ಶ್ರಾವಣ ಮಾಸ ಆರಂಭವಾಯಿತು ಎಂದಾಕ್ಷಣವೇ ಹಿಂದು ಹಬ್ಬಗಳು ಸಾಲು ಸಾಲಾಗಿ ಒಂದರ ಹಿಂದೆ ಒಂದು ಬರತೊಡಗುತ್ತದೆ. ಶ್ರಾವಣ ಮಾಸ ಹಾಗೂ ಮಳೆಗಾಲದಲ್ಲಿಯೇ ಹಬ್ಬಗಳು ಹೆಚ್ಚಾಗಿ ಬರಲು ಕಾರಣವೇನು. ಕಂಡಿತ ಇದಕ್ಕೆ ಕಾರಣ ಇದ್ದೆ ಇದೆ. ಅದನ್ನು ತಿಳಿಯುವ ಪ್ರಯತ್ನ ಮಾಡೋಣ. ಇಂದು ಶ್ರಾಮಣದ ಮೊದಲ ಹಬ್ಬದ ಕುರಿತು ತಿಳಿದುಕೊಳ್ಳುವ ಪ್ರಯತ್ನ ಈ ಲೇಖನ. ಹಿಂದೂ ಪಂಚಾಂಗದ ಪ್ರಕಾರ ಎಲ್ಲ ಹಬ್ಬಗಳಿಗೆ ಮುನ್ನುಡಿಯಂತೆ ಬರುವ ಹಬ್ಬ ಎಂದರೆ ಅದು ನಾಗರ ಪಂಚಮಿ
ಪಂಚಮಿಯು ಭಾರತದ ಎಲ್ಲ ಭಾಗಗಳಲ್ಲಿ ಹಿಂದೂಗಳು ಆಚರಿಸುವ ಒಂದು ಪವಿತ್ರ ಹಬ್ಬ. ಇದನ್ನು ಶ್ರಾವಣಮಾಸದ ಶುಕ್ಲಪಕ್ಷದ ಪಂಚಮಿಯಂದು ಆಚರಿಸಲಾಗುತ್ತದೆ. ಈ ದಿನ
ದಂದು, ನಾಗ ದೇವತೆಯನ್ನು ಪೂಜಿಸಲಾಗುತ್ತದೆ. ಪೂಜೆಯ ಅಂಗವಾಗಿ ದೇವಸ್ಥಾನ ಹಾಗೂ ಹುತ್ತಗಳಿಗೆ ಭೇಟಿ ನೀಡಿ, ಎಲ್ಲ ತೊಂದರೆ ತಾಪತ್ರಯಗಳಿಂದ ತಮ್ಮನ್ನು ರಕ್ಷಿಸಲೆಂದು ಬೇಡಿಕೊಂಡು ಜನರು ಹಾಲನ್ನು ಅರ್ಪಿಸುತ್ತಾರೆ. ಶ್ರಾವಣ ಶುದ್ಧ ಪಂಚಮಿಯಂದು ಆಚರಿಸಲ್ಪುಡುವ ಈ ಹಬ್ಬ ಮುಂದೆ ಬರಲಿರುವ ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ನವರಾತ್ರಿ, ದಸರಾ ಎಲ್ಲ ಶುಭ ಆಚರಣೆಗಳಿಗೆ ಮೊದಲ ಆರಂಭ ಅಥವಾ ಮೆಟ್ಟಿಲು ಎಂದೇ ಹೇಳಬಹುದು.