ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಪ್ರಜಾಪ್ರಭುತ್ವದ ಹೆಸರಿನಲ್ಲಿ ಕಾಂಗ್ರೆಸ್ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ;150ಕ್ಕೂ ಹೆಚ್ಚು ಸ್ಥಾನ ಗೆದ್ದು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚನೆ: ಬಿ.ವೈ. ವಿಜಯೇಂದ್ರ

On: November 25, 2026 7:05 PM
Follow Us:

ಕಲಬುರಗಿ: ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಜನರಲ್ಲಿ ಅಪನಂಬಿಕೆ ಮೂಡಿಸುವ ಮೂಲಕ ಕಾಂಗ್ರೆಸ್ ಪಕ್ಷ ದೇಶದಲ್ಲಿ ಗೊಂದಲ ಹಾಗೂ ಅರಾಜಕತೆಯ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಎಂಬ ಘೋಷವಾಕ್ಯದೊಂದಿಗೆ ಬಿಜೆಪಿ ದೇಶಾದ್ಯಂತ ಜನಾಂದೋಲನ ಹಮ್ಮಿಕೊಂಡಿದೆ. ಆದರೆ ಕಾಂಗ್ರೆಸ್ ಪಕ್ಷವು ಎಸ್‌ಐಆರ್ (SIR) ವಿಚಾರವನ್ನು ಮುಂದಿಟ್ಟುಕೊಂಡು ಜನರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ. ಚುನಾವಣಾ ವ್ಯವಸ್ಥೆಯ ಕುರಿತು ಅಪಪ್ರಚಾರ ನಡೆಸುವ ಮೂಲಕ ಪ್ರಜಾಪ್ರಭುತ್ವದ ಮೇಲಿನ ಜನರ ವಿಶ್ವಾಸವನ್ನು ಕುಂದಿಸುವ ಪ್ರಯತ್ನ ಮಾಡುತ್ತಿದೆ ಎಂದು ಅವರು ದೂರಿದರು.

ಕಲಬುರಗಿಯಲ್ಲಿ ಆಯೋಜಿಸಿದ್ದ ‘ಪ್ರಜಾಪ್ರಭುತ್ವ ಉಳಿಸಿ, ಅರಾಜಕತೆ ಅಳಿಸಿ’ ಪಾದಯಾತ್ರೆಯಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗದ ನಾಯಕ ನರೇಂದ್ರ ಮೋದಿಯವರು ದೇಶದ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಂಡು ಭಾರತವನ್ನು ಅಭಿವೃದ್ಧಿಯ ಪಥದಲ್ಲಿ ಮುನ್ನಡೆಸುತ್ತಿದ್ದಾರೆ. ದೇಶದ ಪ್ರಗತಿ ಹಾಗೂ ಜಾಗತಿಕ ಮಟ್ಟದಲ್ಲಿ ಭಾರತದ ಗೌರವ ಹೆಚ್ಚುತ್ತಿರುವುದನ್ನು ಕಾಂಗ್ರೆಸ್ ನಾಯಕರಿಗೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿಯವರ ರಾಜಕೀಯ ನಿಲುವುಗಳು ಇದಕ್ಕೆ ಸಾಕ್ಷಿಯಾಗಿವೆ ಎಂದು ಟೀಕಿಸಿದರು.

ರಾಹುಲ್ ಗಾಂಧಿಯವರು ವಿದೇಶಗಳಿಗೆ ತೆರಳಿ ಭಾರತದ ಬಗ್ಗೆ ಅಪಮಾನಕರವಾಗಿ ಮಾತನಾಡುವುದನ್ನೇ ತಮ್ಮ ರಾಜಕೀಯ ಅಸ್ತ್ರವನ್ನಾಗಿ ಮಾಡಿಕೊಂಡಿದ್ದಾರೆ. ಪ್ರಧಾನಿಯಾಗಬೇಕೆಂಬ ಹಗಲುಗನಸು ಕಾಣುತ್ತಿರುವ ಅವರಿಗೆ ಆ ಅವಕಾಶ ಎಂದಿಗೂ ಸಿಗುವುದಿಲ್ಲ. ಮುಂದಿನ ಬಾರಿಯೂ ನರೇಂದ್ರ ಮೋದಿಯವರೇ ದೇಶದ ಪ್ರಧಾನಿಯಾಗಲಿದ್ದಾರೆ. ಮೋದಿ ಎಲ್ಲಿಗೂ ಹೋಗುವುದಿಲ್ಲ ಎಂದು ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ದೇಶದಲ್ಲಿ ದಂಗೆ ಹಾಗೂ ಅರಾಜಕತೆಯ ವಾತಾವರಣ ಸೃಷ್ಟಿಸಲು ಕಾಂಗ್ರೆಸ್ ಕುತಂತ್ರ ನಡೆಸುತ್ತಿದೆ. ಆದರೆ ದೇಶದ ಜನರು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದ ಮೇಲೆ ಅಪಾರ ವಿಶ್ವಾಸ ಹೊಂದಿದ್ದಾರೆ. ಮೋದಿಯವರ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ವಿಜಯೇಂದ್ರ, ‘ಮೋದಿ ಬೀ ಜಾಯೇಗಾ, ಮೋದಿ ಕೀ ಭಾಪ್ ಬಿ ಜಾಯೇಗಾ’ ಎಂದು ಖರ್ಗೆ ಹೇಳಿದ್ದಾರೆ. ಆದರೆ ಪ್ರಧಾನಿ ಮೋದಿ ಎಲ್ಲಿಗೂ ಹೋಗುವುದಿಲ್ಲ. ದೇಶದ ಜನರ ಆಶೀರ್ವಾದ ಅವರ ಬೆನ್ನಿಗಿದೆ ಎಂದು ತಿರುಗೇಟು ನೀಡಿದರು.

ಇವಿಎಂ ಬಗ್ಗೆ ಅಪನಂಬಿಕೆ ವ್ಯಕ್ತಪಡಿಸುತ್ತಿರುವ ಕಾಂಗ್ರೆಸ್ ನಾಯಕರು ಚುನಾವಣಾ ಫಲಿತಾಂಶವನ್ನು ಒಪ್ಪಿಕೊಳ್ಳಲು ಸಿದ್ಧರಿಲ್ಲ ಎಂದು ವಿಜಯೇಂದ್ರ ಟೀಕಿಸಿದರು. ಕರ್ನಾಟಕದಲ್ಲಿ ಯಾವಾಗ ಚುನಾವಣೆ ನಡೆದರೂ ಬಿಜೆಪಿ ಗೆಲುವು ಸಾಧಿಸಲಿದೆ. ಕನಿಷ್ಠ 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ಸಂಪೂರ್ಣ ವಿಶ್ವಾಸವಿದೆ. ಈ ಮೂಲಕ ಹಿರಿಯ ನಾಯಕ ರಾಜನಾಥ್ ಸಿಂಗ್ ಅವರಿಗೂ ಭರವಸೆ ನೀಡುತ್ತಿದ್ದೇನೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಳೆದ ಏಳು ದಿನಗಳಿಂದ ಆಶಾ ಕಾರ್ಯಕರ್ತೆಯರು ತಮ್ಮ ನ್ಯಾಯಯುತ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಚುನಾವಣೆಗೂ ಮುನ್ನ ಕಾಂಗ್ರೆಸ್ ನಾಯಕರು ಆಶಾ ಕಾರ್ಯಕರ್ತೆಯರಿಗೆ ಹಲವು ಭರವಸೆಗಳನ್ನು ನೀಡಿದ್ದರು. ಆದರೆ ಅಧಿಕಾರಕ್ಕೆ ಬಂದ ನಂತರ ಆ ಭರವಸೆಗಳನ್ನು ಈಡೇರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಸ್ಪಂದಿಸುವುದು ಸರ್ಕಾರದ ಜವಾಬ್ದಾರಿಯಲ್ಲವೇ? ಅವರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಸರ್ಕಾರಕ್ಕೆ ಮನಸ್ಸಿಲ್ಲವೇ ಎಂದು ವಿಜಯೇಂದ್ರ ಪ್ರಶ್ನಿಸಿದರು.

ರಾಜ್ಯದ ರೈತರು ಹಲವು ಸಮಸ್ಯೆಗಳಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರೈತರ ಬದುಕನ್ನು ಹಸನಾಗಿಸಬೇಕಾದ ಸರ್ಕಾರವೇ ಅವರನ್ನು ನಿರ್ಲಕ್ಷಿಸುತ್ತಿದೆ. ರೈತರ ಪಾಲಿಗೆ ರಾಜ್ಯ ಸರ್ಕಾರ ಬದುಕಿದ್ದರೂ ಸತ್ತಂತಾಗಿದೆ ಎಂದು ವಿಜಯೇಂದ್ರ ತೀವ್ರ ವಾಗ್ದಾಳಿ ನಡೆಸಿದರು.

ರೈತರ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸುವ ಬದಲು ರಾಜಕೀಯ ಪ್ರಚಾರ ಮತ್ತು ಅಧಿಕಾರದ ಸ್ವಾರ್ಥದಲ್ಲೇ ಸರ್ಕಾರ ಕಾಲ ಕಳೆಯುತ್ತಿದೆ. ರೈತರ ಹಿತಾಸಕ್ತಿ ಕಾಪಾಡುವಲ್ಲಿ ಸರ್ಕಾರದ ನಿರ್ಲಕ್ಷ್ಯ ಧೋರಣೆ ಮುಂದುವರಿದಿದ್ದು, ಜನಸಾಮಾನ್ಯರ ಹಾಗೂ ರೈತರ ಸಮಸ್ಯೆಗಳಿಗೆ ಸ್ಪಂದಿಸುವ ಇಚ್ಛಾಶಕ್ತಿಯೇ ಸರ್ಕಾರಕ್ಕೆ ಇಲ್ಲ ಎಂದು ಅವರು ಆರೋಪಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಪಕ್ಷದ ಕಲಬುರಗಿ ನಗರಾಧ್ಯಕ್ಷ ಚಂದು ಪಾಟೀಲ, ಕಲಬುರಗಿ ಗ್ರಾಮಾಂತರ ಅಧ್ಯಕ್ಷ ಅಶೋಕ ಬಗಲಿ, ಪ್ರಧಾನ ಕಾರ್ಯದರ್ಶಿ ಪಿ. ರಾಜೀವ್, ಶಾಸಕರಾದ ಬಸವರಾಜ ಮತ್ತಿಮೂಡ್, ಡಾ. ಅವಿನಾಶ್ ಜಾಧವ, ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ, ಬಿ.ಜಿ. ಪಾಟೀಲ್, ಮಾಜಿ ಕೇಂದ್ರ ಸಚಿವ ಭಗವಂತ ಖೂಭಾ, ಮಾಜಿ ಸಂಸದ ಉಮೇಶ ಜಾಧವ, ಮಾಜಿ ಸಚಿವ ರಾಜುಗೌಡ, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ ತೇಲ್ಕೂರ್, ದತ್ತಾತ್ರೇಯ ಪಾಟೀಲ ರೇವೂರ, ಸುಭಾಷ್ ಗುತ್ತೇದಾರ್, ಪ್ರಭಾರಿ ಅರುಣ್ ಶಹಾಪುರ ಸೇರಿದಂತೆ ಪಕ್ಷದ ಪ್ರಮುಖರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಸುಪ್ರೀಂಕೋರ್ಟ್ ಆದೇಶಕ್ಕೂ ಅಡ್ಡಿ! ತಿರುಪ್ಪರಂಕುಂದ್ರಂ ದೀಪ ವಿವಾದದಲ್ಲಿ ವಿಜಯ್ ಸರ್ಕಾರಕ್ಕೆ ಮುಖಭಂಗ; ದೀಪಸ್ತಂಭದಲ್ಲಿ ಜ್ಯೋತಿ ಬೆಳಗದ ಪ್ರಕರಣ: ನ್ಯಾಯಾಲಯಕ್ಕೆ ಬೇಷರತ್ ಕ್ಷಮೆಯಾಚಿಸಿದ ಮಧುರೈ ಜಿಲ್ಲಾಧಿಕಾರಿ

ಕರ್ನಾಟಕದ ಪ್ರಮುಖ ನಗರಗಳಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆಗೆ ಸರ್ಕಾರದ ಒಲವು; ಜೆಎಫ್‌ಇ ಇಂಜಿನಿಯರಿಂಗ್ ಕಾರ್ಪೊರೇಷನ್ ಪ್ರತಿನಿಧಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಮಾತುಕತೆ

ಕರ್ನಾಟಕ ಜಪಾನ್ ಹೂಡಿಕೆಗಳಿಗೆ ಪ್ರಮುಖ ತಾಣ; ಯಸುತಾಕಾ ನಕಸೋನ್ ಮೆಚ್ಚುಗೆ: ಕರ್ನಾಟಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸುವಂತೆ ಜಪಾನ್ ಸರ್ಕಾರಕ್ಕೆ ಸಿಎಂ ಡಿ.ಕೆ. ಶಿವಕುಮಾರ್ ಆಹ್ವಾನ

ಆಶಾ ಕಾರ್ಯಕರ್ತೆಯರ ಸಮಸ್ಯೆಗಳಿಗೆ ಖಂಡಿತ ಪರಿಹಾರ; ಪ್ರತಿಭಟನೆ ಕೈಬಿಡಿ: ಸಿಎಂ ಡಿ.ಕೆ. ಶಿವಕುಮಾರ್ ಮನವಿ

ಜಪಾನ್‌ನ ನಗರ ಸಾರಿಗೆ ಮಾದರಿಗಳತ್ತ ಕರ್ನಾಟಕದ ಚಿತ್ತ; ರಾಜ್ಯದಲ್ಲೇ ‘ಜೆಪಿಎನ್ ಟ್ಯಾಕ್ಸಿ’ ತಯಾರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ಆಸಕ್ತಿ

ಆಸ್ತಿ-ಅಂತಸ್ತಿಗಿಂತ ಮಕ್ಕಳಿಗೆ ಬಸವತತ್ವ ಮತ್ತು ವಚನ ಸಂಸ್ಕಾರ ಕಲಿಸುವುದು ಮುಖ್ಯ; ಸಂಸ್ಕಾರದ ಸ್ಪರ್ಶದಿಂದ ಸಾಮಾನ್ಯ ಶಂಖವೂ ಪಾಂಚಜನ್ಯವಾಗುತ್ತದೆ, ತತ್ವಜ್ಞಾನದಿಂದ ಬದುಕು ಬೆಳಗುತ್ತದೆ: ಹರ್ಷ ಕಾಮತ್

Leave a Comment