ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

”ಬಿಜೆಪಿಯಿಂದ 55 ಕಾಂಗ್ರೆಸ್ಶಾಸಕರಿಗೆಗಾಳ : ಇದು ‘ಆಪರೇಷನ್‌ ಕೈ-ಕೈ’ ಅಲ್ಲ, ‘ಕಮಲ’’

On: July 14, 2025 10:03 PM
Follow Us:

ರಾಜ್ಯದಲ್ಲಿ ಆಪರೇಷನ್ಕಮಲಕ್ಕೆ ಯತ್ನ ನಡೆಯುತ್ತಿದೆ. ಬಿಜೆಪಿಯ ಹೈಕಮಾಂಡ್‌ 55 ಕಾಂಗ್ರೆಸ್ ಶಾಸಕರ ಹೆಸರನ್ನು ಲಿಸ್ಟ್ ಮಾಡಿದೆ. ಕಾಂಗ್ರೆಸ್ಶಾಸಕರ ಮನೆಗಳಿಗೆ ಬಿಜೆಪಿ ಏಜೆಂಟರನ್ನೂ ಕಳಿಸಲಾಗುತ್ತಿದೆ.

ಬಾಗಲಕೋಟೆ : ‘ರಾಜ್ಯದಲ್ಲಿ ಆಪರೇಷನ್‌ ಕಮಲಕ್ಕೆ ಯತ್ನ ನಡೆಯುತ್ತಿದೆ. ಬಿಜೆಪಿಯ ಹೈಕಮಾಂಡ್‌ 55 ಕಾಂಗ್ರೆಸ್ ಶಾಸಕರ ಹೆಸರನ್ನು ಲಿಸ್ಟ್ ಮಾಡಿದೆ. ಈ ಕಾಂಗ್ರೆಸ್‌ ಶಾಸಕರ ಮನೆಗಳಿಗೆ ಬಿಜೆಪಿ ಏಜೆಂಟರನ್ನೂ ಕಳಿಸಲಾಗುತ್ತಿದೆ. ಬಿಜೆಪಿ ಸೇರಿ, ಇಲ್ಲದಿದ್ದರೆ ನಿಮ್ಮ ಮೇಲೆ ಸಿಬಿಐ, ಇ,ಡಿ.ದಾಳಿ ಮಾಡಿಸುವುದಾಗಿ ಏಜೆಂಟರ ಮೂಲಕ ನಮ್ಮ ಶಾಸಕರಿಗೆ ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ, ನನ್ನನ್ನೂ ಸೇರಿ ನಮ್ಮೆಲ್ಲಾ ಕಾಂಗ್ರೆಸ್‌ ಶಾಸಕರಿಗೆ ಭಯ ಇದೆ’ ಎಂದು ಹುನಗುಂದ ಕಾಂಗ್ರೆಸ್‌ ಶಾಸಕ ವಿಜಯಾನಂದ ಕಾಶಪ್ಪನವರ ಹೊಸ ಬಾಂಬ್‌ ಸಿಡಿಸಿದ್ದಾರೆ.

ಬಾಗಲಕೋಟೆ ಜಿಲ್ಲೆ ಹುನಗುಂದದಲ್ಲಿ ಶನಿವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಕಾಂಗ್ರೆಸ್‌ನಲ್ಲಿ ಡಿಕೆಶಿ ಮತ್ತು ಸಿದ್ದು ಬಣದಿಂದ ಕುದುರೆ ವ್ಯಾಪಾರ ನಡೆಯುತ್ತಿದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ತಿರುಗೇಟು ನೀಡಿದ ಕಾಶಪ್ಪನವರ, ಬಿಜೆಪಿ ವಿರುದ್ಧ ಟೀಕಾಪ್ರಹಾರ ನಡೆಸಿದರು.

ಬಿಜೆಪಿ ಹೈಕಮಾಂಡ್‌ ಹತ್ತಿರ ಕಾಂಗ್ರೆಸ್‌ನ 55 ಶಾಸಕರ ಟಾರ್ಗೆಟ್ ಲಿಸ್ಟ್ ಇದೆ. ಅದರಲ್ಲಿ ನಾನು ಇದ್ದರೂ ಇರಬಹುದು. ಕಾಂಗ್ರೆಸ್‌ನ 55 ಮಂದಿ ಶಾಸಕರ ಪಟ್ಟಿಯನ್ನು ಬಿಜೆಪಿಗರು ಮಾಡಿದ್ದಾರೆ. ಆ 55 ಶಾಸಕರಿಗೆ ಸಿಬಿಐ, ಇ.ಡಿ.(ಜಾರಿ ನಿರ್ದೇಶನಾಲಯ) ದಾಳಿ ನಡೆಸುವ ಬೆದರಿಕೆ ಹಾಕುತ್ತಿದ್ದಾರೆ. ಈಗಾಗಲೇ ಬಿಜೆಪಿಯವರು ಆ ಶಾಸಕರ ಮನೆಗಳಿಗೆ ತಮ್ಮ ಏಜೆಂಟರನ್ನು ಕಳಿಸಿ, ಬೆದರಿಕೆ ಹಾಕಿದ್ದಾರೆ. ಬಿಜೆಪಿಗೆ ಬನ್ನಿ, ಬರದೆ ಹೋದರೆ ಸಿಬಿಐ, ಇಡಿ ದಾಳಿ ಮಾಡಿಸಿ, ನಿಮ್ಮ ಅಕ್ರಮ ಆಸ್ತಿ ಹೊರಗೆ ಎಳೆಸುತ್ತೇವೆ ಎನ್ನುತ್ತಿದ್ದಾರೆ. ಆ ಲಿಸ್ಟ್‌ನಲ್ಲಿ ನಾನು ಇದ್ದರೂ ಇರಬಹುದು. ಹೀಗಾಗಿ, ನಮ್ಮ ಶಾಸಕರಿಗೆ ಈ ಬಗ್ಗೆ ಭಯ ಇದೆ ಎಂದರು.

ಆದರೆ, ಬಿಜೆಪಿಯವರ ಇಂತಹ ಬೆದರಿಕೆಗೆ ನಾನು ಹೆದರುವವನಲ್ಲ. ಅವರು ನನ್ನನ್ನು ಏನು ಮಾಡಲೂ ಸಾಧ್ಯವಿಲ್ಲ. ನನ್ನ ಮೇಲೆ ಇ.ಡಿ. ಸೇರಿ ಯಾವುದೇ ದಾಳಿ ಮಾಡಿದರೂ ನಾನು ಅದನ್ನು ಎದುರಿಸಲು ಸಜ್ಜಾಗಿದ್ದೇನೆ. ಮೊನ್ನೆಯಷ್ಟೇ, ನಮ್ಮ ಬಳ್ಳಾರಿ ಜಿಲ್ಲೆಯ ಶಾಸಕರಾದ ಭರತ್‌ ರೆಡ್ಡಿ, ತುಕಾರಾಮ್, ನಾಗೇಂದ್ರ ಅವರ ಮನೆಗಳ ಮೇಲೆ ದಾಳಿ ಮಾಡಿಸಿದರು. ಇವೆಲ್ಲ ಉದ್ದೇಶಪೂರ್ವಕ, ದ್ವೇಷದ, ಕುತಂತ್ರ ರಾಜಕಾರಣ ಎಂದು ಅವರು ದೂರಿದರು.

ಬಿಜೆಪಿಯವರು ಒಮ್ಮೆಯಾದರೂ ಸ್ಪಷ್ಟ ಬಹುಮತದಿಂದ ಅಧಿಕಾರಕ್ಕೆ ಬಂದಿದ್ದಾರಾ?. ಸಮ್ಮಿಶ್ರ ಸರ್ಕಾರ, ಹಿಂಬಾಗಿಲಿನಿಂದ ಬಿಜೆಪಿಯವರು ಅಧಿಕಾರಕ್ಕೆ ಬಂದಿದ್ದಾರೆ. ಬಿಜೆಪಿಯವರಿಗೆ ತಾಕತ್, ಧಮ್ ಇದ್ರೆ 2028ಕ್ಕೆ ಜನರ ಬಹುಮತದಿಂದ ಗೆದ್ದು ಬಂದು, ಅಧಿಕಾರ ಹಿಡಿಯಲಿ ಎಂದು ಅವರು ಸವಾಲು ಹಾಕಿದರು.

ಕಳೆದ ಬಾರಿ ಶಾಸಕರನ್ನು ಖರೀದಿಸಿ ಅಧಿಕಾರಕ್ಕೆ ಬಂದರು. ತಾವು ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬರುವುದಿಲ್ಲ ಎಂಬುದು ಬಿಜೆಪಿಯವರಿಗೆ ಗೊತ್ತಾಗಿದೆ. ಹೀಗಾಗಿ, ಅವರು ಕುತಂತ್ರ ರಾಜಕಾರಣವನ್ನೇ ಮಾಡಬೇಕು ಎಂದು ಆರೋಪಿಸಿದರು.

ಕಾಂಗ್ರೆಸ್ಸಲ್ಲಿಕೈಕೈಆಪರೇಷನ್

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಡಿಕೆಶಿ ಮತ್ತು ಸಿದ್ದು ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಶಾಸಕರ ಬೆಂಬಲ ಹೆಚ್ಚಿಸಿಕೊಳ್ಳಲು ಕಸರತ್ತು ನಡೆಯುತ್ತಿದೆ. ಹೀಗಾಗಿ, ಡಿಕೆಶಿ ಮತ್ತು ಸಿದ್ದು ಬಣಗಳು ಉಭಯ ಬಣಗಳ ಶಾಸಕರನ್ನು ಸೆಳೆದುಕೊಳ್ಳಲ ಕುದುರೆ ವ್ಯಾಪಾರ ನಡೆಸುತ್ತಿವೆ.

K.M.Sathish Gowda

Join WhatsApp

Join Now

Facebook

Join Now

Leave a Comment