ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ: ಆಗಸ್ಟ್ 29ರಿಂದ 31ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

On: August 26, 2026 8:27 PM
Follow Us:

ಶಿವಮೊಗ್ಗ: ಜಗದ್ಗುರು ಶ್ರೀ ಮನ್ಮಧ್ವಾಚಾರ್ಯರ ಮೂಲ ಮಹಾಸಂಸ್ಥಾನ, ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ (ಮಂತ್ರಾಲಯದ ಶಾಖಾ ಮಠ) ಮಠದ ವತಿಯಿಂದ ಶಿವಮೊಗ್ಗ ನಗರದ ದೇವಂಗಿ ರತ್ನಾಕರ ಬಡಾವಣೆ 2ನೇ ಹಂತ, ಬೊಮ್ಮನಕಟ್ಟೆ ರಸ್ತೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 355ನೇ ಆರಾಧನಾ ಮಹೋತ್ಸವವನ್ನು ಆಗಸ್ಟ್ 29ರಿಂದ 31, 2026ರವರೆಗೆ ಭಕ್ತಿಭಾವ ಮತ್ತು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಆರಾಧನಾ ಮಹೋತ್ಸವದ ಅಂಗವಾಗಿ ಮೂರು ದಿನಗಳ ಕಾಲ ವಿಶೇಷ ಪೂಜೆ, ಅಭಿಷೇಕ, ಪಾದಪೂಜೆ, ಕನಕಾಭಿಷೇಕ, ಮಹಾರಥೋತ್ಸವ ಹಾಗೂ ರಾಜಬೀದಿ ಉತ್ಸವ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಆಗಸ್ಟ್ 29ರ ಶನಿವಾರ (ಪ್ರತಿಪದ) ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ ನಡೆಯಲಿದೆ. ಬೆಳಿಗ್ಗೆ 7 ಗಂಟೆಗೆ ಅಷ್ಟೋತ್ತರದೊಂದಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ, ಬೆಳಿಗ್ಗೆ 10 ಗಂಟೆಗೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ನಡೆಯಲಿದೆ.

ಆಗಸ್ಟ್ 30ರ ಭಾನುವಾರ (ದ್ವಿತೀಯ) ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ, ಬೆಳಿಗ್ಗೆ 7 ಗಂಟೆಗೆ ಅಷ್ಟೋತ್ತರದೊಂದಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ, ಬೆಳಿಗ್ಗೆ 10 ಗಂಟೆಗೆ ಪಾದಪೂಜೆಯೊಂದಿಗೆ ಕನಕಾಭಿಷೇಕ ಅರ್ಚನೆ ಹಾಗೂ ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಣೆ ನಡೆಯಲಿದೆ.

ಆಗಸ್ಟ್ 31ರ ಸೋಮವಾರ (ತೃತೀಯ) ಬೆಳಿಗ್ಗೆ 5.30ಕ್ಕೆ ಸುಪ್ರಭಾತ ಹಾಗೂ ನಿರ್ಮಾಲ್ಯ ವಿಸರ್ಜನೆ, ಬೆಳಿಗ್ಗೆ 7 ಗಂಟೆಗೆ ಅಷ್ಟೋತ್ತರದೊಂದಿಗೆ ಕ್ಷೀರಾಭಿಷೇಕ ಸಹಿತ ಪಂಚಾಮೃತ ಅಭಿಷೇಕ ನಡೆಯಲಿದೆ.

ಅಂದು ಬೆಳಿಗ್ಗೆ 9 ಗಂಟೆಗೆ ಶ್ರೀ ಗುರುರಾಘವೇಂದ್ರ ರಾಯರ ವಿಶೇಷಾಲಂಕೃತ “ರಾಜಬೀದಿ ಉತ್ಸವ” ವಿಜೃಂಭಣೆಯಿಂದ ನಡೆಯಲಿದೆ. ಬಳಿಕ ಬೆಳಿಗ್ಗೆ 11 ಗಂಟೆಗೆ ಮಠದ ಪ್ರಾಕಾರದಲ್ಲಿ ಮಹಾರಥೋತ್ಸವ ನೆರವೇರಲಿದೆ. ನಂತರ ಡೋಲೋತ್ಸವ, ಸ್ವಸ್ತಿವಾಚನ, ಮಹಾಮಂಗಳಾರತಿ, ನೈವೇದ್ಯ ಹಾಗೂ ತೀರ್ಥ ಪ್ರಸಾದ ಕಾರ್ಯಕ್ರಮಗಳು ನಡೆಯಲಿವೆ.

ಈ ಪವಿತ್ರ ಆರಾಧನಾ ಮಹೋತ್ಸವದ ಎಲ್ಲಾ ಕಾರ್ಯಕ್ರಮಗಳಲ್ಲಿ ಸಮಸ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಶ್ರೀ ಗುರುರಾಯರ ಕೃಪಾಶೀರ್ವಾದಕ್ಕೆ ಪಾತ್ರರಾಗಬೇಕು. ಅಲ್ಲದೆ, ತನು-ಮನ-ಧನದೊಂದಿಗೆ ಕಾರ್ಯಕ್ರಮಗಳಿಗೆ ಸಹಕರಿಸಿ ಶ್ರೀ ಗುರುರಾಯರ ಅನುಗ್ರಹ ಪಡೆಯಬೇಕೆಂದು ಮಠದ ವ್ಯವಸ್ಥಾಪಕರಾದ ಶ್ರೀ ದಿರೇಂದ್ರ ಆಚಾರ್ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಶ್ರೀ ತರಳಬಾಳು ಜಗದ್ಗುರುಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬಿಡದಿ ಟೌನ್‌ಶಿಪ್ ರದ್ದುಪಡಿಸಿ; ರೈತರ ಭೂಮಿಗೆ ಕೈಹಾಕಿದರೆ ಉಗ್ರ ಹೋರಾಟ! ಅನ್ಯಾಯ ಮಾಡಿದರೆ ಚುನಾವಣೆಯಲ್ಲಿ ತಕ್ಕ ಪಾಠ: ಹೆಚ್.ಆರ್. ಬಸವರಾಜಪ್ಪ

ಆದರ್ಶ ರಾಜಕಾರಣದ ಪುನರುಜ್ಜೀವನಕ್ಕೆ ಕರೆ: ನೂತನ ಸಭಾಧ್ಯಕ್ಷ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರಿಗೆ ಶ್ರೀ ತರಳಬಾಳು ಜಗದ್ಗುರುಗಳ ಮಾರ್ಗದರ್ಶನ

ಎಂಜಲು ಕಾಸಿಗೆ ಆಸೆ ಬಿದ್ದು ಕಣ್ಣುಮುಚ್ಚಿದ ಅಧಿಕಾರಿಗಳು: ಅಕ್ರಮ ‘ತುಂತೂರು’ ರೆಸಾರ್ಟ್ ಮೇಲೆ ಬಿದ್ದಿತು ಅಬಕಾರಿ ಕಣ್ಣು, ಮಾಲೀಕ ಗಾಜನೂರು ಸದಾನಂದನಿಗೆ ಎಫ್‌ಐಆರ್ ಶಾಕ್!

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಆದರೂ ಒಳ ಮೀಸಲಾತಿ ಹೋರಾಟದಿಂದ ಹಿಂದೆ ಸರಿಯಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಳ್ಳರಿಗೆ ಸಿಂಹಸ್ವಪ್ನ, ಜನರಿಗೆ ನೆಮ್ಮದಿ; ಎಸ್ಪಿ ನಿಖಿಲ್ ಬಿ. ನೇತೃತ್ವದಲ್ಲಿ ಶಿವಮೊಗ್ಗ ಪೊಲೀಸರ ಖಡಕ್ ಕಾರ್ಯಾಚರಣೆ: ಬರೋಬ್ಬರಿ ₹5.73 ಕೋಟಿ ಸ್ವತ್ತು ಮಾಲೀಕರ ಕೈಗೆ!

Leave a Comment