ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಾಸಕರ ಜತೆ ಸಿಎಂ ಸಭೆ; ಅದರಲ್ಲಿ ತಪ್ಪೇನಿದೆ ಎಂದ ಡಿ.ಕೆ.ಶಿವಕುಮಾರ್

On: July 29, 2025 8:38 PM
Follow Us:

ಉಪಮುಖ್ಯಮಂತ್ರಿಗಳನ್ನು ಸಿಎಂ ಕಡೆಗಣಿಸಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಡಿಸಿಎಂ ಡಿಕೆಶಿ ಅವರು ಪ್ರತಿಕ್ರಿಯಿಸಿ, ಅವರು ಮೊದಲು ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರ ಪಕ್ಷ, ಮನೆಯೇ ಅಸ್ತವ್ಯಸ್ತವಾಗಿದೆ. ಅವರ ಪಕ್ಷದ ಒಳಗೆ ಅನೇಕ ಮೇಲಾಟಗಳು ನಡೆಯುತ್ತಿವೆ. ಅವರ ಪಕ್ಷದ ನಾಯಕರ ಹೇಳಿಕೆಗಳನ್ನು ಎಲ್ಲರೂ ನೋಡಿದ್ದಾರೆ ಎಂದು ಟೀಕಿಸಿದ್ದಾರೆ.

“ಸಿಎಂ ಸಿದ್ದರಾಮಯ್ಯ ಅವರು ತಮಗೆ ಇರುವ ಅಧಿಕಾರವನ್ನು ಬಳಸಿಕೊಂಡು ಶಾಸಕರ ಸಭೆ ಮಾಡುತ್ತಿದ್ದು, ಇದರಲ್ಲಿ ತಪ್ಪೇನಿದೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಉತ್ತರಿಸಿದರು. ಮುಖ್ಯಮಂತ್ರಿಗಳು ನಿಮಗೆ ಆಹ್ವಾನ ನೀಡದೆ ಶಾಸಕರ ಸಭೆ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಉತ್ತರಿಸಿದ್ದಾರೆ.

“ಸುರ್ಜೇವಾಲ ಅವರು ಶಾಸಕರನ್ನು ಭೇಟಿ ಮಾಡಿದ ಬಳಿಕ ಅನೇಕ ವಿಚಾರಗಳನ್ನು ಸಿಎಂ ಗಮನಕ್ಕೆ ತಂದಿದ್ದು, ಶಾಸಕರ ಅಹವಾಲುಗಳ ವಿಚಾರವಾಗಿ ಸಿಎಂ ಸಭೆ ಮಾಡುತ್ತಿದ್ದಾರೆ. ಇದರಲ್ಲಿ ತಪ್ಪೇನೂ ಇಲ್ಲ. ಈ ಬಗ್ಗೆ ನನಗೆ ಯಾವುದೇ ಆಕ್ಷೇಪ ಇಲ್ಲ. ಈ ವಿಚಾರದಲ್ಲಿ ನನಗೆ ಏನೂ ಕಷ್ಟವಾಗದಿದ್ದರೂ, ನಿಮಗೆ ಏಕೆ (ಮಾಧ್ಯಮಗಳು) ಕಷ್ಟವಾಗುತ್ತಿದೆ ” ಎಂದು ಮರು ಪ್ರಶ್ನಿಸಿದರು.

ನೀವು ಕೆಪಿಸಿಸಿ ಅಧ್ಯಕ್ಷರು ಹಾಗೂ ಡಿಸಿಎಂ ಆಗಿದ್ದು ನಿಮ್ಮನ್ನು ಕರೆದಿಲ್ಲ ಎಂದಾಗ, “ಈ ವಿಚಾರವಾಗಿ ನನಗೆ ಯಾವುದೇ ಆಕ್ಷೇಪವಿಲ್ಲ. ಬೆಂಗಳೂರಿನ ಅಭಿವೃದ್ಧಿಗೆ ನಾವು ಪ್ರತ್ಯೇಕ ಅಜೆಂಡಾ ಹೊಂದಿರುವ ಕಾರಣಕ್ಕೆ ಆನಂತರ ಚರ್ಚೆ ನಡೆಸುತ್ತೇವೆ. ಬೆಂಗಳೂರಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನದ ಅವಶ್ಯಕತೆಯಿದೆ. ನಾನು ಸಹ ಒಂದಷ್ಟು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿದ್ದೇನೆ” ಎಂದರು.

ಗೊಬ್ಬರ ಕೇಳಿದವರಿಗೆ ಗುಂಡು ಹೊಡೆದಿದ್ದು ಬಿಜೆಪಿ

ಬಿಜೆಪಿಯವರು ಯೂರಿಯಾ ಕೊರತೆ ಬಗ್ಗೆ ಪ್ರತಿಭಟನೆ ನಡೆಸುವ ಬಗ್ಗೆ ಕೇಳಿದಾಗ, “ಬಿಜೆಪಿ ಅವರ ಮೇಲೆ ಅವರೇ ಪ್ರತಿಭಟನೆ ಮಾಡಿಕೊಳ್ಳಬೇಕು ಅಷ್ಟೇ. ಈ ಹಿಂದೆ ಗೊಬ್ಬರ ಕೊಡಲು ಆಗದೇ ರೈತರ ಮೇಲೆ ಗುಂಡು ಹಾರಿಸಿದ್ದರು. ನಾವು ಅಂತಹ ಕೆಲಸ ಮಾಡುವುದಿಲ್ಲ. ಮಳೆ ಹೆಚ್ಚಾಗಿರುವ ಕಾರಣ ಕೃಷಿ ಚಟುವಟಿಕೆ ಜಾಸ್ತಿಯಾಗಿದೆ. ಹೀಗಾಗಿ ರಸಗೊಬ್ಬರ ಬೇಡಿಕೆ ಹೆಚ್ಚಾಗಿದೆ. ಕೇಂದ್ರ ಸರ್ಕಾರ ಹೆಚ್ಚುವರಿ ರಸಗೊಬ್ಬರ ಪೂರೈಕೆ ಮಾಡಬೇಕು ಎಂದು ಸಂಸದರು ಒಪ್ಪಿಕೊಂಡಿದ್ದಾರೆ. ಕೂಡಲೇ ಗೊಬ್ಬರ ಸಿಕ್ಕರೆ ನಮ್ಮ ರೈತರಿಗೆ ಒಳ್ಳೆಯದಾಗುತ್ತದೆ ಎಂದು ನಾವು ಒತ್ತಡ ಹಾಕುತ್ತಿದ್ದೇವೆ” ಎಂದರು.

“ಬಿಜೆಪಿ ಅವರ ಕೇಂದ್ರ ಕೃಷಿ ಸಚಿವರು, ರಾಸಾಯನಿಕ ಗೊಬ್ಬರ ಖಾತೆ ಸಚಿವರ ವಿರುದ್ಧ ಪ್ರತಿಭಟನೆ ಮಾಡಬೇಕಷ್ಟೆ. ನಮ್ಮ ಮೇಲೆ ಏಕೆ ಪ್ರತಿಭಟನೆ ಮಾಡುತ್ತಾರೆ. ಗೊಬ್ಬರವೇನು ನಮ್ಮ ಬಳಿ ಇದೆಯೇ? ಆ ಇಲಾಖೆ, ಗೊಬ್ಬರದ ಕಾರ್ಖಾನೆ ಏನು ನಮ್ಮ ಬಳಿ ಇದೆಯೇ? ಅವರು ಕೊಡುವುದನ್ನು ಹಂಚುವುದು ನಮ್ಮ ಕೆಲಸವಷ್ಟೇ” ಎಂದು ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Leave a Comment