ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಈ ಕೇಸ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಕೂಡ ಟ್ವೀಟ್ ಮಾಡುವ ಮೂಲಕ ಸತ್ಯದ ಪರ ಧ್ವನಿಯೆತ್ತಿದ್ದಾರೆ.
ಬೆಂಗಳೂರು: ಕಳೆದ ಕೆಲ ದಿನಗಳಿಂದ ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವಗಳನ್ನ ಹೂತಿಟ್ಟ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದೆ. ಈತನ್ಮಧ್ಯೆ ನಟಿ ರಮ್ಯಾ ದಿವ್ಯಾ ಸ್ಪಂದನ ಕೂಡ ಟ್ವೀಟ್ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್ ಮೀಡಿಯಾದಲ್ಲಿ ಈ ಕೇಸ್ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದ್ದು, ಈ ಪ್ರಕರಣದ ಬಗ್ಗೆ ಸೂಕ್ತ ತನಿಖೆ ನಡೆಯಲಿ, ಎಸ್ಐಟಿ (SIT) ರಚನೆಯಾಗಲಿ ಎಂದು ಆನೇಕರು ಆಗ್ರಹಿಸಿದ್ದಾರೆ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ರಮ್ಯಾ ಅವರು ಕೂಡ ಟ್ವೀಟ್ ಮಾಡುವ ಮೂಲಕ ಸತ್ಯದ ಪರ ಧ್ವನಿಯೆತ್ತಿದ್ದಾರೆ.
ಧರ್ಮಸ್ಥಳದಲ್ಲಿ ಅಸಹಜ ಸಾವುಗಳ ವದಂತಿ ಕೇಸ್ ವಿಚಾರದಲ್ಲಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ನಟಿ ರಮ್ಯಾ, ‘ಧರ್ಮಸ್ಥಳದಲ್ಲಿ ಸಾಮೂಹಿಕ ಸಮಾಧಿ ಮತ್ತು ಮಹಿಳೆಯರ ನಾಪತ್ತೆ ಘಟನೆಗಳ ಬಗ್ಗೆ ಕೇಳಿ ನನಗೆ ತುಂಬಾ ಆಘಾತವಾಗಿದೆ. ಧರ್ಮಸ್ಥಳ ಎಂಬುದು ಅನೇಕ ಮಂದಿಗೆ ಆರಾಧನೆಯ ಸ್ಥಳವಾಗಿದೆ. ಕರ್ನಾಟಕದ ಜನರು ಈ ಪೂಜ್ಯ ಸ್ಥಳವನ್ನು ಹೆಚ್ಚು ಗೌರವಿಸುತ್ತಾರೆ. ಈ ಪ್ರಕರಣದ ಬಗ್ಗೆ ನ್ಯಾಯಯುತ ತನಿಖೆಯಾಗಬೇಕು ಎಂದು ನಾನು ಆಶಿಸುತ್ತೇನೆ. ನಾವು ಸತ್ಯವನ್ನು ತಿಳಿದುಕೊಳ್ಳಬೇಕು’ ಎಂದು ಟ್ವೀಟ್ ಮಾಡಿದ್ದಾರೆ.