ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಯೂಟ್ಯೂಬ್ ತಂಡದ ಮೇಲೆ ಧರ್ಮಸ್ಥಳದಲ್ಲಿ ಹಲ್ಲೆ! ಭಕ್ತರಲ್ಲಿ ಆಕ್ರೋಶ”

On: August 6, 2025 10:33 PM
Follow Us:

ಧರ್ಮಸ್ಥಳ: ವಿಡಿಯೊ ಮಾಡಲು ಹೋಗಿದ್ದ ನಾಲ್ವರು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳದಲ್ಲಿ ನಡೆದಿದೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದ್ದು, ಜನರನ್ನು ಚದುರಿಸಲು ಪೊಲೀಸರು ಲಘು ಲಾಠಿ ಚಾರ್ಜ್‌ ನಡೆಸಿದ್ದಾರೆ.

ಪ್ರತಿಷ್ಠಿತ ಕುಟುಂಬದ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಯೂಟೂಬರ್‌ಗಳಾದ ಅಜಯ್, ಅಭಿಷೇಕ್, ಸಂತೋಷ್ ಸೇರಿ ನಾಲ್ವರ ಮೇಲೆ ಹಲ್ಲೆ ನಡೆದಿದ್ದು, ಕ್ಯಾಮೆರಾಗಳನ್ನು ಹಾಳು ಮಾಡಲಾಗಿದೆ.

ಸೌಜನ್ಯಾ ಮನೆಗೆ ಭೇಟಿ ನೀಡುವುದಾಗಿ ಬಿಗ್‌ಬಾಸ್‌ ಮಾಜಿ ಸ್ಪರ್ಧಿ ರಜತ್ ಕಿಶನ್ ತಿಳಿಸಿದ್ದರು. ಈ ಬಗ್ಗೆ ರಜತ್‌ ಅವರಿಂದ ಮಾಹಿತಿ ಪಡೆಯುತ್ತಿದ್ದ ವೇಳೆ ಯೂಟ್ಯೂಬರ್‌ಗಳ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಯೂಟ್ಯೂಬರ್‌ಗಳ ಮೇಲೆ ಹಲ್ಲೆ ನಡೆಸಿರುವುದನ್ನು ವಿರೋಧಿಸಿ ಒಂದು ಗುಂಪು ಆಕ್ರೋಶ ವ್ಯಕ್ತಪಡಿಸಿದೆ. ಎರಡೂ ಕಡೆಯ ಯುವಕರ ನಡುವೆ ಕೈ ಕೈ ಮಿಲಾಯಸುವ ಹಂತ ತಲುಪಿದ್ದರಿಂದ ಪೊಲೀಸರು ಗುಂಪು ಚದುರಿಸಿದ್ದು, ಸ್ಥಳದಲ್ಲಿ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ.

ಧರ್ಮಸ್ಥಳದ ಪಾಂಗಳ ಎಂಬಲ್ಲಿ ಹಲ್ಲೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ಯುವಕರನ್ನು ಚದುರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಪರಿಸ್ಥಿತಿ ಕೈಮೀರಿದ್ದರಿಂದ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಹಲ್ಲೆಗೊಳಗಾದ ಯೂಟ್ಯೂಬರ್ ವೊಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment