ಸಿಎಂ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಇನ್ನುಮುಂದೆ ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥ ಮಾಡಿಕೊಂಡರೂ ಶಿಕ್ಷೆಯಾಗಲಿದೆ. ಇದಕ್ಕೆ ಸಂಬಂಧಿಸಿ ಕಾನೂನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರ ನಿರ್ಧಾರ ಮಾಡಿದೆ.
ಬಾಲ್ಯವಿವಾಹ ಪ್ರಕರಣಗಳ ತಡೆಗೆ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಇನ್ನುಮುಂದೆ ಬಾಲ್ಯವಿವಾಹ ಅಷ್ಟೇ ಅಲ್ಲ, ನಿಶ್ಚಿತಾರ್ಥ ಮಾಡಿಕೊಂಡರೂ ಶಿಕ್ಷೆಯಾಗಲಿದೆ. ಈ ಸಂಬಂಧ ʼಬಾಲ್ಯವಿವಾಹ ನಿಷೇಧ (ಕರ್ನಾಟಕ ತಿದ್ದುಪಡಿ) ವಿಧೇಯಕ, 2025ʼಕ್ಕೆ ಅನುಮೋದನೆ ನೀಡಲಾಗಿದ್ದು, ವಿಧೇಯಕವನ್ನು ವಿಧಾನ ಮಂಡಲದಲ್ಲಿ ಮಂಡಿಸಲು ಸಚಿವ ಸಂಪುಟ ನಿರ್ಧರಿಸಿದೆ.