ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬೆಂಗಳೂರು-ಬೆಳಗಾವಿ ವಂದೇ ಭಾರತ್‌ ರೈಲಿಗೆ ಪ್ರಧಾನಿ ಮೋದಿ ಚಾಲನೆ

On: August 10, 2025 1:52 PM
Follow Us:

ಬೆಂಗಳೂರು: ನಮ್ಮ ಮೆಟ್ರೋದ  ಯೆಲ್ಲೋ ಲೈನ್‌ ಮತ್ತು ವಂದೇ ಭಾರತ್‌ ರೈಲಿಗೆ ಚಾಲನೆ ನೀಡುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿಯವರು  ಇಂದು ರಾಜ್ಯ ರಾಜಧಾನಿ ಬೆಂಗಳೂರಿಗೆ ಆಗಮಿಸಿದ್ದಾರೆ. ಎಚ್‌ಎಲ್‌ ಏರ್‌ಪೋರ್ಟ್‌ಗೆ ಬಂದಿಳಿದ ಪ್ರಧಾನಿ ಮೋದಿ ಅಲ್ಲಿಂದ ಹೆಲಿಕಾಪ್ಟರ್‌ ಮೂಲಕ ಮೇಖ್ರಿ ಸರ್ಕಲ್‌ ಬಳಿ ಇರುವ ಮಿಲಿಟರಿ ಬೇಸ್‌ಗೆ ಬಂದಿಳಿದರು. ಅಲ್ಲಿಂದ ರಸ್ತೆ ಮಾರ್ಗವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಪ್ರಯಾಣ ಬೆಳೆಸಿದರು. ಅಸಂಖ್ಯಾ ಅಭಿಮಾನಿಗಳು ಪಕ್ಷದ ಕಾರ್ಯಕರ್ತರಿ ದಾರಿಯುದ್ದಕ್ಕೂ ನಿಂತು ಮೋದಿಗೆ ಸ್ವಾಗತಿ ಕೋರಿದರು. ಮೋದಿ.. ಮೋದಿ ಎಂದು ಕೂಗುತ್ತಿದ್ದ ತಮ್ಮ ಅಭಿಮಾನಿಗಳತ್ತ ಪ್ರಧಾನಿ ಮೋದಿ ಕಾರಿನಿಂದಲೇ ಕೈಬೀಸಿದರು.

ಮೇಖ್ರಿ ಸರ್ಕಲ್‌ನಿಂದ ನೇರವಾಗಿ ಬೆಂಗಳೂರಿನ ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ರೈಲ್ವೇ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ಮೋದಿ ಬೆಂಗಳೂರಿನಿಂದ ಬೆಳಗಾವಿಗೆ ವಂದೇ ಭಾರತ್‌ ರೈಲಿಗೆ ಹಸಿರು ನಿಶಾನೆ ತೋರಿ ಚಾಲನೆ ನೀಡಿದ್ದಾರೆ. ಇನ್ನು ಇದು ಕರ್ನಾಟಕದ ಮೂರನೇ ವಂದೇ ಭಾರತ್‌ ರೈಲು ಇದಾಗಿದ್ದು, ಇದು ಎಂಟು ಜಿಲ್ಲೆಗಳನ್ನು ಹಾದು ಹೋಗುತ್ತದೆ. ಇದರ ಜೊತೆಗೆ ಪ್ರಧಾನಿ ಮೋದಿ ವರ್ಚುವಲ್‌ ಮೂಲಕ ಇತರೆ ಎರಡು ವಂದೇ ಭಾರತ್‌ ರೈಲುಗಳಿಗೆ ಚಾಲನೆ ನೀಡುತ್ತಿದ್ದಾರೆ. ಅಗಮೃತಸರ- ವೈಷ್ಣೋದೇವಿ ಕತ್ರಾ ಮತ್ತು ನಾಗ್ಪುರ- ಪುಣೆ ರೈಲುಗಳಿಗೂ ಇಂದೇ ಚಾಲನೆ ಸಿಕ್ಕಿದೆ.

K.M.Sathish Gowda

Join WhatsApp

Join Now

Facebook

Join Now

Leave a Comment