ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ನಟಿಬಿ. ಸರೋಜಾದೇವಿ ನಿಧನ; ಆರೂವರೆ ದಶಕ ಚಿತ್ರರಂಗದಲ್ಲಿ ಮಿಂಚಿ ಮರೆಯಾದ ತಾರೆ

On: July 14, 2025 10:54 PM
Follow Us:

ಬಿ ಸರೋಜಾದೇವಿ ನಿಧನ: ಪ್ರಸಿದ್ಧ ಕನ್ನಡ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ತಮ್ಮ 87ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಆರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ ಅವರು 200 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದಾರೆ. ‘ನಟಸಾರ್ವಭೌಮ’ ಅವರ ಕೊನೆಯ ಚಿತ್ರ. ಅವರು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿ ಚಿತ್ರರಂಗಗಳಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ. ಸರೋಜಾ ದೇವಿ ಅವರು ಇಂದು (ಜುಲೈ 14) ನಿಧನ ಹೊಂದಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಅವರಿಗೆ ಇಬ್ಬರು ಮಕ್ಕಳಿದ್ದಾರೆ. ಕಳೆದ ಕೆಲವು ಸಮಯದಿಂದ ಸರೋಜಾ ದೇವಿ ಅವರು ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಆರೂವರೆ ದಶಕಗಳ ಕಾಲ ಅವರು ಚಿತ್ರರಂಗದಲ್ಲಿ ಇದ್ದರು. 2019ರಲ್ಲಿ ರಿಲೀಸ್ ಆದ ಪುನೀತ್ ರಾಜ್​ಕುಮಾರ್ ನಟನೆಯ ‘ನಟಸಾರ್ವಭೌಮ’ ಅವರು ನಟಿಸಿದ ಕೊನೆಯ ಚಿತ್ರ.

ಸರೋಜಾ ಅವರು 1967ರಲ್ಲಿ ಹರ್ಷ ಅವರನ್ನು ವಿವಾಹ ಆದರು. 1986ರಲ್ಲಿ ಪತಿ ನಿಧನ ಹೊಂದಿದರು. ಈಗ ಪತಿ ಹರ್ಷ ಸಮಾಧಿ ಪಕ್ಕದಲ್ಲೇ ಸರೋಜಾ ಅವರ ಅಂತ್ಯಕ್ರಿಯೆ ನಡೆಯಲಿದೆ. ಬೆಂಗಳೂರಿನ ಕೊಡಿಗೆಹಳ್ಳಿಯ ತೋಟದಲ್ಲಿ ಒಕ್ಕಲಿಗೆ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಲಿದೆ.

ಸರೋಜಾ ದೇವಿ ಜನಿಸಿದ್ದು 1938ರ ಜನವರಿ 7ರಂದು.  ಅವರು ಬೆಂಗಳೂರಿನಲ್ಲಿ ಹುಟ್ಟಿದರು. ಅವರ ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ ಅವರು ಹೌಸ್​ವೈಫ್ ಆಗಿದ್ದರು. ಸರೋಜಾ ಬಳಿ ಭೈರಪ್ಪ ಅವರು ಡ್ಯಾನ್ಸ್ ಕಲಿಯುವಂತೆ ಪ್ರೋತ್ಸಾಹಿಸಿದರು. ಅವರು ಚಿತ್ರರಂಗಕ್ಕೆ ಬರಲು ತಂದೆಯಿಂದಲೇ ಬೆಂಬಲ ಸಿಕ್ಕಿತ್ತು.

1955ರಲ್ಲಿ ಬಂದ ‘ಮಹಾಕವಿ ಕಾಳಿದಾಸ’ ಚಿತ್ರದ ಮೂಲಕ ಸರೋಜಾ ದೇವಿ ಅವರು ಮೊದಲ ಬಾರಿಗೆ ಬಣ್ಣ ಹಚ್ಚಿದರು. ಆಗ ಅವರಿಗೆ 17 ವರ್ಷ. ಆ ಬಳಿಕ ಆಫರ್​ಗಳು ಅವರನ್ನು ಹುಡುಕಿ ಬಂದವು. ಕೇವಲ ಕನ್ನಡ ಮಾತ್ರವಲ್ಲದೆ, ತಮಿಳು, ತೆಲುಗು, ಹಿಂದಿ ಸಿನಿಮಾಗಳಲ್ಲೋ ಸರೋಜಾ ದೇವಿ ಅವರು ನಟಿಸಿದ್ದಾರೆ. ಅವರ ವೃತ್ತಿ ಬದುಕಿನಲ್ಲಿ ಸುಮಾರು 200ಕ್ಕೂ ಅಧಿಕ ಚಿತ್ರಗಳಲ್ಲಿ ಕಾಣಿಸಿಕೊಂಡರು.

ಮೇರು ನಟರಾದ ರಾಜ್​ಕುಮಾರ್, ಕಲ್ಯಾಣ್​ ಕುಮಾರ್ ಮೊದಲಾದವರ ಜೊತೆ ಸರೋಜಾ ದೇವಿ ತೆರೆ ಹಂಚಿಕೊಂಡರು. ‘ಅಮರ ಶಿಲ್ಪಿ ಜಕಣಾಚಾರಿ’, ‘ಮಲ್ಲಮ್ಮನ ಪವಾಡ’, ಭಾಗ್ಯವಂತರು, ‘ಬಬ್ರುವಾಹನ’ ಕಥಾಸಂಗಮ ಮುಂತಾದ ಕನ್ನಡ ಸಿನಿಮಾಗಳಲ್ಲಿ ಸರೋಜಾ ದೇವಿ ನಟಿಸಿದ್ದರು. ತಮಿಳಿನಲ್ಲಿ ‘ಪಾಟ್ಟಾಲಿ ಮುತ್ತು’, ‘ಪಡಿಕಥ ಮೇಥೈ’, ‘ಕಲ್ಯಾಣ ಪರಿಸು’, ತೆಲುಗಿನಲ್ಲಿ ‘ಪಂಡರಿ ಭಕ್ತಲು’, ‘ದಕ್ಷಯಜ್ಞಂ’,  ಹಿಂದಿಯಲ್ಲಿ  ‘ಆಶಾ’, ‘ಮೆಹಂದಿ ಲಗಾ ಕೆ ರಖನಾ’ ಮೊದಲಾದ ಸಿನಿಮಾಗಳಲ್ಲಿ ಅವರು ಬಣ್ಣ ಹಚ್ಚಿದರು.

90ರ ದಶಕದ ಬಳಿಕ ಸರೋಜಾ ದೇವಿ ಚಿತ್ರರಂಗದಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರಲಿಲ್ಲ. ಪುನೀತ್ ನಟನೆಯ 2019ರ ‘ನಟಸಾರ್ವಭೌಮ’ ಚಿತ್ರದಲ್ಲಿ ಅವರು ಅತಿಥಿ ಪಾತ್ರ ಮಾಡಿದರು. ಸರೋಜಾ ದೇವಿ ಆಗಿಯೇ ಅವರು ಸಿನಿಮಾದಲ್ಲಿ ಕಾಣಿಸಿಕೊಂಡರು.

K.M.Sathish Gowda

Join WhatsApp

Join Now

Facebook

Join Now

Leave a Comment