ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಭಾರೀ ಮಳೆ, ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್​.. ಯಾವೆಲ್ಲ ಜಿಲ್ಲೆಗಳಿಗೆ ಮಳೆ ಎಚ್ಚರಿಕೆ..?

On: July 24, 2025 8:06 PM
Follow Us:

ಬೆಂಗಳೂರು: ಮುಂದಿನ 24 ಗಂಟೆಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮಾತ್ರವಲ್ಲ, ಮೂರು ಜಿಲ್ಲೆಗಳಿಗೆ ರೆಡ್​ ಅಲರ್ಟ್​ ಘೋಷಣೆ ಮಾಡಿದೆ.

ಯಾವೆಲ್ಲ ಜಿಲ್ಲೆಗಳಿಗೆ ರೆಡ್​ ಅಲರ್ಟ್​..?

ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇನ್ನು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಬೆಂಗಳೂರು ಸೇರಿದಂತೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಿದೆ. ಬೆಂಗಳೂರಲ್ಲಿ ಇಡೀ ದಿನ ಮೋಡ ಕವಿದ ವಾತಾವರಣ ಮುಂದುವರಿದಿದೆ. ಇನ್ನು, ಕರಾವಳಿ ಜಿಲ್ಲೆಗಳು ಮಾತ್ರವಲ್ಲ, ಮಲೆನಾಡು ಭಾಗಗಳಲ್ಲೂ ಭಾರೀ ಮಳೆ ಸುರಿಯುತ್ತಿದೆ. ಇದರಿಂದ ಅಲ್ಲಲ್ಲಿ ಗುಡ್ಡ ಕುಸಿತ ಸಂಭವಿಸಿದೆ.

ಭಾರಿ ಮಳೆ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಂಗಳೂರು ತಾಲೂಕಿನ ಶಾಲೆ ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಅಂಗನವಾಡಿಯಿಂದ ಪದವಿಪೂರ್ವ ಕಾಲೇಜು ವರೆಗೆ ರಜೆ ಘೋಷಿಸಿ ಮಂಗಳೂರು ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ. ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್‌ ಘೋಷಣೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳು, ಪದವಿಪೂರ್ವ, ಐಟಿಐ ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಸ್ವರೂಪಾ.ಟಿ.ಕೆ ಆದೇಶಿಸಿದ್ದಾರೆ. ಪದವಿ ತರಗತಿಗಳು ಎಂದಿನಂತೆ ನಡೆಯಲಿವೆ ಎಂದು ಆದೇಶದಲ್ಲಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment