ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಜನಾಭಿಮಾನವೇ ರಾಘವೇಂದ್ರ ಅವರ ಅಭಿವೃದ್ಧಿಗೆ ಸಿಕ್ಕಿರುವ ನಿಜವಾದ ಗೌರವ: ಬಳ್ಳೇಕೆರೆ ಸಂತೋಷ್

On: August 19, 2026 1:50 PM
Follow Us:
ಶಿವಮೊಗ್ಗ: ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಅಂಗವಾಗಿ ನಗರದ ಬಂಟರ ಭವನದಲ್ಲಿ ಅಭಿಮಾನಿಗಳು, ವಿವಿಧ ಸಮಾಜಗಳ ಮುಖಂಡರು ಹಾಗೂ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಆತ್ಮೀಯವಾಗಿ ಶುಭಾಶಯ ಕೋರಿದರು. ಕಾರ್ಯಕ್ರಮದಲ್ಲಿ ಬಳ್ಳೇಕೆರೆ ಸಂತೋಷ್ ಅವರು ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಶ್ಲಾಘಿಸಿ, ಅವರ ಮೇಲಿನ ಜನಾಭಿಮಾನವೇ ಅವರ ಸೇವೆಗೆ ದೊರೆತಿರುವ ದೊಡ್ಡ ಗೌರವವಾಗಿದೆ ಎಂದು ಹೇಳಿದರು.

ನಮ್ಮ ನೆಚ್ಚಿನ ಸಂಸದರು ಹಾಗೂ ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ಹರಿಕಾರರಾಗಿರುವ ಬಿ.ವೈ. ರಾಘವೇಂದ್ರ ಅವರಿಗೆ ಜನ್ಮದಿನದ ಶುಭಾಶಯ ಕೋರಬೇಕು ಎಂಬುದು ನಮ್ಮೆಲ್ಲ ಸಮಾಜದ ಮುಖಂಡರ ಆಶಯವಾಗಿತ್ತು. ಈ ಹಿನ್ನೆಲೆಯಲ್ಲಿ ರಾಘಣ್ಣನವರಲ್ಲಿ ಕಾರ್ಯಕ್ರಮದ ಕುರಿತು ವಿನಂತಿಸಿಕೊಂಡಿದ್ದೆವು. ಆದರೆ ಅವರು ಯಾವುದೇ ಕಾರಣಕ್ಕೂ ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ತಿಳಿಸಿದ್ದರು. ಆದರೂ ಇಂದು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಆಗಮಿಸಿ ಶುಭಾಶಯ ಕೋರುತ್ತಿರುವುದು ಅವರ ಮೇಲಿನ ಜನರ ಪ್ರೀತಿ, ವಿಶ್ವಾಸ ಮತ್ತು ಅಭಿಮಾನಕ್ಕೆ ಸಾಕ್ಷಿಯಾಗಿದೆ ಎಂದು ಬಳ್ಳೇಕೆರೆ ಸಂತೋಷ್ ಹೇಳಿದರು.

ಬಿ.ವೈ. ರಾಘವೇಂದ್ರ ಅವರು ಸಂಸದರಾದ ನಂತರ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಅಭಿವೃದ್ಧಿ ಕಾರ್ಯಗಳನ್ನು ಉಲ್ಲೇಖಿಸಿದ ಸಂತೋಷ್, ಶಿವಮೊಗ್ಗ ಜಿಲ್ಲೆಗೆ ಸುಮಾರು ₹25,000 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ತರುವಲ್ಲಿ ರಾಘವೇಂದ್ರ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಯ ದೃಷ್ಟಿಯಿಂದ ಅವರು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಅಭಿವೃದ್ಧಿಯ ವಿಚಾರದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಮುನ್ನಡೆಸುವ ದೃಢ ಸಂಕಲ್ಪವನ್ನು ಅವರು ಹೊಂದಿದ್ದಾರೆ ಎಂದು ಹೇಳಿದರು.

ಇತ್ತೀಚೆಗೆ ಶಿಕಾರಿಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಅಭಿವೃದ್ಧಿ ಕಾರ್ಯಗಳನ್ನು ಸ್ಮರಿಸಿ ಮಾತನಾಡಿದ್ದನ್ನು ಪ್ರಸ್ತಾಪಿಸಿದ ಸಂತೋಷ್, ಯಡಿಯೂರಪ್ಪನವರಿಗೆ ಯಡಿಯೂರಪ್ಪನವರೇ ಸರಿಸಾಟಿ ಎಂಬ ಮಾತಿದೆ. ಆದರೆ ಅವರ ಅಭಿವೃದ್ಧಿಯ ಪರಂಪರೆಯನ್ನು ಮುಂದುವರಿಸಿಕೊಂಡು ಒಂದು ಹೆಜ್ಜೆ ಮುಂದೆ ಸಾಗುತ್ತಿರುವವರು ರಾಘವೇಂದ್ರ ಎಂಬ ಅಭಿಪ್ರಾಯವನ್ನು ವಿಜಯೇಂದ್ರ ಅವರು ವ್ಯಕ್ತಪಡಿಸಿದ್ದಾರೆ. ಇದು ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳಿಗೆ ದೊರೆತಿರುವ ದೊಡ್ಡ ಗೌರವ ಎಂದರು.

ಶಿವಮೊಗ್ಗ ಜಿಲ್ಲೆಯಲ್ಲಿ ರೈಲ್ವೆ ಮೇಲ್ಸೇತುವೆ, ಫ್ಲೈಓವರ್, ರಸ್ತೆ ಅಭಿವೃದ್ಧಿ, ವಿಮಾನ ನಿಲ್ದಾಣದ ಅಭಿವೃದ್ಧಿ ಸೇರಿದಂತೆ ಅನೇಕ ಪ್ರಮುಖ ಯೋಜನೆಗಳು ಸಾಕಾರಗೊಂಡಿವೆ. ರಾಘವೇಂದ್ರ ಅವರ ಅಭಿವೃದ್ಧಿ ಕಾರ್ಯಗಳನ್ನು ಒಂದೊಂದಾಗಿ ಪಟ್ಟಿ ಮಾಡುತ್ತಾ ಹೋದರೆ ಎರಡು-ಮೂರು ದಿನಗಳ ಕಾಲ ಹೇಳಬಹುದು. ಅಷ್ಟೊಂದು ಪ್ರಮಾಣದಲ್ಲಿ ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆದಿವೆ ಎಂದು ಸಂತೋಷ್ ಹೇಳಿದರು.

ಸಂಸದ ರಾಘವೇಂದ್ರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಅಭಿಮಾನಿಗಳು ಸಿಹಿ ಹಂಚಿ ಸಂಭ್ರಮಿಸಿರುವುದನ್ನು ಉಲ್ಲೇಖಿಸಿದ ಸಂತೋಷ್, “ಬೆಳಿಗ್ಗೆ ರೈಲ್ವೆ ನಿಲ್ದಾಣದಲ್ಲಿ ಆಟೋ ಸಂತೋಷ್ ಅವರ ತಂಡದವರು ಸಿಹಿ ಹಂಚುತ್ತಿದ್ದರು. ಏಕೆ ಸಿಹಿ ಹಂಚುತ್ತಿದ್ದೀರಿ ಎಂದು ಕೇಳಿದಾಗ ರಾಘಣ್ಣನವರ ಜನ್ಮದಿನದ ಅಂಗವಾಗಿ ಸಿಹಿ ಹಂಚುತ್ತಿರುವುದಾಗಿ ತಿಳಿಸಿದರು” ಎಂದರು.

ಅವರು ಹೇಳಿದ ಮತ್ತೊಂದು ವಿಷಯ ಗಮನಾರ್ಹವಾಗಿತ್ತು. ಹಿಂದೆ ಶಿವಮೊಗ್ಗ ನಗರದಲ್ಲಿ ಕೇವಲ ಎರಡು ರೈಲುಗಳು ಸಂಚರಿಸುತ್ತಿದ್ದವು. ರಾಘವೇಂದ್ರ ಅವರು ಸಂಸದರಾದ ಬಳಿಕ ಇಂದು ಸುಮಾರು 28 ರೈಲುಗಳು ಸಂಚರಿಸುತ್ತಿವೆ ಎಂದು ಅವರು ತಿಳಿಸಿದರು. ರೈಲುಗಳ ಸಂಖ್ಯೆ ಹೆಚ್ಚಾದ ಪರಿಣಾಮ ರೈಲ್ವೆ ನಿಲ್ದಾಣದ ಸುತ್ತಮುತ್ತಲಿನ ನೂರಾರು ಕುಟುಂಬಗಳಿಗೆ ಉದ್ಯೋಗ ಹಾಗೂ ಜೀವನೋಪಾಯದ ಅವಕಾಶಗಳು ದೊರೆತಿವೆ ಎಂದು ಸಂತೋಷ್ ವಿವರಿಸಿದರು.

ರೈಲ್ವೆ ಸಂಪರ್ಕದ ವಿಸ್ತರಣೆಯಿಂದ ಕೇವಲ ಪ್ರಯಾಣಿಕರಿಗೆ ಮಾತ್ರ ಅನುಕೂಲವಾಗಿಲ್ಲ. ಆಟೋ ಚಾಲಕರು, ಬಸ್ ಚಾಲಕರು, ಹೋಟೆಲ್ ಉದ್ಯಮಿಗಳು, ಸಣ್ಣ ವ್ಯಾಪಾರಿಗಳು ಹಾಗೂ ವಿವಿಧ ವೃತ್ತಿಗಳಲ್ಲಿ ತೊಡಗಿಸಿಕೊಂಡಿರುವವರಿಗೆ ಕೂಡ ಇದರ ಪರೋಕ್ಷ ಲಾಭ ದೊರೆತಿದೆ ಎಂದು ಸಂತೋಷ್ ಹೇಳಿದರು. ಸಂಪರ್ಕ ವ್ಯವಸ್ಥೆ ಬಲಗೊಂಡಂತೆ ನಗರದಲ್ಲಿ ವ್ಯಾಪಾರ-ವಹಿವಾಟು ಮತ್ತು ಜನರ ಸಂಚಾರವೂ ಹೆಚ್ಚಾಗಿದೆ ಎಂದರು.

ರಾಘವೇಂದ್ರ ಅವರ ಮೇಲಿನ ಅಭಿಮಾನ ಕೇವಲ ಒಂದು ವರ್ಗಕ್ಕೆ ಸೀಮಿತವಾಗಿಲ್ಲ. ಆಟೋ ಚಾಲಕರು, ಬಸ್ ಚಾಲಕರು, ವ್ಯಾಪಾರಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜದ ಮುಖಂಡರು ಸೇರಿದಂತೆ ವಿವಿಧ ಕ್ಷೇತ್ರಗಳ ಜನರು ಇಂದು ಸ್ವಯಂಪ್ರೇರಿತರಾಗಿ ಆಗಮಿಸಿ ಅವರಿಗೆ ಶುಭಾಶಯ ಕೋರಿದ್ದಾರೆ. ಇದು ಅವರ ಜನಪರ ಕಾರ್ಯವೈಖರಿ ಹಾಗೂ ಅಭಿವೃದ್ಧಿ ಕಾರ್ಯಗಳಿಗೆ ಜನರಿಂದ ದೊರೆಯುತ್ತಿರುವ ಮಾನ್ಯತೆ ಎಂದು ಅವರು ಹೇಳಿದರು.

ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಯ ವಿಚಾರದಲ್ಲಿ ಸಂಸದ ಬಿ.ವೈ. ರಾಘವೇಂದ್ರ ಅವರು ಕೇಂದ್ರ ಸರ್ಕಾರದ ಮಟ್ಟದಲ್ಲಿ ನಿರಂತರವಾಗಿ ಪ್ರಯತ್ನ ನಡೆಸುತ್ತಿದ್ದಾರೆ. ಜಿಲ್ಲೆಯ ಮೂಲಸೌಕರ್ಯ, ರೈಲ್ವೆ, ವಿಮಾನಯಾನ, ರಸ್ತೆ, ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುತ್ತಿದ್ದಾರೆ. ಮುಂದಿನ ದಿನಗಳಲ್ಲಿಯೂ ಶಿವಮೊಗ್ಗ ಜಿಲ್ಲೆಗೆ ಇನ್ನಷ್ಟು ಮಹತ್ವದ ಯೋಜನೆಗಳು ಲಭಿಸಲಿ ಎಂಬ ಆಶಯವನ್ನು ಸಂತೋಷ್ ವ್ಯಕ್ತಪಡಿಸಿದರು.

“ಇಂದು ಇಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿರುವ ಅಭಿಮಾನಿಗಳ ಪರವಾಗಿ ಹಾಗೂ ಶಿವಮೊಗ್ಗ ಜಿಲ್ಲೆಯ ಜನತೆಯ ಪರವಾಗಿ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಹೃದಯಪೂರ್ವಕ ಜನ್ಮದಿನದ ಶುಭಾಶಯಗಳನ್ನು ಸಲ್ಲಿಸುತ್ತೇನೆ. ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಹಾಗೂ ಇನ್ನಷ್ಟು ಜನಸೇವೆ ಮಾಡುವ ಶಕ್ತಿಯನ್ನು ಭಗವಂತ ಕರುಣಿಸಲಿ. ಶಿವಮೊಗ್ಗ ಜಿಲ್ಲೆಯ ಅಭಿವೃದ್ಧಿಗಾಗಿ ಅವರ ಸೇವೆ ಇನ್ನಷ್ಟು ವಿಸ್ತರಿಸಲಿ” ಎಂದು ಬಳ್ಳೇಕೆರೆ ಸಂತೋಷ್ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ವಿವಿಧ ಸಮಾಜಗಳ ಮುಖಂಡರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಂಸದ ಬಿ.ವೈ. ರಾಘವೇಂದ್ರ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಆತ್ಮೀಯ ವಾತಾವರಣ ನಿರ್ಮಾಣವಾಗಿದ್ದು, ಅಭಿಮಾನಿಗಳು ಶುಭಾಶಯ ಕೋರಿ ಅವರ ಜನಸೇವಾ ಕಾರ್ಯಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಹಾಗೂ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ, ಸಂಸದರಾದ ಬಿ.ವೈ. ರಾಘವೇಂದ್ರ, ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ, ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಜಗದೀಶ್, ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಮಾಜಿ ಅಧ್ಯಕ್ಷರಾದ ಗುರುಮೂರ್ತಿ, ಪದ್ಮನಾಭ ಭಟ್, ರಾಜ್ಯ ಬಿಜೆಪಿ ಪ್ರಕೋಷ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ, ಪ್ರಮುಖರಾದ ಟಿ.ಡಿ. ಮೇಘರಾಜ್, ಮಂಗೋಟೆ ರುದ್ರೇಶ್, ಬಳ್ಳೆಕೆರೆ ಸಂತೋಷ್, ಮಾಲತೇಶ್, ವಕೀಲರ ಸಂಘದ ಅಧ್ಯಕ್ಷರಾದ ರಾಘವೇಂದ್ರ, ಸತೀಶ್ ಕುಮಾರ್ ಶೆಟ್ಟಿ, ವೀರಭದ್ರ ಪೂಜಾರ್, ಮಾಧ್ಯಮ ಪ್ರಮುಖರಾದ ಚಂದ್ರಶೇಖರ್, ಮಂಜುನಾಥ್ ಎನ್, ಉಮಾಶಂಕರ್, ರಾಜೇಶ್ ಕಾಮತ್, ದಿವಾಕರ್ ಶೆಟ್ಟಿ, ಡಿ.ಜಿ.ಕಿರಣ್, ಶಿವಾನಂದ, ಲವಕುಮಾರ, ಬಸವರಾಜ್, ಕುಮಾರ್ ಬೆನವಳ್ಳಿ, ಪ್ರಸನ್ನ, ಶಾಂತಸುರೇಂದ್ರ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಬಿ.ವೈ. ರಾಘವೇಂದ್ರ ಅವರ ಅಭಿಮಾನಿಗಳು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಬಿ.ಸಿ. ನಾಗೇಶ್ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಶ್ರದ್ಧಾಂಜಲಿ

ಬಿ.ಸಿ. ನಾಗೇಶ್ ನಿಧನಕ್ಕೆ ಬಿಜೆಪಿ ನಾಯಕರ ಕಂಬನಿ: ಶಿಕ್ಷಣ ಕ್ಷೇತ್ರದ ಸೇವೆ ಸ್ಮರಣೆ

ಭದ್ರಾ ಯೋಜನೆಗೆ ನೀರು ಹರಿಸುವ ಕುರಿತು ಶೀಘ್ರ ತೀರ್ಮಾನ: ಸಚಿವ ಮಧು ಬಂಗಾರಪ್ಪ

ಸಚಿವ ನಾಗೇಂದ್ರ ವಜಾಕ್ಕೆ ಆಗ್ರಹಿಸಿ ಬಿಜೆಪಿ ಧರಣಿ ಮುಂದುವರಿಕೆ: “ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ”: ಹೊಳಲೂರು ಸಂತೋಷ್

ಸೂಗೂರು ಮಣ್ಣಿನ ಹೆಮ್ಮೆಯ ಪುತ್ರನಿಗೆ ರಾಷ್ಟ್ರಪತಿ ಗೌರವದ ಮುಕುಟ!:19 ವರ್ಷಗಳ ನಿಷ್ಠಾವಂತ ಪೊಲೀಸ್ ಸೇವೆಗೆ ಇನ್ಸ್‌ಪೆಕ್ಟರ್ ಗುರುಪ್ರಸಾದ್ ಅವರ ಸೇವೆಗೆ ರಾಷ್ಟ್ರಪತಿ ಪದಕದ ಗರಿ

ಅನುದಾನವಿಲ್ಲದೆ ಸಂಕಷ್ಟದಲ್ಲಿರುವ ಕನ್ನಡ ಶಾಲೆಗಳಿಗೆ ಶೀಘ್ರವೇ ಸಿಹಿಸುದ್ದಿ?; ‘ಕನ್ನಡ ಶಾಲೆಗಳನ್ನು ಉಳಿಸುವುದು ನಮ್ಮ ಕರ್ತವ್ಯ’: ಸಚಿವ ಮಧು ಬಂಗಾರಪ್ಪ

Leave a Comment