಗ್ರೆಸ್ ಸರ್ಕಾರಗಳು ಕೈಮಗ್ಗ ಕ್ಷೇತ್ರವನ್ನು ನಿರ್ಲಕ್ಷಿಸಿದ್ದವು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರು ನೇಕಾರರ ಕೊಡುಗೆಯನ್ನು ಗುರುತಿಸಿ ರಾಷ್ಟ್ರೀಯ ಕೈಮಗ್ಗ ದಿನಾಚರಣೆ ಘೋಷಿಸುವ ಮೂಲಕ ಈ ಕ್ಷೇತ್ರದ ಗೌರವವನ್ನು ಹೆಚ್ಚಿಸಿದ್ದಾರೆ ಎಂದು ಹೇಳಿದರು.

ಕೈಮಗ್ಗ ವೃತ್ತಿ ಕೇವಲ ಉದ್ಯೋಗವಲ್ಲ, ಅದು ಭಾರತದ ಸಾಂಸ್ಕೃತಿಕ ಪರಂಪರೆಯ ಪ್ರತೀಕವಾಗಿದೆ. ಈ ಪರಂಪರೆಯನ್ನು ಉಳಿಸಿ ಬೆಳೆಸುವ ದೃಢ ಸಂಕಲ್ಪವನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದರು.

ದೇಶದಲ್ಲಿ ಎಲ್ಲರಿಗೂ ಐಟಿ, ಎಂಜಿನಿಯರಿಂಗ್ ಅಥವಾ ವೈದ್ಯಕೀಯ ಕ್ಷೇತ್ರದಲ್ಲೇ ಉದ್ಯೋಗ ದೊರೆಯಲು ಸಾಧ್ಯವಿಲ್ಲ. ಗ್ರಾಮೀಣ ಪ್ರದೇಶಗಳಲ್ಲಿ ಲಕ್ಷಾಂತರ ಜನರಿಗೆ ಕೈಮಗ್ಗ, ಕುಲಕಸುಬು ಹಾಗೂ ಸಾಂಪ್ರದಾಯಿಕ ವೃತ್ತಿಗಳೇ ಜೀವನಾಧಾರವಾಗಿವೆ ಎಂದು ವಿಜಯೇಂದ್ರ ಹೇಳಿದರು.

ಈ ಕ್ಷೇತ್ರಗಳು ಉಳಿಯಬೇಕಾದರೆ ಬ್ಯಾಂಕ್ ಸಾಲ, ವಿದ್ಯುತ್ ಸಹಾಯಧನ, ಕಚ್ಚಾ ವಸ್ತುಗಳ ಲಭ್ಯತೆ ಹಾಗೂ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಬೇಕು. ರಾಜ್ಯ ಸರ್ಕಾರ ಈ ದಿಸೆಯಲ್ಲಿ ಅಗತ್ಯ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.

ಯಾವುದೇ ವೃತ್ತಿ ಆರ್ಥಿಕವಾಗಿ ಲಾಭದಾಯಕವಾಗಿದ್ದರೆ ಮಾತ್ರ ಯುವಕರು ಹಾಗೂ ಮುಂದಿನ ತಲೆಮಾರು ಅದನ್ನು ಮುಂದುವರಿಸುತ್ತಾರೆ. ನೇಕಾರರಿಗೆ ಉತ್ತಮ ಬೆಲೆ, ಖಚಿತ ಮಾರುಕಟ್ಟೆ ಹಾಗೂ ಸರ್ಕಾರದ ಬೆಂಬಲ ದೊರೆತರೆ ಕೈಮಗ್ಗ ಕ್ಷೇತ್ರ ಮತ್ತಷ್ಟು ಅಭಿವೃದ್ಧಿಯಾಗಲಿದೆ ಎಂದು ಹೇಳಿದರು.

ವಿಕಸಿತ ಭಾರತ ನಿರ್ಮಾಣವಾಗಬೇಕಾದರೆ ಕೇವಲ ನಗರಗಳ ಅಭಿವೃದ್ಧಿ ಸಾಕಾಗುವುದಿಲ್ಲ. ಗ್ರಾಮಗಳೂ ಆರ್ಥಿಕವಾಗಿ ಸದೃಢವಾಗಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯವಾಗಿದೆ ಎಂದು ವಿಜಯೇಂದ್ರ ಹೇಳಿದರು.

ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ದೇಶಾದ್ಯಂತ 11 ಕೋಟಿಗೂ ಅಧಿಕ ಶೌಚಾಲಯಗಳನ್ನು ನಿರ್ಮಿಸಿದೆ. 25 ಕೋಟಿಗೂ ಹೆಚ್ಚು ಜನರನ್ನು ಬಡತನ ರೇಖೆಯಿಂದ ಮೇಲಕ್ಕೆ ತಂದಿದೆ. 12 ಕೋಟಿಗೂ ಹೆಚ್ಚು ಕುಟುಂಬಗಳಿಗೆ ಉಜ್ವಲ ಯೋಜನೆಯಡಿ ಅಡುಗೆ ಅನಿಲ ಸಂಪರ್ಕ ಒದಗಿಸಲಾಗಿದೆ. ಮುದ್ರಾ ಯೋಜನೆಯಡಿ ಕೋಟ್ಯಂತರ ಸಣ್ಣ ಉದ್ಯಮಿಗಳಿಗೆ ಸಾಲ ಸೌಲಭ್ಯ ಕಲ್ಪಿಸಲಾಗಿದೆ ಎಂದು ವಿವರಿಸಿದರು.

ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ, ಆತ್ಮನಿರ್ಭರ ಭಾರತ ಸೇರಿದಂತೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳ ಮೂಲಕ ಯುವಕರಿಗೆ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಸೇವಕನಾಗಿ ವಿಶ್ರಾಂತಿಯಿಲ್ಲದೆ ದುಡಿಯುತ್ತಿದ್ದು, ಭಾರತವನ್ನು ವಿಶ್ವದ ಮುಂಚೂಣಿ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಪ್ರಶಂಸಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್, ಮಾಜಿ ಶಾಸಕ ಎಂ.ಡಿ. ಲಕ್ಷ್ಮೀನಾರಾಯಣ್, ಬಿಜೆಪಿ ಪ್ರಕೋಷ್ಠಗಳ ರಾಜ್ಯ ಸಂಚಾಲಕ ಎಸ್. ದತ್ತಾತ್ರೇಯ, ನೇಕಾರರ ಪ್ರಕೋಷ್ಠದ ರಾಜ್ಯ ಸಂಚಾಲಕ ಬಿ.ಎಸ್. ಸೋಮಶೇಖರ್, ಬೆಂಗಳೂರು ಉತ್ತರ ಜಿಲ್ಲಾ ಅಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾ ಅಧ್ಯಕ್ಷ ಸಪ್ತಗಿರಿ ಗೌಡ, ಬಿಬಿಎಂಪಿ ಮಾಜಿ ಸದಸ್ಯ ಶಿವಕುಮಾರ್ (ಚಿಕ್ಕಪೇಟೆ) ಸೇರಿದಂತೆ ಪಕ್ಷದ ಮುಖಂಡರು, ನೇಕಾರರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment