ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ 71ನೇ ಕನ್ನಡ ರಾಜ್ಯೋತ್ಸವ ಆಚರಣೆ; ಧ್ವಜಾರೋಹಣ ನೆರವೇರಿಸಿ ಸಿಹಿ ಹಂಚಿ ಸಂಭ್ರಮ

On: November 2, 2026 7:37 PM
Follow Us:

ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ವತಿಯಿಂದ 71ನೇ ಕನ್ನಡ ರಾಜ್ಯೋತ್ಸವವನ್ನು ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್.ಎಸ್. ಅವರ ನೇತೃತ್ವದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಕೆ.ಬಿ. ಅವರು ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣದ ಬಳಿಕ ಸಾರ್ವಜನಿಕರಿಗೆ ಸಿಹಿ ಹಂಚುವ ಮೂಲಕ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ವೇದಿಕೆಯ ಜಿಲ್ಲಾ ಗೌರವಾಧ್ಯಕ್ಷ ಶಂಕರ್ ಲಿಂಗೇಗೌಡ ಅವರು, ಹರಿದು ಹಂಚಿಹೋಗಿದ್ದ ಕರ್ನಾಟಕದ ಭೂಪ್ರದೇಶಗಳನ್ನು ಏಕೀಕರಿಸಿ ಅಖಂಡ ಕರ್ನಾಟಕ ನಿರ್ಮಾಣವಾದ ಐತಿಹಾಸಿಕ ದಿನವೇ ಕನ್ನಡ ರಾಜ್ಯೋತ್ಸವ. ಇಂತಹ ಮಹತ್ವದ ಕಾರ್ಯಕ್ರಮದಲ್ಲಿ ಭಾಗವಹಿಸಿರುವುದು ಹೆಮ್ಮೆಯ ಸಂಗತಿ ಎಂದು ತಿಳಿಸಿದರು.

ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸೈಯದ್ ಮುಜೀಬ್ ಮಾತನಾಡಿ, ನವೆಂಬರ್ 1 ಕನ್ನಡಿಗರ ಪಾಲಿಗೆ ನಾಡಹಬ್ಬ. ಈ ಹಬ್ಬವನ್ನು ಅದ್ಧೂರಿಯಾಗಿ ಆಚರಿಸುವುದು ಪ್ರತಿಯೊಬ್ಬ ಕನ್ನಡಿಗನ ಹೆಮ್ಮೆ. ಕನ್ನಡ ನಾಡು, ನುಡಿ ಮತ್ತು ಸಂಸ್ಕೃತಿಗೆ ಧಕ್ಕೆ ತರುವ ಪ್ರಯತ್ನಗಳನ್ನು ಸಹಿಸುವುದಿಲ್ಲ. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿ ಕಾರ್ಯಕ್ರಮಗಳಿಗೆ ಅಡ್ಡಿಪಡಿಸುವ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಸಂಘಟನೆಯ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಿ, ಕಾನೂನುಬದ್ಧವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಎಚ್.ಎಸ್. ಮಾತನಾಡಿ, ಕನ್ನಡ ರಾಜ್ಯೋತ್ಸವ ಪ್ರತಿಯೊಬ್ಬ ಕನ್ನಡಿಗನಿಗೂ ಹೆಮ್ಮೆಯ ದಿನವಾಗಿದೆ. ನಮ್ಮ ಸಂಘಟನೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗರಾಜ್ ಕೆ.ಬಿ. ಅವರು ಧ್ವಜಾರೋಹಣ ನೆರವೇರಿಸಿರುವುದು ಸಂತಸದ ಸಂಗತಿ. ರಾಜ್ಯದಲ್ಲಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡ ಅವರ ನೇತೃತ್ವದಲ್ಲಿ ‘ಜೈ ಕನ್ನಡ ರಥಯಾತ್ರೆ’ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಈ ರಥಯಾತ್ರೆ ಶಿವಮೊಗ್ಗಕ್ಕೆ ಆಗಮಿಸುವ ಸಂದರ್ಭದಲ್ಲಿ ಎಲ್ಲ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು. ಕನ್ನಡ ಶಾಲೆಗಳ ಉಳಿವು ಮತ್ತು ಕನ್ನಡ ಭಾಷೆಯ ಬೆಳವಣಿಗೆಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುವಂತೆ ಒತ್ತಾಯಿಸಿ, ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಗೌರವಾಧ್ಯಕ್ಷ ಶಂಕರ್ ಲಿಂಗೇಗೌಡ, ಜಿಲ್ಲಾ ಉಪಾಧ್ಯಕ್ಷ ಸೈಯದ್ ಮುಜೀಬ್, ಗಂಗಾಧರ್, ಜಿಲ್ಲಾ ಮಹಾಪ್ರಧಾನ ಕಾರ್ಯದರ್ಶಿ ಮಹಮ್ಮದ್ ಶಫಿ, ಜಿಲ್ಲಾ ಕಾರ್ಯದರ್ಶಿ ಕರವೇ ಸಾಧಿಕ್, ಜಿಲ್ಲಾ ಸಂಘಟನಾ ಸಹಕಾರ್ಯದರ್ಶಿ ನೂರುಲ್ಲಾ ಖಾನ್, ನಗರ ಅಧ್ಯಕ್ಷ ಜೀವನ್, ಮಹಿಳಾ ಘಟಕದ ಅಧ್ಯಕ್ಷೆ ಕವಿತಾ ಸಿ., ನಗರ ಅಧ್ಯಕ್ಷೆ ಗೀತಾ, ಜಿಲ್ಲಾ ಉಪಾಧ್ಯಕ್ಷೆ ಪದ್ಮಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರತಿ ತಿವಾರಿ, ಅನುಪಮಾ, ರೋಸಲಿಯನ್ ಸೇರಿದಂತೆ ವೇದಿಕೆಯ ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಅಕ್ಷರಗಳ ಮೂಲಕ ಅರಳಿದ ಪ್ರತಿಭೆಗೆ ರಾಜ್ಯೋತ್ಸವದ ಗೌರವ! ಶಿಕ್ಷಕ ವೃತ್ತಿಯೊಂದಿಗೆ ಸಾಹಿತ್ಯದ ಕೃಷಿ; 14 ಕೃತಿಗಳ ಮೂಲಕ ಕನ್ನಡ ಸಾರಸ್ವತ ಲೋಕಕ್ಕೆ ಕೊಡುಗೆ ನೀಡಿದ ಸಂತೋಷ್ ಬಿದರಗಡ್ಡೆ ಅವರಿಗೆ 2026ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ

ಗುರುತತ್ತ್ವದ ಎತ್ತರ ಅರಿಯದೆ ಗುರುಸೇವೆಯನ್ನು ಅಳೆಯಲು ಸಾಧ್ಯವೇ? ನ್ಯಾಯದಾಸೋಹದಿಂದ ಜಲಸಂರಕ್ಷಣೆಯವರೆಗೆ… ಟೀಕೆಗಳಾಚೆ ನಿಂತಿರುವ ಶ್ರೀ ತರಳಬಾಳು ಜಗದ್ಗುರುಗಳ ಬಹುಮುಖ ಸಾಧನೆಗಳು!

ಕನ್ನಡವೇ ಉಸಿರು, ಕನ್ನಡವೇ ಬದುಕು; ಕರ್ನಾಟಕವೇ ಭಾರತದ ಭವಿಷ್ಯ! ಕನ್ನಡದ ಅಸ್ಮಿತೆಗೆ ನಾಡಧ್ವಜದ ಅಧಿಕೃತ ಮಾನ್ಯತೆಯ ಚಿಂತನೆ; ಶಿಕ್ಷಣ, ಉದ್ಯೋಗ, ಕೃಷಿ ಮತ್ತು ಕ್ರೀಡಾ ಕ್ಷೇತ್ರಗಳ ಅಭಿವೃದ್ಧಿಗೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಇಂಡಿಯಾ ಮೈತ್ರಿಕೂಟದ ಆರು ಗಂಭೀರ ಆರೋಪ: ವಜಾಗೊಳಿಸಲು ಆಗ್ರಹ, ದೇಶದ್ರೋಹದ ವಿಚಾರಣೆಗೂ ಒತ್ತಾಯ!

ಜನಸಾಮಾನ್ಯರ ಜೇಬಿಗೆ ಕಾಂಗ್ರೆಸ್ ಸರ್ಕಾರದ ಕತ್ತರಿ! ಹಾಲು, ಮೊಸರು ದರ ಏರಿಕೆ ವಿರುದ್ಧ ರಾಜ್ಯಾದ್ಯಂತ ಬಿಜೆಪಿ ಸಮರದ ಎಚ್ಚರಿಕೆ: ಬಿ.ವೈ. ವಿಜಯೇಂದ್ರ

ಕಾರ್ಯಕರ್ತರ ಬೆವರಿನ ಹನಿಯಿಂದ ಇಂದಿರಾ ಭವನ, ಏಳೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ವಿಜಯದ ಸಂಕಲ್ಪ; ಮಂಡ್ಯದಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ರಣಕಹಳೆ!

Leave a Comment