ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬಿ.ಸಿ. ನಾಗೇಶ್ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

On: August 19, 2026 12:39 PM
Follow Us:

ಶಿವಮೊಗ್ಗ: ಕರ್ನಾಟಕದ ಮಾಜಿ ಶಿಕ್ಷಣ ಸಚಿವರು ಹಾಗೂ ತಿಪಟೂರು ಕ್ಷೇತ್ರದ ಮಾಜಿ ಶಾಸಕರಾದ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಸಂತಾಪ ವ್ಯಕ್ತಪಡಿಸಲಾಯಿತು.

ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸಂದರ್ಭದಲ್ಲಿ ಬುಧವಾರ ಬೆಳಗ್ಗೆ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಎನ್.ಕೆ. ಜಗದೀಶ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಬಿ.ಸಿ. ನಾಗೇಶ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಎನ್.ಕೆ. ಜಗದೀಶ್ ಅವರು, ಬಿ.ಸಿ. ನಾಗೇಶ್ ಅವರು ಸರಳತೆ, ಪ್ರಾಮಾಣಿಕತೆ ಹಾಗೂ ಸಾರ್ವಜನಿಕ ಸೇವೆಯ ಮೂಲಕ ರಾಜಕೀಯ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ವಿಶೇಷವಾಗಿ ಶಿಕ್ಷಣ ಸಚಿವರಾಗಿ ರಾಜ್ಯದ ಶಿಕ್ಷಣ ಕ್ಷೇತ್ರದ ಸುಧಾರಣೆಗೆ ಹಲವು ಮಹತ್ವದ ಕ್ರಮಗಳನ್ನು ಕೈಗೊಂಡು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಹಿತಾಸಕ್ತಿಗೆ ಸ್ಪಂದಿಸಿದ್ದರು ಎಂದು ಸ್ಮರಿಸಿದರು.

ತಿಪಟೂರು ಕ್ಷೇತ್ರದ ಜನಪ್ರತಿನಿಧಿಯಾಗಿ ಹಾಗೂ ರಾಜ್ಯದ ಶಿಕ್ಷಣ ಸಚಿವರಾಗಿ ಅವರು ಸಲ್ಲಿಸಿದ ಸೇವೆ ಸದಾ ಸ್ಮರಣೀಯವಾಗಿದ್ದು, ಅವರ ಅಕಾಲಿಕ ನಿಧನ ಪಕ್ಷಕ್ಕೆ ಮಾತ್ರವಲ್ಲದೆ ಸಾರ್ವಜನಿಕ ಜೀವನಕ್ಕೂ ತುಂಬಲಾರದ ನಷ್ಟವಾಗಿದೆ ಎಂದು ಜಗದೀಶ್ ಅವರು ಸಂತಾಪ ವ್ಯಕ್ತಪಡಿಸಿದರು.

ಬಿ.ಸಿ. ನಾಗೇಶ್ ಅವರ ನಿಧನದಿಂದ ದುಃಖತಪ್ತರಾಗಿರುವ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ. ಅಗಲಿದ ಗಣ್ಯರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಎಲ್ಲರೂ ಪ್ರಾರ್ಥಿಸಿದರು.

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಹರಿಕೃಷ್ಣ, ಮಾಲತೇಶ್, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷರಾದ ಪ್ರಶಾಂತ್ ಕುಕ್ಕೆ, ತೀರ್ಥಹಳ್ಳಿ ಬಿಜೆಪಿ ಅಧ್ಯಕ್ಷರಾದ ನವೀನ್ ಹೆದ್ದೂರು, ಪ್ರಮುಖರಾದ ಎಸ್.ಎಸ್. ಜ್ಯೋತಿಪ್ರಕಾಶ್, ಮಾಧ್ಯಮ ವಿಭಾಗದ ಚಂದ್ರಶೇಖರ್ ಎಸ್., ಮಂಜುನಾಥ್ ಎನ್., ಸಾಮಾಜಿಕ ಜಾಲತಾಣ ವಿಭಾಗದ ಶರತ್ ಕಲ್ಯಾಣಿ, ದಿನೇಶ್ ಆಚಾರ್ಯ ಸೇರಿದಂತೆ ಜಿಲ್ಲಾ ಬಿಜೆಪಿ ಮುಖಂಡರು, ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಈ ವೇಳೆ ಧರಣಿಯಲ್ಲಿ ಭಾಗವಹಿಸಿದ್ದ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಬಿ.ಸಿ. ನಾಗೇಶ್ ಅವರ ರಾಜಕೀಯ ಮತ್ತು ಸಾರ್ವಜನಿಕ ಸೇವೆಯನ್ನು ಸ್ಮರಿಸಿ ಮೌನಾಚರಣೆ ಮೂಲಕ ಗೌರವ ಸಲ್ಲಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಜನಾಭಿಮಾನವೇ ರಾಘವೇಂದ್ರ ಅವರ ಅಭಿವೃದ್ಧಿಗೆ ಸಿಕ್ಕಿರುವ ನಿಜವಾದ ಗೌರವ: ಬಳ್ಳೇಕೆರೆ ಸಂತೋಷ್

ಬಿ.ಸಿ. ನಾಗೇಶ್ ನಿಧನಕ್ಕೆ ಬಿಜೆಪಿ ನಾಯಕರ ಕಂಬನಿ: ಶಿಕ್ಷಣ ಕ್ಷೇತ್ರದ ಸೇವೆ ಸ್ಮರಣೆ

ಭದ್ರಾ ಯೋಜನೆಗೆ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಚಿವ ಮಧು ಬಂಗಾರಪ್ಪ

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಧರಣಿ ಮುಂದುವರಿಕೆ: “ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ”: ಹೊಳಲೂರು ಸಂತೋಷ್

ಸೂಗೂರು ಮಣ್ಣಿನ ಹೆಮ್ಮೆಯ ಪುತ್ರನಿಗೆ ರಾಷ್ಟ್ರಪತಿ ಗೌರವದ ಮುಕುಟ!:19 ವರ್ಷಗಳ ನಿಷ್ಠಾವಂತ ಪೊಲೀಸ್ ಸೇವೆಗೆ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಅವರ ಸೇವೆಗೆ ರಾಷ್ಟ್ರಪತಿ ಪದಕದ ಗರಿ

ಅನುದಾನವಿಲ್ಲದೆ ಸಂಕಷ್ಟದಲ್ಲಿರುವ ಕನ್ನಡ ಶಾಲೆಗಳಿಗೆ ಶೀಘ್ರವೇ ಸಿಹಿಸುದ್ದಿ?; ‘ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮ ಕರ್ತವ್ಯ’: ಸಚಿವ ಮಧು ಬಂಗಾರಪ್ಪ

Leave a Comment