ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆಗಸ್ಟ್‌ 8ರಂದು ನೆಲಮಂಗಲದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ

On: August 7, 2026 9:49 PM
Follow Us:

ರಾಜ್ಯದ ಮೂಲೆ-ಮೂಲೆಗಳಿಂದ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ರಾಜ್ಯಾಧ್ಯಕ್ಷ ಬಂಗ್ಲೆ ಮಲ್ಲಿಕಾರ್ಜುನ ಕರೆ

ಬೆಂಗಳೂರು, ಆ.7: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ವತಿಯಿಂದ ಆಗಸ್ಟ್‌ 8ರಂದು (ಶನಿವಾರ) ಬೆಳಿಗ್ಗೆ 10.30ಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿರುವ ಪುಷ್ಪ ಬೈರೇಗೌಡ ಕನ್ವೆನ್ಷನ್ ಹಾಲ್‌ನಲ್ಲಿ 4ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಆಯೋಜಿಸಲಾಗಿದೆ ಎಂದು ಸಂಘಟನೆಯ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ ತಿಳಿಸಿದ್ದಾರೆ.

ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕುಗಳು ಹಾಗೂ ಹೋಬಳಿ ಮಟ್ಟದ ಪತ್ರಕರ್ತರು, ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸಮ್ಮೇಳನವನ್ನು ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆ ರಾಜ್ಯದಾದ್ಯಂತ ಪತ್ರಕರ್ತರ ಹಿತಾಸಕ್ತಿಗಾಗಿ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ರಕರ್ತರ ಕಲ್ಯಾಣ, ವೃತ್ತಿ ಭದ್ರತೆ ಹಾಗೂ ಮೂಲಭೂತ ಸೌಲಭ್ಯಗಳಿಗಾಗಿ ಹಲವು ಹೋರಾಟಗಳು ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬರುತ್ತಿದೆ. ಪತ್ರಕರ್ತರಿಗೆ ಉಚಿತ ಬಸ್‌ಪಾಸ್‌, ನಿವೇಶನ, ಆರೋಗ್ಯ ಸೌಲಭ್ಯ, ವಿಮೆ ಸೇರಿದಂತೆ ವಿವಿಧ ಕಲ್ಯಾಣ ಯೋಜನೆಗಳನ್ನು ಜಾರಿಗೊಳಿಸುವಂತೆ ಸರ್ಕಾರವನ್ನು ಸಂಘಟನೆ ನಿರಂತರವಾಗಿ ಆಗ್ರಹಿಸುತ್ತಿದೆ ಎಂದು ತಿಳಿಸಿದ್ದಾರೆ.

ಈ ರಾಜ್ಯ ಸಮ್ಮೇಳನದಲ್ಲಿ ಪತ್ರಕರ್ತರ ಸಮಸ್ಯೆಗಳು, ಕಲ್ಯಾಣ ಯೋಜನೆಗಳು, ವೃತ್ತಿಪರ ಸವಾಲುಗಳು, ಸಂಘಟನಾ ಬಲವರ್ಧನೆ ಹಾಗೂ ಮುಂದಿನ ಹೋರಾಟಗಳ ರೂಪುರೇಷೆಗಳ ಕುರಿತು ಸಮಗ್ರ ಚರ್ಚೆ ನಡೆಯಲಿದೆ. ರಾಜ್ಯದ ಮೂಲೆ-ಮೂಲೆಗಳಿಂದ ಆಗಮಿಸುವ ಪತ್ರಕರ್ತರ ಸಕ್ರಿಯ ಭಾಗವಹಿಸುವಿಕೆಯಿಂದ ಸಮ್ಮೇಳನವು ಯಶಸ್ವಿಯಾಗಲಿದ್ದು, ಎಲ್ಲ ಪತ್ರಕರ್ತ ಬಂಧುಗಳು ತಪ್ಪದೇ ಪಾಲ್ಗೊಂಡು ಸಂಘಟನೆಯ ಬಲವರ್ಧನೆಗೆ ಕೈಜೋಡಿಸಬೇಕು ಎಂದು ಬಂಗ್ಲೆ ಮಲ್ಲಿಕಾರ್ಜುನ ಮನವಿ ಮಾಡಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಗುಡ್ಡೆಕಲ್ಲು ಜಾತ್ರಾ ಮಹೋತ್ಸವ: ಮಾಜಿ ಶಾಸಕ ಕೆ.ಬಿ. ಪ್ರಸನ್ನ ಕುಮಾರ್ ಹಾಗೂ ಜೆಡಿಎಸ್ ನಾಯಕರಿಂದ ಶ್ರೀ ಬಾಲಸುಬ್ರಮಣ್ಯ ಸ್ವಾಮಿಗೆ ವಿಶೇಷ ಪೂಜೆ

ನೇಕಾರರ ಅಭಿವೃದ್ಧಿಗೆ ಬಿಜೆಪಿ ಬದ್ಧ; ಮತ್ತೆ ಅಧಿಕಾರಕ್ಕೆ ಬಂದರೆ ಹೊಸ ಯೋಜನೆಗಳು: ಬಿ.ವೈ.ವಿಜಯೇಂದ್ರ

ಎಂಎಲ್‌ಸಿ ಡಿ.ಎಸ್. ಅರುಣ್ ನೇತೃತ್ವದಲ್ಲಿ ರಾಷ್ಟ್ರಪತಿ ಭವನಕ್ಕೆ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ 17 ಸದಸ್ಯರ ನಿಯೋಗ ಭೇಟಿ

ಗುಡ್ಡೆಕಲ್ಲಿನ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ: ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರಿಂದ ವಿಶೇಷ ಪೂಜೆ, ಸ್ವಾಮಿಯ ದರ್ಶನ

ಆಗಸ್ಟ್ 10ರಂದು ದೇಶಾದ್ಯಂತ ‘ಜೈಲ್ ಭರೋ’ ಚಳುವಳಿ: ಶಿವಮೊಗ್ಗದಲ್ಲಿ ಬೃಹತ್ ಪ್ರತಿಭಟನೆಗೆ ಹೆಚ್.ಆರ್. ಬಸವರಾಜಪ್ಪ ಕರೆ

SIR: ಮತದಾರರ ಪಟ್ಟಿಯಿಂದ 1.11 ಕೋಟಿ ಹೆಸರು ಡಿಲೀಟ್ ಪ್ರಕ್ರಿಯೆಯಲ್ಲಿ; ನಿಮ್ಮ ಹೆಸರಿದೆಯೇ? ಹೀಗೆ ಚೆಕ್ ಮಾಡಿ, ತಪ್ಪಿದ್ದರೆ ಸರಿಪಡಿಸಿ

Leave a Comment