ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

On: August 2, 2025 6:19 PM
Follow Us:

ಹಾಸನದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಶಿಕ್ಷೆಯ ಅವಧಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ಪ್ರಕಟಿಸಿದೆ. ಕೆಆರ್‌ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ಗೆ ಜೀವಾವಧಿ ಶಿಕ್ಷೆಯನ್ನು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ಪ್ರಕಟಿಸಿದ್ದಾರೆ. ನಿನ್ನೆಯೇ ಅವರು ದೋಷಿ ಎಂದು ನ್ಯಾಯಾಲಯ ತೀರ್ಪು ನೀಡಿತ್ತು.

ಮೈಸೂರಿನ ಕೆ.ಆರ್ ನಗರದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಜತೆಗೆ ಪ್ರಜ್ವಲ್‌ಗೆ ಒಟ್ಟು 11.6 ಲಕ್ಷ ದಂಡವನ್ನು ವಿಧಿಸಲಾಗಿದೆ. ಅಲ್ಲದೇ ಸಂತ್ರಸ್ತೆಗೆ 7 ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗಿದೆ.

ಐಪಿಸಿ ಸೆಕ್ಷನ್ 376(2)(ಕೆ) ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ, 376(2)(ಎನ್) ಪದೇ ಪದೇ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು, 5 ಲಕ್ಷ ದಂಡ, ಐಪಿಸಿ ಸೆಕ್ಷನ್ 354(ಎ) ಅಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ, ಐಪಿಸಿ ಸೆಕ್ಷನ್ 354(ಬಿ) ಅಡಿಯಲ್ಲಿ 7 ವರ್ಷ ಸೆರೆವಾಸ, 50,000 ದಂಡ, ಐಪಿಸಿ ಸೆಕ್ಷನ್ 354(ಸಿ) ಅಡಿಯಲ್ಲಿ 3 ವರ್ಷ ಸೆರೆವಾಸ 25,000 ದಂಡ, ಐಪಿಸಿ ಸೆಕ್ಷನ್ 506ರಡಿಯಲ್ಲಿ 2 ವರ್ಷ ಸೆರೆವಾಸ, 10,000 ದಂಡ, ಐಪಿಸಿ ಸೆಕ್ಷನ್ 201ರಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ, ಐಟಿ ಕಾಯ್ದೆ ಸೆಕ್ಷನ್ 66(ಇ) ಅಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ ವಿಧಿಸಲಾಗಿದೆ.

ಕೆಆರ್​ ನಗರದ ಮಹಿಳೆಯ ಮೇಲಿನ ಅತ್ಯಾಚಾರ, ಅಪಹರಣ ಪ್ರಕರಣದ ಸಂಕ್ಷಿಪ್ತ ಹಿನ್ನೆಲೆ

ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ 2024ರ ಲೋಕಸಭೆ ಚುನಾವಣೆ ಸಂದರ್ಭ ಸರಣಿ ಅತ್ಯಾಚಾರ ಆರೋಪ ಕೇಳಿಬಂದಿತ್ತು. ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎನ್ನಲಾದ ಅಶ್ಲೀಲ ವಿಡಿಯೋಗಳು ವೈರಲ್ ಆಗಿದ್ದವು. ಇದರಲ್ಲಿ ಮೈಸೂರಿನ ಕೆಆರ್ ನಗರದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪವೂ ಒಂದಾಗಿದೆ. ಅತ್ಯಾಚಾರ ಪ್ರಕರಣ ಬೆಳಕಿಗೆ ಬರಬಾರದು ಎಂದು ಮಹಿಳೆಯನ್ನು ಅಪಹರಿಸಿ ಹುಣಸೂರು ಬಳಿಯ ತೋಟದ ಮನೆಯಲ್ಲಿ ಕೂಡಿಹಾಕಲಾಗಿತ್ತು ಎಂಬ ಆರೋಪದ ಅಡಿ ದೂರು ದಾಖಲಾಗಿತ್ತು. ಈ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​ಡಿ ರೇವಣ್ಣ ಮತ್ತು ಭವಾನಿ ರೇವಣ್ಣ ಸೇರಿದಂತೆ ಒಟ್ಟು 9 ಆರೋಪಿಗಳಿದ್ದಾರೆ. ಹೆಚ್​ಡಿ ರೇವಣ್ಣ ಹಾಗೂ ಭವಾನಿ ರೇವಣ್ಣ ಜಾಮೀನಿನ ಮೇಲೆ ಹೊರಗಿದ್ದಾರೆ. ಪ್ರಮುಖ ಆರೋಪಿ ಪ್ರಜ್ವಲ್ ರೇವಣ್ಣ ಒಂದು ವರ್ಷದಿಂದ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಪ್ರಕರಣ ಸಂಬಂಧ 2024ರ ಮೇ 31ರಂದು ಪ್ರಜ್ವಲ್ ರೇವಣ್ಣರನ್ನು ಪೊಲೀಸರು ಬಂಧಿಸಿದ್ದರು. ಇದೀಗ ಅವರು ದೋಷಿ ಎಂದು ಸಾಬೀತಾಗಿದ್ದು, ಶಿಕ್ಷೆಯಾಗಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment