ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದಾಸ ಪರಂಪರೆಗೆ ಕನಕದಾಸರ ಕೊಡುಗೆ ಅಪಾರ; ಜಾತಿ, ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಪ್ರವೃತ್ತಿ ನಿಲ್ಲಲಿ: ಕನಕದಾಸರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ – ಬಿ.ವೈ.ವಿಜಯೇಂದ್ರ

On: November 27, 2026 7:48 PM
Follow Us:

ಬೆಂಗಳೂರು: ಜಾತಿ, ಧರ್ಮಗಳ ಹೆಸರಿನಲ್ಲಿ ಸಮಾಜವನ್ನು ವಿಭಜಿಸುವ ಪ್ರಯತ್ನಗಳು ಹೆಚ್ಚುತ್ತಿರುವ ಇಂದಿನ ಸಂದರ್ಭದಲ್ಲಿ ಕನಕದಾಸರ ತತ್ವಾದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ. ಕರ್ನಾಟಕದ ಸಾಂಸ್ಕೃತಿಕ ಹಾಗೂ ಆಧ್ಯಾತ್ಮಿಕ ಪರಂಪರೆಗೆ ಮತ್ತು ದಾಸ ಸಾಹಿತ್ಯಕ್ಕೆ ಕನಕದಾಸರು ನೀಡಿರುವ ಕೊಡುಗೆ ಅಪಾರ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಆಯೋಜಿಸಿದ್ದ ಕನಕದಾಸರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದಾಸಶ್ರೇಷ್ಠ ಕನಕದಾಸರ ಜೀವನ, ಸಾಹಿತ್ಯ ಮತ್ತು ಸಾಮಾಜಿಕ ಚಿಂತನೆಗಳನ್ನು ದೇಶದಾದ್ಯಂತ ಪರಿಚಯಿಸುವ ಉದ್ದೇಶದಿಂದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಆಡಳಿತಾವಧಿಯಲ್ಲಿ ಕನಕ ಜಯಂತಿಯನ್ನು ಘೋಷಿಸಿ, ಸರ್ಕಾರಿ ರಜೆ ಪ್ರಕಟಿಸಿದ್ದರು. ಅಲ್ಲದೆ, ಕಾಗಿನೆಲೆ ಕ್ಷೇತ್ರದ ಅಭಿವೃದ್ಧಿಗೂ ಬಿಜೆಪಿ ಸರ್ಕಾರ ಹೆಚ್ಚಿನ ಅನುದಾನ ನೀಡಿ ಆದ್ಯತೆ ನೀಡಿತ್ತು ಎಂದು ಸ್ಮರಿಸಿದರು.

ಮನುಷ್ಯತ್ವವೇ ಶ್ರೇಷ್ಠವಾದ ಕುಲ. ಮನುಷ್ಯನನ್ನು ಜಾತಿ ಅಥವಾ ಧರ್ಮದ ಆಧಾರದ ಮೇಲೆ ಅಳೆಯಬಾರದು. ಪ್ರತಿಯೊಬ್ಬರ ಜೀವನವೂ ಅಮೂಲ್ಯವಾದುದು ಎಂಬ ಮಾನವೀಯ ಸಂದೇಶವನ್ನು ಕನಕದಾಸರು ತಮ್ಮ ಸಾಹಿತ್ಯದ ಮೂಲಕ ಸಾರಿದ್ದಾರೆ. ‘ಕುಲ ಕುಲ ಕುಲವೆಂದು ಹೊಡೆದಾಡದಿರಿ, ನಿಮ್ಮ ಕುಲದ ನೆಲೆಯನೇನು ಬಲ್ಲಿರಾ’ ಎಂಬ ಅವರ ವಚನ ಇಂದಿಗೂ ಸಮಾಜಕ್ಕೆ ಪ್ರಸ್ತುತವಾಗಿದೆ ಎಂದು ಹೇಳಿದರು.

ಕನಕದಾಸರು ತೋರಿಸಿಕೊಟ್ಟ ಮಾರ್ಗದಲ್ಲಿ ಸಮಾಜ ಸಾಗಿದರೆ ನಾಡಿನಲ್ಲಿ ಅಶಾಂತಿ ಉಂಟಾಗಲು ಸಾಧ್ಯವಿಲ್ಲ. ಆದರೆ, ರಾಜಕೀಯ ಸ್ವಾರ್ಥಕ್ಕಾಗಿ ಜಾತಿ-ಜಾತಿಗಳ ನಡುವೆ ವಿಷಬೀಜ ಬಿತ್ತುವ ಪ್ರವೃತ್ತಿ ಬೆಳೆಯುತ್ತಿರುವುದು ಆತಂಕಕಾರಿ ಸಂಗತಿ. ಇಂತಹ ಬೆಳವಣಿಗೆಗಳಿಗೆ ಕಡಿವಾಣ ಹಾಕಬೇಕಾದರೆ ದಾಸ ಸಾಹಿತ್ಯದ ಮೌಲ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ರಘು ಕೌಟಿಲ್ಯ ಮಾತನಾಡಿ, ಭಗವಂತನನ್ನು ಒಲಿಸಿಕೊಳ್ಳಲು ಬೇಕಾಗಿರುವುದು ಬಾಹ್ಯ ಶುದ್ಧಿಯಲ್ಲ, ಬದಲಾಗಿ ಮನಸ್ಸಿನ ಪರಿಶುದ್ಧತೆ. ಮನಸ್ಸಿನಲ್ಲಿ ನಿರ್ಮಲ ಭಾವನೆ ಮತ್ತು ನಿಷ್ಕಲ್ಮಶ ಭಕ್ತಿ ಹೊಂದಿರುವವರನ್ನು ಭಗವಂತ ಅನುಗ್ರಹಿಸುತ್ತಾನೆ ಎಂಬುದಕ್ಕೆ ಉಡುಪಿಯ ಶ್ರೀಕೃಷ್ಣನ ದರ್ಶನದ ಪ್ರಸಂಗವೇ ಸಾಕ್ಷಿ ಎಂದರು.

ಉಡುಪಿಯಲ್ಲಿ ಕನಕದಾಸರಿಗೆ ಶ್ರೀಕೃಷ್ಣನು ಹಿಂಬದಿಯಿಂದ ದರ್ಶನ ನೀಡಿದ ಐತಿಹಾಸಿಕ ಪ್ರಸಂಗ ಕರ್ನಾಟಕದ ಸಾಹಿತ್ಯಿಕ ಹಾಗೂ ಆಧ್ಯಾತ್ಮಿಕ ಪರಂಪರೆಯ ಹೆಮ್ಮೆಯ ಸಂಗತಿಯಾಗಿದೆ. ಭಗವಂತ ಎಂದಿಗೂ ಒಳ್ಳೆಯತನದ ಪರವಾಗಿರುತ್ತಾನೆ. ಜಾತಿ ಅಥವಾ ಕುಲದ ಆಧಾರದ ಮೇಲೆ ದೇವರ ಅನುಗ್ರಹ ದೊರೆಯುವುದಿಲ್ಲ; ಶುದ್ಧ ಮನಸ್ಸು ಮತ್ತು ಮಾನವೀಯ ಗುಣಗಳೇ ಭಗವಂತನ ಕೃಪೆಗೆ ಪಾತ್ರವಾಗಲು ಮುಖ್ಯ ಎಂಬ ಮಹತ್ವದ ಸಂದೇಶವನ್ನು ಕನಕದಾಸರು ಸಾರಿದ್ದಾರೆ. ಇಂತಹ ಶ್ರೇಷ್ಠ ಮಾನವತಾವಾದಿ ಕನಕದಾಸರ ಆದರ್ಶಗಳನ್ನು ಸಮಾಜಕ್ಕೆ ತಲುಪಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕನಕದಾಸರ ಮಹತ್ವ ಮತ್ತು ಸಾಧನೆಗಳನ್ನು ಜನರಿಗೆ ಪರಿಚಯಿಸುವ ಉದ್ದೇಶದಿಂದ ಕನಕ ಜಯಂತಿ ಘೋಷಿಸಿ ಸಾರ್ವತ್ರಿಕ ರಜೆ ಪ್ರಕಟಿಸಿದ್ದರು. ಕನಕದಾಸರ ಸಾಹಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಮುದ್ರಣವಾಗಿ ಜನಸಾಮಾನ್ಯರಿಗೆ ತಲುಪುವಂತೆಯೂ ಕ್ರಮ ಕೈಗೊಂಡಿದ್ದರು ಎಂದು ಹೇಳಿದರು.

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಕನಕದಾಸರು ಹಾಗೂ ಬಸವಣ್ಣನವರ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ಮುನ್ನಡೆಯುತ್ತಿದ್ದಾರೆ. 2028ರಲ್ಲಿ ಕನಕದಾಸರ ಆಶಯಗಳಿಗೆ ಅನುಗುಣವಾದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ವಿಶ್ವಾಸವಿದೆ ಎಂದು ರಘು ಕೌಟಿಲ್ಯ ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಸಿದ್ದು ಸವದಿ, ವಿಧಾನಪರಿಷತ್ ಸದಸ್ಯ ಪಿ.ಎಚ್.ಪೂಜಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಒಬಿಸಿ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸೋಮಶೇಖರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ದೀಪತ್ತೂಣ್ ವಿವಾದಕ್ಕೆ ಸುಪ್ರೀಂ ಕೋರ್ಟ್ ಖಡಕ್ ಆದೇಶ! ಶನಿವಾರವೇ ದೀಪ ಬೆಳಗಿಸಲು ಸೂಚನೆ; ತಮಿಳುನಾಡು ಸರ್ಕಾರಕ್ಕೆ ತೀವ್ರ ತರಾಟೆ, ದೇವಸ್ಥಾನದ ಆಡಳಿತ ಮಂಡಳಿ ಅಮಾನತು

ಹಾವೇರಿ ಮೆಡಿಕಲ್ ಕಾಲೇಜಿಗೆ ಸಂತ ಕನಕದಾಸರ ಹೆಸರು: ಸಿಎಂ ಡಿ.ಕೆ. ಶಿವಕುಮಾರ್ ಘೋಷಣೆ

ರಿಯಲ್ ಎಸ್ಟೇಟ್ ಉದ್ಯಮಿಗಳ ಒಗ್ಗಟ್ಟಿಗೆ ಈ ವಿಶ್ವಾಸ್ ಸಾರಥ್ಯ; ಯಶಸ್ವಿಯಾಗಿ ನಡೆದ ಬಿಸಿನೆಸ್ ಮೀಟ್! ಸಂಘಟಿತ ಪ್ರಯತ್ನದಿಂದ ಉದ್ಯಮ ಕ್ಷೇತ್ರದ ಪ್ರಗತಿ ಸಾಧ್ಯ: ಸಿ.ಎಸ್. ಷಡಾಕ್ಷರಿ

ನ.30ರಿಂದ ಸಂಸತ್‌ನ ವಿಶೇಷ ಅಧಿವೇಶನ ಆರಂಭ; ಮಹಿಳಾ ಮೀಸಲಾತಿ, ಕ್ಷೇತ್ರ ಪುನರ್‌ವಿಂಗಡಣೆ ಮಸೂದೆ ಮಂಡನೆಗೆ ಸಿದ್ಧತೆ!

ಗೋಹತ್ಯೆ ತಡೆಯುವವರನ್ನೇ ಗುರಿಯಾಗಿಸಲಾಗುತ್ತಿದೆ; ಸುಳ್ಳು ಮೊಕದ್ದಮೆ ದಾಖಲಿಸಿದರೆ ರಾಜ್ಯಾದ್ಯಂತ ಹೋರಾಟ: ಬಿಜೆಪಿ ನಾಯಕರ ಎಚ್ಚರಿಕೆ

ನಿರುದ್ಯೋಗಿ ಪದವೀಧರರಿಗೆ ತಿಂಗಳಿಗೆ ₹5,000 ಭತ್ಯೆ; 25 ಲಕ್ಷ ಸರ್ಕಾರಿ ಉದ್ಯೋಗಗಳ ಭರವಸೆ! ಮಹಿಳೆಯರಿಗೆ ವಾರ್ಷಿಕ ₹40 ಸಾವಿರ ನೆರವು, ರೈತರ ಸಾಲಮನ್ನಾ, 300 ಯೂನಿಟ್ ಉಚಿತ ವಿದ್ಯುತ್: 2027ರ ಯುಪಿ ಚುನಾವಣೆಗೆ ಅಖಿಲೇಶ್ ಯಾದವ್ ಭರ್ಜರಿ ಪ್ರಣಾಳಿಕೆ

Leave a Comment