ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಸಂಸದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬ: ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಅಭಿಮಾನಿಗಳಿಂದ ವಿಶೇಷ ಪೂಜೆ

On: August 16, 2026 12:13 PM
Follow Us:

ಶಿವಮೊಗ್ಗ: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ನಗರದ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಹಾಗೂ ಬಿಜೆಪಿ ಮುಖಂಡರು ವಿಶೇಷ ಪೂಜೆ ಸಲ್ಲಿಸಿ, ಸಂಸದರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಯಶಸ್ಸು ಕರುಣಿಸುವಂತೆ ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಬಳ್ಳೇಕೆರೆ ಸಂತೋಷ್, ಸಂಸದ ಬಿ.ವೈ. ರಾಘವೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿರುವ ಜನಪರ ನಾಯಕರು. ಜಿಲ್ಲೆಯ ಮೂಲಸೌಕರ್ಯ, ರೈಲ್ವೆ, ರಸ್ತೆ, ವಿಮಾನಯಾನ, ಶಿಕ್ಷಣ, ಆರೋಗ್ಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು ತರಲು ಅವರು ವಿಶೇಷ ಪ್ರಯತ್ನ ನಡೆಸಿದ್ದಾರೆ.

ಸಂಸದರ ದೂರದೃಷ್ಟಿಯ ನಾಯಕತ್ವದಿಂದ ಶಿವಮೊಗ್ಗ ಜಿಲ್ಲೆ ಅಭಿವೃದ್ಧಿಯ ಹೊಸ ಹಾದಿಯಲ್ಲಿ ಸಾಗುತ್ತಿದೆ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಗುಣ, ಅಭಿವೃದ್ಧಿ ಕಾರ್ಯಗಳ ಬಗ್ಗೆ ಇರುವ ಬದ್ಧತೆ ಹಾಗೂ ಕೇಂದ್ರ ಸರ್ಕಾರದ ಮಟ್ಟದಲ್ಲಿ ಜಿಲ್ಲೆಗೆ ಹೆಚ್ಚಿನ ಯೋಜನೆಗಳನ್ನು ತರಲು ನಡೆಸುತ್ತಿರುವ ಪ್ರಯತ್ನಗಳು ಶ್ಲಾಘನೀಯವಾಗಿವೆ ಎಂದು ಹೇಳಿದರು.

ಬಿ.ವೈ. ರಾಘವೇಂದ್ರ ಅವರಿಗೆ ಶ್ರೀ ಗಣಪತಿ ದೇವರ ಆಶೀರ್ವಾದ ಸದಾ ಇರಲಿ. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಶಕ್ತಿ ದೊರೆಯಲಿ. ಮುಂದಿನ ದಿನಗಳಲ್ಲಿಯೂ ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಅವರು ಮತ್ತಷ್ಟು ಮಹತ್ವದ ಕೊಡುಗೆ ನೀಡುವಂತಾಗಲಿ. ಜನರ ಆಶೋತ್ತರಗಳಿಗೆ ಸ್ಪಂದಿಸುತ್ತಾ ಇನ್ನಷ್ಟು ಜನಪರ ಹಾಗೂ ಅಭಿವೃದ್ಧಿಪರ ಕಾರ್ಯಗಳನ್ನು ಕೈಗೊಳ್ಳಲಿ ಎಂದು ಸಂತೋಷ್ ಶುಭ ಹಾರೈಸಿದರು.

ವಿಶೇಷ ಪೂಜೆಯ ಬಳಿಕ ಮಾತನಾಡಿದ ಬಿಜೆಪಿ ಹಿರಿಯ ಮುಖಂಡ ಎಸ್. ದತ್ತಾತ್ರಿ, ಶಿವಮೊಗ್ಗ ಕ್ಷೇತ್ರವು ಇಂದು ಅಭಿವೃದ್ಧಿಯ ವಿವಿಧ ಕ್ಷೇತ್ರಗಳಲ್ಲಿ ಮುನ್ನಡೆಯಲು ಸಂಸದ ಬಿ.ವೈ. ರಾಘವೇಂದ್ರ ಅವರ ದೂರದೃಷ್ಟಿ, ಬದ್ಧತೆ ಹಾಗೂ ನಿರಂತರ ಪರಿಶ್ರಮ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು.

