ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಮುಂದಿನ 3 ದಿನಎಚ್ಚರಿಕೆ; ರಾಜ್ಯಾದ್ಯಂತ ಭಾರೀಮಳೆ.!”

On: August 6, 2025 10:19 PM
Follow Us:

ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಉತ್ತಮ ಮಳೆಯಾಗಿದೆ. ಇನ್ನು ಆ.9ರವರೆಗೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 20°C ಇರುವ ಸಾಧ್ಯತೆ ಇದೆ.

ಆಗಸ್ಟ್ 9ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ. ಮಂಡ್ಯ, ರಾಮನಗರ, ಮೈಸೂರು, ಕೋಲಾರ, ಮಂಡ್ಯ, ಮೈಸೂರು ಮುಂತಾದ ಕಡೆಗಳಲ್ಲಿ ಕೆಲವೆಡೆ ಗುಡುಗು ಸಹಿತ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಆಗಸ್ಟ್‌ 10 ಮತ್ತು 11ರಂದು ಕರಾವಳಿ ಜಿಲ್ಲೆಗಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

K.M.Sathish Gowda

Join WhatsApp

Join Now

Facebook

Join Now

Leave a Comment