ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ” : ಡಿಸಿಎಂ ಡಿ.ಕೆ ಶಿವಕುಮಾರ್

On: July 19, 2025 9:39 PM
Follow Us:

ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕೆ ಮಾಡಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆಎಂದು ಟೀಕಿಸಿದರು.

ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ಕಾಂಗ್ರೆಸ್ ಸರ್ಕಾರದ ಅಭಿವೃದ್ಧಿ ಯೋಜನೆಗಳು ಜನರ ಕಣ್ಣಿಗೆ ಕಾಣುತ್ತಿವೆ. ನಮ್ಮ ಗ್ಯಾರಂಟಿ ಟೀಕಿಸಿದ್ದ ಬಿಜೆಪಿ ಬೇರೆ ರಾಜ್ಯಗಳಲ್ಲಿ ಅದನ್ನೇ ನಕಲು ಮಾಡುತ್ತಿದೆ. ವಿರೋಧ ಪಕ್ಷಗಳ ಟೀಕೆಗಳು ಸಾಯುತ್ತವೆ, ನಮ್ಮ ಕೆಲಸ ಉಳಿಯುತ್ತವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮೈಸೂರಿನಲ್ಲಿ ಶನಿವಾರ ನಡೆದ ವಿವಿಧ ಇಲಾಖೆಗಳ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

“ನಮ್ಮ ಗ್ಯಾರಂಟಿ ಯೋಜನೆಗಳು ದೇಶಕ್ಕೇ ಮಾದರಿ. ಈ ಗ್ಯಾರಂಟಿ ಯೋಜನೆಗಳು ಸುಳ್ಳು, ಇದರಿಂದ ರಾಜ್ಯ ದಿವಾಳಿಯಾಗುತ್ತದೆ ಎಂದು ಪ್ರಧಾನಮಂತ್ರಿಗಳಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೂ ಎಲ್ಲರೂ ಟೀಕೆ ಮಾಡಿದರು. ನಂತರ ನಡೆದ ಮಧ್ಯಪ್ರದೇಶ, ಮಹಾರಾಷ್ಟ್ರ, ದೆಹಲಿ, ಹರಿಯಾಣ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಗಿಂತ ಮೊದಲೇ ಗ್ಯಾರಂಟಿ ಯೋಜನೆ ಘೋಷಣೆ ಮಾಡಿದ್ದಾರೆ. ಇತ್ತೀಚೆಗೆ ಬಿಹಾರದಲ್ಲೂ ನಮ್ಮದೇ ಗ್ಯಾರಂಟಿ ಯೋಜನೆ ನಕಲು ಮಾಡಿದ್ದಾರೆ” ಎಂದು ಟೀಕಿಸಿದರು.

“ಕಮಲ ಕೆರೆಯಲ್ಲಿದ್ದರೆ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿರುವ ಕಾರಣ ಜನರ ಬದುಕಿಗಾಗಿ ಐದು ಗ್ಯಾರಂಟಿ ಯೋಜನೆಗಳನ್ನು ನೀಡಲಾಗಿದೆ. ಆ ಮೂಲಕ ರಾಜ್ಯದ ಜನರ ಋಣ ತೀರಿಸಲಾಗುತ್ತಿದೆ” ಎಂದರು.

“ಐದು ಬೆರಳು ಸೇರಿ ಕೈ ಮುಷ್ಟಿಯಾಯಿತು, ಐದು ಗ್ಯಾರಂಟಿ ಸೇರಿ ಕೈ ಗಟ್ಟಿಯಾಯಿತು. ನಾವು ಮಾಡಿದ ಕೆಲಸಗಳು ಜನರ ಕಣ್ಣಿಗೆ ಕಾಣುತ್ತಿವೆ. ನಾವು ಇಲ್ಲಿಗೆ ಜನರಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ನಿಮ್ಮ ಋಣ ತೀರಿಸಲು ಬಂದಿದ್ದೇವೆ. ನಮ್ಮ ಸರ್ಕಾರ ಬಂದ ನಂತರ ನಾನು ಹಾಗೂ ಸಿದ್ದರಾಮಯ್ಯ ಅವರು ತಾಯಿ ಚಾಮುಂಡೇಶ್ವರಿ ದೇವಾಲಯಕ್ಕೆ ಹೋಗಿ ಐದು ವರ್ಷದ ಗೃಹಲಕ್ಷ್ಮೀ ಯೋಜನೆ ಹಣವನ್ನು ತಾಯಿಯ ಪಾದಕ್ಕೆ ಅರ್ಪಿಸಿ ಆಶೀರ್ವಾದ ಪಡೆದೆವು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

“ರಾಹುಲ್ ಗಾಂಧಿ ಅವರು ಭಾರತ ಜೋಡೋ ಯಾತ್ರೆ ನಡೆಸಿದರು. ನಮ್ಮ ರಾಜ್ಯದಲ್ಲಿ ರಾಹುಲ್ ಗಾಂಧಿ ಯಾತ್ರೆ ನಡೆಸಿದ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. ಇದೇ ಸಂದರ್ಭದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದರು” ಎಂದರು.

K.M.Sathish Gowda

Join WhatsApp

Join Now

Facebook

Join Now

Leave a Comment