ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ತಲೆಬುರುಡೆ ಪ್ರಕರಣ; ಧರ್ಮಸ್ಥಳ, ಧರ್ಮಾಧಿಕಾರಿ ವಿರುದ್ಧ ಮಾನಹಾನಿ, ಆಧಾರ ರಹಿತ ಆರೋಪ ಮಾಡದಂತೆ ಆದೇಶ

On: July 19, 2025 10:36 PM
Follow Us:

ರಾಜ್ಯಸಭಾ ಸದಸ್ಯರೂ ಅಗಿರುವ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಧರ್ಮಸ್ಥಳ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಸಿವಿಲ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಆಧಾರ ರಹಿತ ಹಾಗೂ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ನೀಡಿದೆ.

ಬೆಂಗಳೂರು: ರಾಜ್ಯಸಭಾ ಸದಸ್ಯರೂ ಅಗಿರುವ ಪದ್ಮವಿಭೂಷಣ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಕುಟುಂಬ ಹಾಗೂ ಧರ್ಮಸ್ಥಳ ವಿರುದ್ಧ ಕೇಳಿ ಬರುತ್ತಿರುವ ಆರೋಪಗಳಿಗೆ ಸಂಬಂಧಿಸಿದಂತೆ ಬೆಂಗಳೂರು ಸಿವಿಲ್ ಕೋರ್ಟ್ ಮಹತ್ವದ ಆದೇಶ ನೀಡಿದ್ದು, ಆಧಾರ ರಹಿತ ಹಾಗೂ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ತಡೆಯಾಜ್ಞೆ ನೀಡಿದೆ.

ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟಿನಲ್ಲಿ ಡಿ. ಹರ್ಷೇಂದ್ರ ಕುಮಾರ್ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ್ದು, ನ್ಯಾ. ವಿಜಯ್ ಕುಮಾರ್ ಅವರಿದ್ದ ಏಕ ಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ. ನ್ಯಾಯವಾದಿ ರಾಜಶೇಖರ ಹಿಲ್ಯಾರ್ ಅವರ ವಾದವನ್ನು ಆಲಿಸಿದ ನ್ಯಾಯಾಲಯ ಅರ್ಜಿದಾರರ ಕುಟುಂಬ, ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನ, ಧರ್ಮಸ್ಥಳ ಹಾಗೂ ಶ್ರೀಕ್ಷೇತ್ರದ ಕುರಿತು ಯಾವುದೇ ಮಾನಹಾನಿಕರ ಹೇಳಿಕೆಗಳನ್ನು ಒಳಗೊಂಡ ಹಾಗೂ ಸಾಕ್ಷ್ಯ ರಹಿತ ಆರೋಪಗಳನ್ನು ಮಾಡದಂತೆ ಆದೇಶಿಸಿದೆ. ಹಾಗೇ ಈಗಾಗಲೇ ಯುಟ್ಯೂಬ್ ಸೇರಿದಂತೆ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿರುವ ವಿಡಿಯೊಗಳನ್ನು ಡಿಲೀಟ್‌ ಮಾಡಲು ಆದೇಶ ನೀಡಿದೆ.

ವಾಸ್ತವದಲ್ಲಿ ಈ ಪ್ರಕರಣಕ್ಕೂ ಧರ್ಮಸ್ಥಳಕ್ಕೂ ಯಾವುದೇ ಸಂಬಂಧವಿಲ್ಲ, ಕ್ಷೇತ್ರದಿಂದ ನಡೆಸಲಾಗುತ್ತಿರುವ ಸತ್ಕಾರ್ಯಗಳನ್ನು ಸಹಿಸದ ಹಾಗೂ ಕ್ಷೇತ್ರದ ಏಳಿಗೆಯನ್ನು ಸಹಿಸದ ಕೆಲ ದುಷ್ಟ ಶಕ್ತಿಗಳು ವಿನಾ ಕಾರಣ ಪೂರ್ವಾಗ್ರಹ ಪೀಡಿತರಾಗಿ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಪವಿತ್ರ ಕ್ಷೇತ್ರವಾದ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಮತ್ತು ಅವರ ಕುಟುಂಬದ ವಿರುದ್ಧ ಸಂಚು ರೂಪಿಸಿ ಅಪಪ್ರಚಾರ ಮಾಡುವ ಮೂಲಕ ತೇಜೋವಧೆ ಮಾಡುತ್ತಿದ್ದಾರೆ. ಇದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಆಗುತ್ತಿದೆ ಎಂದು ಆರೋಪಿಸಲಾಗಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment