ಬೆಂಗಳೂರು: ಡೆತ್ನೋಟ್ ಬರೆದಿಟ್ಟು 7ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿರುವಂತಹ ಘಟನೆ ನಗರದ ಸಿಕೆ ಅಚ್ಚುಕಟ್ಟುವಿನಲ್ಲಿ ನಡೆದಿದೆ. ಗಾಂಧಾರ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಬೆಳಗ್ಗೆ ತಂದೆ ಬಾಲಕನ ರೂಮ್ಗೆ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಸಿಕೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತ್ಮಹತ್ಯೆ ಮಾಡಿಕೊಂಡ ಗಾಂಧಾರ್ನ ತಂದೆ ಮ್ಯೂಸಿಕ್ ಆರ್ಟಿಸ್ಟ್ ಹಾಗೂ ತಾಯಿ ಸವಿತಾ ಖ್ಯಾತ ಜಾನಪದ ಗಾಯಕಿ ಆಗಿ ಕೆಲಸ ಮಾಡುತ್ತಾರೆ.
ಡೆತ್ನೋಟ್ನಲ್ಲಿ ಏನಿದೆ? ನನ್ನ ತಪ್ಪುಗಳನ್ನು ದಯವಿಟ್ಟು ಕ್ಷಮಿಸಿ,..
14 ವರ್ಷಗಳ ಕಾಲ ನಾನು ಬದುಕಿದ್ದು ಅದರಲ್ಲೇ ತೃಪ್ತನಾಗಿದ್ದೇನೆ. 14 ವರ್ಷಗಳಲ್ಲಿ ನಾನು ಖುಷಿಯ ಕ್ಷಣ ಕಳೆದಿದ್ದೇನೆ ಅದೇ ಸಾಕು. ಸ್ವರ್ಗದಲ್ಲಿ ನಾನು ಖುಷಿಯಾಗಿದ್ದೇನೆ. ನಾನು ನನ್ನ ಸ್ನೇಹಿತರನ್ನು ಪ್ರೀತಿಸುತ್ತಿದ್ದೆ ಎಂದು ಅವರಿಗೆ ತಿಳಿಸಿ. ನನ್ನ ಶಾಲಾ ಸ್ನೇಹಿತರಿಗೂ ಈ ಮಾತನ್ನ ಹೇಳಿ. ಐ ಮಿಸ್ ಯೂ ಆಲ್- ಗುಡ್ಬೈ ಅಮ್ಮ ಎಂದು ಡೆತ್ನೋಟ್ ಬರೆಯಲಾಗಿದೆ.