ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ರಸಗೊಬ್ಬರ ಕಾಳಸಂತೆಕೋರರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

On: July 31, 2025 9:14 PM
Follow Us:

ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯವಾದ ರಸಗೊಬ್ಬರ ಸರಬರಾಜು ಮಾಡದೆ ಅನ್ಯಾಯ ಎಸಗಿರುವ ಸಂದರ್ಭದಲ್ಲಿ ಕಾಳಸಂತೆಕೋರರು ತಲೆ ಎತ್ತದಂತೆ ತೀವ್ರ ನಿಗಾ ವಹಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಅಸಹಕಾರದ ನಡುವೆಯೂ ರಾಜ್ಯದ ರೈತರಿಗೆ ಅನಾನುಕೂಲ ಆಗದಂತೆ ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಈ ನಡುವೆ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಸಿ ದುರ್ಲಾಭ ಮಾಡಿಕೊಳ್ಳಲು ಕಾಳಸಂತೆಕೋರರು ಪ್ರಯತ್ನಿಸುತ್ತಿರುವ ಬಗ್ಗೆ ತೀವ್ರ ನಿಗಾ ವಹಿಸುವಂತೆ ಸಿಎಂ ಸೂಚನೆ ನೀಡಿದ್ದಾರೆ.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಸಚಿವರು ಮತ್ತು ಶಾಸಕರ ಜತೆ ಸಭೆ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯ ನಡುವೆಯೇ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ದೂರವಾಣಿ ಮೂಲಕ ಸ್ಪಷ್ಟ ಸೂಚನೆ ನೀಡಿದ್ದಾರೆ. ‌

ಜಿಲ್ಲೆ ಮತ್ತು ತಾಲೂಕು, ಹೋಬಳಿ ಎಲ್ಲೂ ರಸಗೊಬ್ಬರಕ್ಕೆ ಕೃತಕ ಅಭಾವ ಸೃಷ್ಟಿಯಾಗಬಾರದು. ಈ ರೀತಿ ಅಭಾವ ಸೃಷ್ಟಿಸುತ್ತಿರುವವರ ಬಗ್ಗೆ ತೀವ್ರ ನಿಗಾ ಇಟ್ಟು ಕ್ರಮ ಕೈಗೊಳ್ಳಲು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Leave a Comment