ಶಿವಮೊಗ್ಗ ಜಿಲ್ಲೆ ಇಂದು ಶೈಕ್ಷಣಿಕ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಕೇಂದ್ರವಾಗಿ ಬೆಳೆಯುತ್ತಿದೆ. ಸರ್ಕಾರಿ ಹಾಗೂ ಖಾಸಗಿ ವೈದ್ಯಕೀಯ ಕಾಲೇಜುಗಳು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳು, ನರ್ಸಿಂಗ್ ಸೇರಿದಂತೆ ವಿವಿಧ ಶೈಕ್ಷಣಿಕ ಸಂಸ್ಥೆಗಳ ಬೆಳವಣಿಗೆಯಿಂದ ಶಿವಮೊಗ್ಗ ಮಾತ್ರವಲ್ಲದೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಉತ್ತರ ಕನ್ನಡ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳ ಸಾವಿರಾರು ಜನರಿಗೆ ಉತ್ತಮ ಶಿಕ್ಷಣ ಮತ್ತು ಆರೋಗ್ಯ ಸೇವೆ ದೊರೆಯುತ್ತಿದೆ ಎಂದು ತಿಳಿಸಿದರು.

ರೈಲ್ವೆ, ಹೆದ್ದಾರಿ ಹಾಗೂ ಸಾರಿಗೆ ಕ್ಷೇತ್ರದಲ್ಲಿಯೂ ಜಿಲ್ಲೆ ಗಮನಾರ್ಹ ಪ್ರಗತಿ ಸಾಧಿಸಿದೆ. ಹಿಂದೆ ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲು 6-7 ಗಂಟೆಗಳ ಕಾಲ ಬೇಕಾಗುತ್ತಿತ್ತು. ಇಂದು ಉತ್ತಮ ರಸ್ತೆ ಸಂಪರ್ಕ ಹಾಗೂ ಸಾರಿಗೆ ವ್ಯವಸ್ಥೆಯಿಂದ ಸುಮಾರು ಮೂರೂವರೆ ಗಂಟೆಗಳಲ್ಲಿ ಬೆಂಗಳೂರನ್ನು ತಲುಪುವ ಪರಿಸ್ಥಿತಿ ನಿರ್ಮಾಣವಾಗಿದೆ. ಸಿಗಂದೂರು ಸೇತುವೆ ಸೇರಿದಂತೆ ಹಲವು ಪ್ರಮುಖ ಮೂಲಸೌಕರ್ಯ ಯೋಜನೆಗಳು ಜಿಲ್ಲೆಯ ಅಭಿವೃದ್ಧಿಗೆ ಹೊಸ ವೇಗ ನೀಡಿವೆ ಎಂದು ದತ್ತಾತ್ರಿ ಹೇಳಿದರು.

ಶಿವಮೊಗ್ಗ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೂ ಹೆಚ್ಚಿನ ಒತ್ತು ನೀಡಲಾಗುತ್ತಿದ್ದು, ವಿವಿಧ ಪ್ರವಾಸಿ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ ಮೂಲಕ ಪ್ರವಾಸೋದ್ಯಮದ ಬೆಳವಣಿಗೆಗೆ ಸಹಕಾರಿಯಾಗುತ್ತಿದೆ. ಇಂತಹ ಅಭಿವೃದ್ಧಿ ಕಾರ್ಯಗಳ ಹಿಂದೆ ಸಂಸದ ಬಿ.ವೈ. ರಾಘವೇಂದ್ರ ಅವರ ನಿರಂತರ ಪ್ರಯತ್ನವಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರಧಾನಿ ನರೇಂದ್ರ ಮೋದಿ ಅವರ ‘ವಿಕಸಿತ ಭಾರತ’ದ ಸಂಕಲ್ಪವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರಾಘವೇಂದ್ರ ಅವರಂತಹ ಅಭಿವೃದ್ಧಿಪರ ಹಾಗೂ ಅನುಭವಿ ನಾಯಕರ ಕೊಡುಗೆ ರಾಜ್ಯದಷ್ಟೇ ಅಲ್ಲದೆ ರಾಷ್ಟ್ರಮಟ್ಟದಲ್ಲಿಯೂ ಅಗತ್ಯವಿದೆ. ಹೀಗಾಗಿ ಅವರಿಗೆ ಶೀಘ್ರದಲ್ಲೇ ಕೇಂದ್ರ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಲಭಿಸಲಿ ಎಂಬುದು ಜಿಲ್ಲೆಯ ಜನತೆ ಹಾಗೂ ಬಿಜೆಪಿ ಕಾರ್ಯಕರ್ತರ ಆಶಯವಾಗಿದೆ ಎಂದು ಎಸ್. ದತ್ತಾತ್ರಿ ಆಶಿಸಿದರು.


ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್ ಮಾತನಾಡಿ, ನಮ್ಮ ನೆಚ್ಚಿನ ನಾಯಕ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ ಅವರಿಗೆ ದೇವರು ಉತ್ತಮ ಆಯುಷ್ಯ, ಆರೋಗ್ಯ ಹಾಗೂ ಜನಸೇವೆಗೆ ಇನ್ನಷ್ಟು ಶಕ್ತಿ ನೀಡಲಿ ಎಂದು ಪ್ರಾರ್ಥಿಸಲು ನಾವೆಲ್ಲರೂ ಒಂದಾಗಿದ್ದೇವೆ ಎಂದರು.

‘ಅಭಿವೃದ್ಧಿ’ ಎಂಬ ಪದಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅವರ ಕಾರ್ಯವೈಖರಿಯೇ ಸಾಕ್ಷಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನಿಸುತ್ತಿದ್ದು, ಹಲವು ಮಹತ್ವದ ಯೋಜನೆಗಳು ಜಿಲ್ಲೆಗೆ ದೊರೆಯಲು ಕಾರಣರಾಗಿದ್ದಾರೆ ಎಂದು ಹೇಳಿದರು.

ರೈಲ್ವೆ, ರಸ್ತೆ, ವಿಮಾನಯಾನ, ಶಿಕ್ಷಣ, ಆರೋಗ್ಯ, ಪ್ರವಾಸೋದ್ಯಮ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಶಿವಮೊಗ್ಗವನ್ನು ಮುಂಚೂಣಿ ಜಿಲ್ಲೆಯನ್ನಾಗಿ ರೂಪಿಸುವಲ್ಲಿ ಸಂಸದರ ಪಾತ್ರ ಮಹತ್ವದ್ದಾಗಿದೆ. ಅವರ ಜನ್ಮದಿನದಂದು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸಂಭ್ರಮಿಸುವುದರ ಜೊತೆಗೆ, ಅವರ ಜನಪರ ಸೇವಾ ಕಾರ್ಯಗಳಿಗೆ ಬೆಂಬಲವಾಗಿ ನಿಲ್ಲುವ ಸಂಕಲ್ಪ ಮಾಡಬೇಕು ಎಂದು ಜಗದೀಶ್ ಹೇಳಿದರು.

ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಅಂಗವಾಗಿ ಇಂದು ಸಂಜೆ ಬಂಟರ ಭವನದಲ್ಲಿ ಅಭಿಮಾನಿಗಳು, ಸ್ನೇಹಿತರು ಹಾಗೂ ಪಕ್ಷದ ವತಿಯಿಂದ ಬೃಹತ್ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಶಿವಮೊಗ್ಗದ ನಾಗರಿಕರು, ಬಿಜೆಪಿ ಕಾರ್ಯಕರ್ತರು ಹಾಗೂ ಸಂಸದರ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಕೆ. ಜಗದೀಶ್ ಮನವಿ ಮಾಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ, ಮಾಜಿ ವಿಧಾನ ಪರಿಷತ್ ಸದಸ್ಯ ಸಿದ್ದರಾಮಣ್ಣ, ಎಸ್. ದತ್ತಾತ್ರಿ, ಬಳ್ಳೇಕೆರೆ ಸಂತೋಷ್, ಮೋಹನ್ ರೆಡ್ಡಿ, ಮಾಲತೇಶ್, ತಮ್ಮಡಿಹಳ್ಳಿ ನಾಗರಾಜ್, ಹರಿಕೃಷ್ಣ, ಅನಿತಾ ರವಿಶಂಕರ್, ಸುರೇಖಾ ಮುರಳೀಧರ್, ಮಾಧ್ಯಮ ಸಂಚಾಲಕ ಚಂದ್ರಶೇಖರ್, ಮಂಜುನಾಥ್ ಎನ್., ರಾಜಶೇಖರ್ ಹೆಚ್.ಕೆ., ಐಡಿಯಲ್ ಗೋಪಿ, ಮಲ್ಲಿಕಾರ್ಜುನ ಸ್ವಾಮಿ, ಭವಾನಿ ಮೋರೆ, ಬಾಬಿ ನಾಯ್ಡು, ದಿವಾಕರ್, ಉಮಾಶಂಕರ್, ವಿಜಯಕುಮಾರ್, ವಿಕ್ರಮ್, ದಿನೇಶ್, ಕಾಮತ್, ಉಮೇಶ್ ಕತ್ತಿಗೆ, ಉಮೇಶ್ ಹಿರೇಮಠ ಸೇರಿದಂತೆ ಬಿಜೆಪಿ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಬಿ.ವೈ. ರಾಘವೇಂದ್ರ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಸ್ವಾತಂತ್ರ್ಯವೆಂದರೆ ಬಂಧನಗಳಿಂದ ಮುಕ್ತಿ ಮಾತ್ರವಲ್ಲ; ಜವಾಬ್ದಾರಿಯುತವಾಗಿ ಬದುಕುವ ಅವಕಾಶ: ಶ್ರೀ ರಂಭಾಪುರಿ ಜಗದ್ಗುರುಗಳು

ಶಿಸ್ತು, ಸಾಹಸ, ದೇಶಪ್ರೇಮದ ಸಂಗಮ: ಸಿರಿಗೆರೆಯಲ್ಲಿ ಅದ್ಧೂರಿ ಸ್ವಾತಂತ್ರ್ಯೋತ್ಸವ

ತ್ಯಾಜವಳ್ಳಿಯಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ; ಗ್ರಾಮದ ಸಮಗ್ರ ಅಭಿವೃದ್ಧಿಗೆ ಸಹಕಾರದ ಶಕ್ತಿ, ರೈತರ ಸಮೃದ್ಧಿಗೆ ನೀರಾವರಿ ಅಗತ್ಯ: ಸತೀಶ್ ಮುಂಚೆಮನೆ

ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಸ್ಮರಿಸಿ ಸದೃಢ ಭಾರತ ನಿರ್ಮಾಣಕ್ಕೆ ಸಂಕಲ್ಪ; ಬಲಿದಾನಿಗಳ ಕನಸಿನ ಬಲಿಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸೋಣ: ಜಗದೀಶ್ ಎನ್.ಕೆ.

ಯುವಶಕ್ತಿ, ಸಪ್ತಧಾರೆ, ಆತ್ಮನಿರ್ಭರತೆ: 2047ರ ವಿಕಸಿತ ಭಾರತದ ಕನಸಿಗೆ ಪ್ರಧಾನಿ ಮೋದಿ ಹೊಸ ರೂಪುರೇಷೆ

ವಿದ್ಯಾರ್ಥಿಗಳ ಭವಿಷ್ಯದ ಭದ್ರತೆಗೆ ಪಾರದರ್ಶಕ, ಸುರಕ್ಷಿತ ಹಾಗೂ ವಿಶ್ವಾಸಾರ್ಹ ಪರೀಕ್ಷಾ ವ್ಯವಸ್ಥೆ ಅಗತ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು

Leave a Comment