ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಮೋದಿಗೆ ಅಧಿಕಾರದಲ್ಲಿ ಇರಲು ನೈತಿಕತೆ ಇಲ್ಲ, ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು: ಸಿಎಂ ಸಿದ್ದರಾಮಯ್ಯ ಆಗ್ರಹ

On: August 8, 2025 7:34 PM
Follow Us:

ಬೆಂಗಳೂರು: ಲೋಕಸಭೆ ಎಲೆಕ್ಷನ್​ನಲ್ಲಿ ಬಿಜೆಪಿ, ಎನ್​ಡಿಎ ಬಹುಮತ ಗಳಿಸಿಲ್ಲ. 80 ಕ್ಷೇತ್ರಗಳಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ. ಮೋದಿಗೆ ಅಧಿಕಾರದಲ್ಲಿ ಇರಲು ನೈತಿಕತೆ ಇಲ್ಲ. ಕೂಡಲೇ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಬೆಂಗಳೂರಿನಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಮತಗಳ್ಳತನ ಸಮರ ಪ್ರತಿಭಟನೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಪ್ರಜಾಪ್ರಭುತ್ವವನ್ನು ಒಪ್ಪಿಕೊಂಡು ನಾವು ನಮ್ಮ ಸಮಾಜಕ್ಕೆ ಬೇಕಾದಂತಹ ಸಂವಿಧಾನವನ್ನು ರಚನೆ ಮಾಡಿಕೊಂಡಿದ್ದೇವೆ. ಸಂವಿಧಾನ ಜಾರಿ ಆದ ಮೇಲೆ ಯಾರೇ ಆಗಿರಲಿ, ಒಬ್ಬ ವ್ಯಕ್ತಿಗೆ ಒಂದೇ ವೋಟ್​. ಚುನಾವಣಾ ಆಯೋಗ ಸಂವಿಧಾನದ ರೀತಿಯಲ್ಲಿ ನಡೆದುಕೊಳ್ಳಬೇಕು. ನ್ಯಾಯ ಸಮ್ಮತವಾದಂತಹ ಚುನಾವಣೆಗಳನ್ನು ಮಾಡಿ, ಯಾರು ಬಹುಮತ ಗಳಿಸುತ್ತಾರೋ ಅವರಿಗೆ ಅಧಿಕಾರ ಸಿಗುವುದು ಪ್ರಜಾಪ್ರಭುತ್ವವದ ಮೂಲ ತತ್ವ ಆಗಿದೆ. ಮತದಾನವನ್ನು ಸಂವಿಧಾನ ಕೊಟ್ಟಿರುವುದು. ಇದು ಮೂಲಭೂತವಾದ ಹಕ್ಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚುನಾವಣಾ ಆಯೋಗ ಬಿಜೆಪಿಯ ಶಾಖಾ ಕಚೇರಿ ಆಗಿದೆ. ಮತಗಳ್ಳತನದ ವಿರುದ್ಧ ಕರ್ನಾಟಕ ರಾಜ್ಯದಿಂದ ಆರಂಭವಾಗಿರುವ ಪ್ರತಿಭಟನಾ ಅಭಿಯಾನ ಇಡೀ ದೇಶಾದ್ಯಂತ ವ್ಯಾಪಿಸಲಿದೆ. ರಾಹುಲ್ ಗಾಂಧಿಯವರು ಸಂಪೂರ್ಣವಾಗಿ ಅಧ್ಯಯನ ಮಾಡಿ, ಮತದಾನದ ಅಂಕಿ ಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಣೆ ಮಾಡಿ ದಾಖಲೆಗಳ ಸಮೇತ ದೇಶದ ಜನರ ಮುಂದೆ ಇಟ್ಟಿದ್ದಾರೆ.

ಚುನಾವಣಾ ಆಯೋಗ ಸಂವಿಧಾನದ ಅಡಿಯಲ್ಲಿ ನ್ಯಾಯಬದ್ದವಾಗಿ ನಡೆದುಕೊಳ್ಳಬೇಕು. ಸಂವಿಧಾನ ಕೊಟ್ಟಿರುವ ಮತದಾನದ ಮೂಲಭೂತ ಹಕ್ಕನ್ನು ಯಾರೂ ಕಿತ್ತುಕೊಳ್ಳಲು ಸಾಧ್ಯವಿಲ್ಲ. ಅದಕ್ಕೆ ದೇಶದ ಜನತೆ ಅವಕಾಶ ಕೊಡುವುದಿಲ್ಲ. ಮನುವಾದಿಗಳು ಸಂವಿಧಾನ ವಿರೋಧಿಗಳು. ಇವರು ಸಂವಿಧಾನದ ಪ್ರಕ್ರಿಯೆಯನ್ನೇ ತಪ್ಪುದಾರಿಗೆ ಎಳೆಯುತ್ತಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿರುವ ವಂಚನೆ ಕಾರಣದಿಂದ ಸೆಂಟ್ರಲ್ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಸೋತಿದೆಯೇ ಹೊರತು ಜನಾಭಿಪ್ರಾಯ ಕಾಂಗ್ರೆಸ್ ಪರವಾಗಿಯೇ ಇತ್ತು ಎನ್ನುವುದು ಈಗ ಗೊತ್ತಾಗಿದೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ 14 ಸೀಟುಗಳನ್ನು ಗೆಲ್ಲಬೇಕಿತ್ತು. ಆದರೆ ಮತಗಳ್ಳತನದ ಕಾರಣದಿಂದ ನಾವು ಸೋತಿದ್ದೇವೆ. ಇವಿಎಂ ಬಂದ ಮೇಲೆ ಇವನ್ನು ದುರುಪಯೋಗ ಮಾಡಿಕೊಳ್ಳುವ ಕೆಲಸ ಆಗುತ್ತಿರುವುದು ಈಗ ದಾಖಲೆ ಸಮೇತ ಸಿಕ್ಕಿಬಿದ್ದಿದ್ದಾರೆ. ರಾಹುಲ್ ಗಾಂಧಿಯಿಂದ ಪ್ರಜಾಪ್ರಭುತ್ವ ಮತ್ತು ಸಂವಿಧಾನ ರಕ್ಷಣೆಗೆ ಚಳವಳಿ ಆರಂಭವಾಗಿದೆ. ಇದಕ್ಕೆ ಇಡೀ ರಾಜ್ಯದ ಜನತೆ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

K.M.Sathish Gowda

Join WhatsApp

Join Now

Facebook

Join Now

Leave a Comment