ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶ್ರೀ ತರಳಬಾಳು ಜಗದ್ಗುರುಗಳ ಆಶೀರ್ವಾದ ಪಡೆದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

On: August 26, 2026 10:46 PM
Follow Us:

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ಶ್ರೀ ತರಳಬಾಳು ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರಕ್ಕೆ ಭೇಟಿ ನೀಡಿ, ಶ್ರೀ ತರಳಬಾಳು ಜಗದ್ಗುರುಗಳಾದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, “ತರಳಬಾಳು ಮಠದ ಬಗ್ಗೆ ನನಗೆ ಅಪಾರವಾದ ಗೌರವವಿದೆ. ಅನೇಕ ಮಹತ್ವದ ನ್ಯಾಯ-ತೀರ್ಮಾನಗಳು ಈ ಮಠದ ಸಾನ್ನಿಧ್ಯದಲ್ಲಿ ನಡೆದಿವೆ. ಇದು ಈ ಭಾಗದ ಶ್ರೀಮಂತ ಪರಂಪರೆ, ಸಂಸ್ಕೃತಿ ಹಾಗೂ ಜನರ ಅಚಲ ನಂಬಿಕೆಗೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ನೀರಾವರಿ ಮತ್ತು ಶಿಕ್ಷಣ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುವ ಜೊತೆಗೆ, ಸಮಾಜಮುಖಿ ಕಾರ್ಯಗಳ ಮೂಲಕ ಜನರ ಬದುಕಿನಲ್ಲಿ ಸಕಾರಾತ್ಮಕ ಬದಲಾವಣೆ ತರಬೇಕೆಂಬ ದೂರದೃಷ್ಟಿಯ ಚಿಂತನೆಗಳನ್ನು ಶ್ರೀಗಳು ಹೊಂದಿದ್ದಾರೆ. ಅವರ ಮಾರ್ಗದರ್ಶನ ಮತ್ತು ಆಶೀರ್ವಾದ ಪಡೆಯುವುದು ನನಗೆ ಸಂತಸದ ಸಂಗತಿಯಾಗಿದೆ” ಎಂದು ಮುಖ್ಯಮಂತ್ರಿ ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀ ತರಳಬಾಳು ಜಗದ್ಗುರು ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳೊಂದಿಗೆ ಮುಖ್ಯಮಂತ್ರಿ ಅವರು ವಿವಿಧ ವಿಚಾರಗಳ ಕುರಿತು ಆತ್ಮೀಯವಾಗಿ ಸಮಾಲೋಚನೆ ನಡೆಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಶ್ರೀ ಗುರುರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವ: ಆಗಸ್ಟ್ 29ರಿಂದ 31ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

ಬಿಡದಿ ಟೌನ್‌ಶಿಪ್ ರದ್ದುಪಡಿಸಿ; ರೈತರ ಭೂಮಿಗೆ ಕೈಹಾಕಿದರೆ ಉಗ್ರ ಹೋರಾಟ! ಅನ್ಯಾಯ ಮಾಡಿದರೆ ಚುನಾವಣೆಯಲ್ಲಿ ತಕ್ಕ ಪಾಠ: ಹೆಚ್.ಆರ್. ಬಸವರಾಜಪ್ಪ

ಆದರ್ಶ ರಾಜಕಾರಣದ ಪುನರುಜ್ಜೀವನಕ್ಕೆ ಕರೆ: ನೂತನ ಸಭಾಧ್ಯಕ್ಷ ಗುರುಪಾದಗೌಡ ಸಂಗನಗೌಡ ಪಾಟೀಲ್ ಅವರಿಗೆ ಶ್ರೀ ತರಳಬಾಳು ಜಗದ್ಗುರುಗಳ ಮಾರ್ಗದರ್ಶನ

ಎಂಜಲು ಕಾಸಿಗೆ ಆಸೆ ಬಿದ್ದು ಕಣ್ಣುಮುಚ್ಚಿದ ಅಧಿಕಾರಿಗಳು: ಅಕ್ರಮ ‘ತುಂತೂರು’ ರೆಸಾರ್ಟ್ ಮೇಲೆ ಬಿದ್ದಿತು ಅಬಕಾರಿ ಕಣ್ಣು, ಮಾಲೀಕ ಗಾಜನೂರು ಸದಾನಂದನಿಗೆ ಎಫ್‌ಐಆರ್ ಶಾಕ್!

ನಾನೀಗ ಸರ್ಕಾರದ ಮುಖ್ಯಸ್ಥನಲ್ಲ, ಆದರೂ ಒಳ ಮೀಸಲಾತಿ ಹೋರಾಟದಿಂದ ಹಿಂದೆ ಸರಿಯಲ್ಲ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಕಳ್ಳರಿಗೆ ಸಿಂಹಸ್ವಪ್ನ, ಜನರಿಗೆ ನೆಮ್ಮದಿ; ಎಸ್ಪಿ ನಿಖಿಲ್ ಬಿ. ನೇತೃತ್ವದಲ್ಲಿ ಶಿವಮೊಗ್ಗ ಪೊಲೀಸರ ಖಡಕ್ ಕಾರ್ಯಾಚರಣೆ: ಬರೋಬ್ಬರಿ ₹5.73 ಕೋಟಿ ಸ್ವತ್ತು ಮಾಲೀಕರ ಕೈಗೆ!

Leave a Comment