ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕರ್ನಾಟಕ ಜಪಾನ್ ಹೂಡಿಕೆಗಳಿಗೆ ಪ್ರಮುಖ ತಾಣ; ಯಸುತಾಕಾ ನಕಸೋನ್ ಮೆಚ್ಚುಗೆ: ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಜಪಾನ್ ಸರ್ಕಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

On: November 25, 2026 11:14 AM
Follow Us:

ಟೋಕಿಯೊ (ಜಪಾನ್), ನ. 25: ಕರ್ನಾಟಕದಲ್ಲಿ ಜಪಾನ್ ಹೂಡಿಕೆಗಳಿಗೆ ವಿಫುಲ ಅವಕಾಶಗಳಿದ್ದು, ರಾಜ್ಯವು ಹೂಡಿಕೆದಾರರಿಗೆ ಪ್ರಮುಖ ತಾಣವಾಗಿ ಹೊರಹೊಮ್ಮಿದೆ ಎಂದು ಜಪಾನ್‌ನ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಯಸುತಾಕಾ ನಕಸೋನ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಟೋಕಿಯೊದಲ್ಲಿ ಜಪಾನ್‌ನ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಯಸುತಾಕಾ ನಕಸೋನ್ ಅವರನ್ನು ಭೇಟಿಯಾಗಿ ಕರ್ನಾಟಕ ಮತ್ತು ಜಪಾನ್ ನಡುವಿನ ಆರ್ಥಿಕ ಸಹಕಾರ, ಕೈಗಾರಿಕಾ ಬೆಳವಣಿಗೆ ಹಾಗೂ ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಬಲಪಡಿಸುವ ಕುರಿತು ಮಹತ್ವದ ಮಾತುಕತೆ ನಡೆಸಿದರು.

ಕರ್ನಾಟಕದಲ್ಲಿ ಜಪಾನ್ ಉದ್ಯಮಗಳು ಮತ್ತು ಹೂಡಿಕೆಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು. ಉಭಯ ರಾಷ್ಟ್ರಗಳ ನಡುವಿನ ಆರ್ಥಿಕ ಸಂಬಂಧವನ್ನು ಮತ್ತಷ್ಟು ವಿಸ್ತರಿಸುವುದರ ಜೊತೆಗೆ, ಕೈಗಾರಿಕೆ, ಮೂಲಸೌಕರ್ಯ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಹೊಸ ಅವಕಾಶಗಳನ್ನು ಸೃಷ್ಟಿಸುವ ಅಗತ್ಯವನ್ನು ಅವರು ಹೇಳಿದರು.

ಮುಂದಿನ ತಿಂಗಳು ನಡೆಯಲಿರುವ ‘ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶ 2027’ರಲ್ಲಿ ಜಪಾನ್ ಸರ್ಕಾರದ ಉನ್ನತ ಮಟ್ಟದ ನಿಯೋಗವು ‘ಜಪಾನ್ ಕಂಟ್ರಿ ಪೆವಿಲಿಯನ್’ ಮೂಲಕ ಭಾಗವಹಿಸುವಂತೆ ಮುಖ್ಯಮಂತ್ರಿ ಆಹ್ವಾನ ನೀಡಿದರು. ಈ ಮೂಲಕ ಕರ್ನಾಟಕದಲ್ಲಿ ಜಪಾನ್ ಕಂಪನಿಗಳ ಹೂಡಿಕೆ ಮತ್ತು ಉದ್ಯಮ ವಿಸ್ತರಣೆಗೆ ಹೆಚ್ಚಿನ ಅವಕಾಶ ಕಲ್ಪಿಸುವ ಉದ್ದೇಶವನ್ನು ವ್ಯಕ್ತಪಡಿಸಿದರು.

ಬೆಂಗಳೂರು ಮೆಟ್ರೋ ರೈಲು ಯೋಜನೆ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಸೇರಿದಂತೆ ರಾಜ್ಯದ ವಿವಿಧ ಪ್ರಮುಖ ಮೂಲಸೌಕರ್ಯ ಯೋಜನೆಗಳಿಗೆ ಜಪಾನ್ ನೀಡುತ್ತಿರುವ ನಿರಂತರ ಬೆಂಬಲಕ್ಕೆ ಮುಖ್ಯಮಂತ್ರಿ ಕೃತಜ್ಞತೆ ಸಲ್ಲಿಸಿದರು. ಇದೇ ರೀತಿಯಲ್ಲಿ ಕರ್ನಾಟಕದ ಅಭಿವೃದ್ಧಿ ಆದ್ಯತೆಗಳಿಗೆ ಜಪಾನ್ ಸರ್ಕಾರ ತನ್ನ ಸಹಕಾರವನ್ನು ಮತ್ತಷ್ಟು ವಿಸ್ತರಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಪಾನ್‌ನ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಯಸುತಾಕಾ ನಕಸೋನ್, ಭಾರತ ಮತ್ತು ಜಪಾನ್ ನಡುವಿನ ದೀರ್ಘಕಾಲದ ಸ್ನೇಹಪರ ಸಂಬಂಧ ಹಾಗೂ ನಿರಂತರ ಸಹಭಾಗಿತ್ವದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕವು ಜಪಾನ್ ಹೂಡಿಕೆಗಳಿಗೆ ಪ್ರಮುಖ ತಾಣವಾಗಿದ್ದು, ಉಭಯ ದೇಶಗಳ ನಡುವಿನ ನಿರಂತರ ಸಹಕಾರವು ವ್ಯಾಪಾರ ಮತ್ತು ಕೈಗಾರಿಕಾ ಅಭಿವೃದ್ಧಿಗೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಜಪಾನ್ ಉದ್ಯಮಗಳ ಹೂಡಿಕೆಯನ್ನು ಹೆಚ್ಚಿಸುವುದು ಹಾಗೂ ಉಭಯ ದೇಶಗಳ ನಡುವಿನ ಆರ್ಥಿಕ ಸಹಭಾಗಿತ್ವವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಈ ಭೇಟಿ ಮಹತ್ವ ಪಡೆದಿದೆ.

K.M.Sathish Gowda

Join WhatsApp

Join Now

Facebook

Join Now

Read more

ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಖಂಡಿತ ಪರಿಹಾರ; ಪ್ರತಿಭಟನೆ ಕೈಬಿಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಜಪಾನ್‌ನ ನಗರ ಸಾರಿಗೆ ಮಾದರಿಗಳತ್ತ ಕರ್ನಾಟಕದ ಚಿತ್ತ; ರಾಜ್ಯದಲ್ಲೇ ‘ಜೆಪಿಎನ್ ಟ್ಯಾಕ್ಸಿ’ ತಯಾರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಆಸಕ್ತಿ

ಆಸ್ತಿ-ಅಂತಸ್ತಿಗಿಂತ ಮಕ್ಕಳಿಗೆ ಬಸವತತ್ವ ಮತ್ತು ವಚನ ಸಂಸ್ಕಾರ ಕಲಿಸುವುದು ಮುಖ್ಯ; ಸಂಸ್ಕಾರದ ಸ್ಪರ್ಶದಿಂದ ಸಾಮಾನ್ಯ ಶಂಖವೂ ಪಾಂಚಜನ್ಯವಾಗುತ್ತದೆ, ತತ್ವಜ್ಞಾನದಿಂದ ಬದುಕು ಬೆಳಗುತ್ತದೆ: ಹರ್ಷ ಕಾಮತ್

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಉಡಾನ್ ಟೆಂಡರ್‌ನಲ್ಲಿ ಸ್ಥಾನ; ವಿಮಾನಯಾನ ಸೇವೆಗೆ ಹೊಸ ಭರವಸೆ! ಮೂರು ತಿಂಗಳ ಮಧ್ಯಂತರದಲ್ಲಿ ರಾಜ್ಯ ಸರ್ಕಾರದಿಂದ ತಾತ್ಕಾಲಿಕ ವಿಜಿ‌ಎಫ್ ನೆರವಿಗೆ ಸಂಸದ ಬಿ.ವೈ. ರಾಘವೇಂದ್ರ ಒತ್ತಾಯ

ಬೆಂಗಳೂರಿನಿಂದಾಚೆಗೂ ಕೈಗಾರಿಕಾ ಬೆಳವಣಿಗೆ; ಕರ್ನಾಟಕಕ್ಕೆ ಹೊಸ ಹೂಡಿಕೆ ಆಕರ್ಷಿಸುವ ಸಂಕಲ್ಪ: ಸಿಎಂ ಡಿ.ಕೆ. ಶಿವಕುಮಾರ್

ಘೋಷಣೆಗಳ ಸರ್ಕಾರಕ್ಕೆ ಬೆಳಗಾವಿ ಅಧಿವೇಶನದಲ್ಲಿ ಬಿಜೆಪಿ ಬಿಸಿ ಮುಟ್ಟಿಸಲಿದೆ; ಡಿ.ಕೆ. ಶಿವಕುಮಾರ್ ಆಡಳಿತದ ವಿರುದ್ಧ ಬಿ.ವೈ. ವಿಜಯೇಂದ್ರ ವಾಗ್ದಾಳಿ

Leave a Comment