ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಯಾರೋ ಹೇಳಿದರು ಅಂತ SIT ರಚನೆ ಸಾಧ್ಯವಿಲ್ಲ: ಧರ್ಮಸ್ಥಳ ಪ್ರಕರಣ ವಿಷಯವಾಗಿ ಸಿಎಂ ಪ್ರತಿಕ್ರಿಯೆ

On: July 18, 2025 4:41 PM
Follow Us:

ಯಾರೋ ಹೇಳಿದರೆಂದು SIT ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದಿದ್ದಾರೆ.

ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಸದ್ಯಕ್ಕೆ ಎಸ್​ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ. ಒತ್ತಡ ಬಂದರೂ ನಾವು ಕೇರ್ ಮಾಡೋದಿಲ್ಲ ಎಂದು ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಪ್ರಕರಣದ ತನಿಖೆಗೆ ಎಸ್‌ಐಟಿ ತಂಡ ರಚಿಸಬೇಕು ಎಂದು ಸುಪ್ರೀಂ ಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸೇರಿದಂತೆ ಅನೇಕ ವಕೀಲರು ಸಿಎಂ ಗೆ ಮನವಿ ಸಲ್ಲಿಸಿದ್ದರು.

ಪೊಲೀಸ್ಠಾಣೆಗೆ ದೂರು

ಧರ್ಮಸ್ಥಳ ಗ್ರಾಮದ ಅರಣ್ಯ ಪ್ರದೇಶಗಳಲ್ಲಿ ಅಕ್ರಮವಾಗಿ ಹಲವು ಶವಗಳನ್ನು ಹೂತಿಡಲಾಗಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ವ್ಯಕ್ತಿಯೋರ್ವ ತಾನೇ ಶವ ಹೂತಿಟ್ಟುದ್ದು ಎಂದು ಪೊಲೀಸರ ಬಳಿ ಒಪ್ಪಿಕೊಂಡಿದ್ದಾರೆ. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Leave a Comment