ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

79ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ಮೋದಿ ಧ್ವಜಾರೋಹಣ, ದೇಶಾದ್ಯಂತ ಸಂಭ್ರಮ

On: August 15, 2025 3:53 PM
Follow Us:

79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ರಾಷ್ಟ್ರದ ಜನತೆಗೆ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದ್ದಾರೆ.

79ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ರಾಷ್ಟ್ರದ ಜನತೆಗೆ ಅವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳನ್ನು ಕೋರಿದ್ದಾರೆ. ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಮೋದಿ, ದೇಶಕ್ಕಾಗಿ ಹೋರಾಡಿದ ಮಹನೀಯರನ್ನು ಸ್ಮರಿಸಿದ್ದಾರೆ. ಅವರು ಸ್ವಾತಂತ್ರ್ಯ ದಿನವನ್ನು “140 ಕೋಟಿ ನಿರ್ಣಯಗಳ ಹಬ್ಬ” ಎಂದು ಬಣ್ಣಿಸಿದ್ದು, ಇದು ರಾಷ್ಟ್ರದ ಸಾಮೂಹಿಕ ಸಾಧನೆಗಳು, ಹೆಮ್ಮೆ ಮತ್ತು ಏಕತೆಯನ್ನು ಪ್ರತಿಬಿಂಬಿಸುವ ಕ್ಷಣವಾಗಿದೆ ಎಂದು ಬಣ್ಣಿಸಿದ್ದಾರೆ. ಕೆಂಪು ಕೋಟೆಯ ಮೇಲೆ ನಿಂತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, 370ನೇ ವಿಧಿಯನ್ನು ರದ್ದುಪಡಿಸುವುದನ್ನು ರಾಷ್ಟ್ರೀಯ ಏಕತೆಯತ್ತ ಒಂದು ಐತಿಹಾಸಿಕ ಹೆಜ್ಜೆ ಎಂದು ಹೇಳಿದ್ದಾರೆ. ಇದು “ಒಂದು ರಾಷ್ಟ್ರ, ಒಂದು ಸಂವಿಧಾನ”ದ ದೃಷ್ಟಿಕೋನವನ್ನು ಈಡೇರಿಸಿದೆ ಎಂದು ಘೋಷಿಸಿದರು.

ಆಪರೇಷನ್ ಸಿಂದೂರದ ಕುರಿತು ಹೆಮ್ಮೆ ವ್ಯಕ್ತಪಡಿಸಿದ ಮೋದಿ, ಮಡದಿ, ಮಕ್ಕಳ ಎದುರು ನಮ್ಮ ಪ್ರಜೆಗಳನ್ನು ಕೊಂದವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ನಿಮಗೆ ಪ್ರಮಾಣ ಮಾಡಿದ್ದೆ. ಅದರಂತೆ ನಮ್ಮ ಸೇನೆ ಶತ್ರು ದೇಶದ ಒಳಗೇ ನುಗ್ಗಿ ಉಗ್ರರನ್ನು ಸೆದೆ ಬಡಿದಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳಿಗೆ ಸೇಡು ತೀರಿಸಿಕೊಳ್ಳಲು ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಆಪರೇಷನ್ ಸಿಂದೂರ ಇನ್ನೂ ನಿಂತಿಲ್ಲ. ಭಾರತದ ತಂಟೆಗೆ ಬಂದರೆ ಏನಾಗುತ್ತದೆ ಎಂಬುದನ್ನು ಜಗತ್ತು ನೋಡಿದೆ ಎಂದು ಅವರು ಹೇಳಿದ್ದಾರೆ.

ಸಿಂದೂ ನದಿಯ ಕುರಿತು ಮಾತನಾಡಿದ ಮೋದಿ ನೀರು ಮತ್ತು ರಕ್ತ ಒಂದೇ ಕಡೆ ಹರಿಯುವುದಿಲ್ಲ ಎಂಬುದನ್ನು ಪುನರುಚ್ಚರಿಸಿದ್ದಾರೆ. ಭಾರತ ಇನ್ನು ಮುಂದೆ ಪರಮಾಣು ಬೆದರಿಕೆಗಳನ್ನು ಸಹಿಸುವುದಿಲ್ಲ. ನಮ್ಮ ತಾಂತ್ರಿಕತೆ ಬೆದರಿಕೆ ಹಾಕುವ ದೇಶಕ್ಕಿಂತ ನೂರು ವರ್ಷ ಮುಂದಿದೆ ಎಂದು ಹೇಳಿದ್ದಾರೆ. ಭೂಕುಸಿತ, ಮೇಘಸ್ಫೋಟ ಮತ್ತು ಇತರ ವಿಪತ್ತುಗಳು ಸೇರಿದಂತೆ ಇತ್ತೀಚಿನ ನೈಸರ್ಗಿಕ ವಿಕೋಪಗಳಿಂದ ಹಾನಿಗೊಳಗಾದವರಿಗೆ ಪ್ರಧಾನಿ ಸಂತಾಪ ಸೂಚಿಸಿದ್ದು, ದೇಶ ಒಗ್ಗಟ್ಟಾಗಿ ನಿಲ್ಲುವ ಸಮಯ ಬಂದಿದೆ ಎಂದರು. ಕಳೆದ ಕೆಲವು ದಿನಗಳಿಂದ ನಾವು ನೈಸರ್ಗಿಕ ವಿಕೋಪಗಳು, ಭೂಕುಸಿತಗಳು, ಮೇಘಸ್ಫೋಟಗಳು ಮತ್ತು ಇತರ ಹಲವು ವಿಪತ್ತುಗಳನ್ನು ಎದುರಿಸುತ್ತಿದ್ದೇವೆ. ಸಂತ್ರಸ್ತ ಜನರೊಂದಿಗೆ ನಮ್ಮ ಸಹಾನುಭೂತಿ ಇದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಸರ್ಕಾರವು ರಕ್ಷಣಾ ಕಾರ್ಯಾಚರಣೆಗಳು, ಪರಿಹಾರ ಪ್ರಯತ್ನಗಳು ಮತ್ತು ಪುನರ್ವಸತಿ ಕಾರ್ಯಗಳಲ್ಲಿ ಸಂಪೂರ್ಣ ಶಕ್ತಿಯಿಂದ ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ” ಎಂದು ಪ್ರಧಾನಿ ಮೋದಿ ಹೇಳಿದರು.

ಈ ದೀಪಾವಳಿಯನ್ನು ನಿಮಗಾಗಿ ಡಬಲ್ ದೀಪಾವಳಿಯನ್ನಾಗಿ ಮಾಡಲಿದ್ದೇನೆ. ಈ ದೀಪಾವಳಿಯಲ್ಲಿ ನಾಗರಿಕರಿಗೆ ದೊಡ್ಡ ಉಡುಗೊರೆ ಸಿಗಲಿದೆ. ಕಳೆದ ಎಂಟು ವರ್ಷಗಳಲ್ಲಿ, ನಾವು ಜಿಎಸ್ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ನಾವು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡಿದ್ದೇವೆ ಮತ್ತು ತೆರಿಗೆ ಪ್ರಕ್ರಿಯೆಯನ್ನು ಸರಳಗೊಳಿಸಿದ್ದೇವೆ. ಎಂಟು ವರ್ಷಗಳ ನಂತರ, ಬದಲಾವಣೆಗಳನ್ನು ಪರಿಶೀಲಿಸುವ ಸಮಯ ಬಂದಿದೆ. ಪರಿಶೀಲನಾ ಪ್ರಕ್ರಿಯೆಗಾಗಿ ನಾವು ಉನ್ನತಾಧಿಕಾರ ಸಮಿತಿಯನ್ನು ರಚಿಸಿದ್ದೇವೆ ಎಂದು ಮೋದಿ ಹೇಳಿದ್ದಾರೆ.

ಅಷ್ಟೇ ಅಲ್ಲದೆ, ರಾಜ್ಯಗಳೊಂದಿಗೆ ಸಮಾಲೋಚನೆಯನ್ನು ಸರ್ಕಾರ ನಡೆಸಿದೆ. ನಾವು ಮುಂದಿನ ಪೀಳಿಗೆಯ ಜಿಎಸ್ಟಿ ಸುಧಾರಣೆಗಳನ್ನು ತರುತ್ತಿದ್ದೇವೆ. ಇದು ದೇಶಾದ್ಯಂತ ತೆರಿಗೆ ಹೊರೆಯನ್ನು ಕಡಿಮೆ ಮಾಡುತ್ತದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದೇ ವೇಳೆ ಪ್ರಧಾನಿ ಮೋದಿ ಮತ್ತೊಂದು ಅಪರೂಪದ ಸಾಧನೆ ಮಾಡಿದರು. ಸತತ 12ನೇ ಬಾರಿಗೆ ಕೆಂಪು ಕೋಟೆಯ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿದ ಮೋದಿ, ಅತಿ ಹೆಚ್ಚು ಬಾರಿ ಧ್ವಜಾರೋಹಣ ಮಾಡಿದ ಮೂರನೇ ಪ್ರಧಾನಿ ಎಂಬ ದಾಖಲೆಯನ್ನು ಸೃಷ್ಟಿಸಿದ್ದಾರೆ. ಈ ಸಾಧನೆ ಮಾಡಿದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು 1947-64 ರವರೆಗೆ 17 ಬಾರಿ ಧ್ವಜಾರೋಹಣ ಮಾಡಿದ್ದರು. ಅದರ ನಂತರ, ಇಂದಿರಾ ಗಾಂಧಿ ಪ್ರಧಾನಿಯಾಗಿ ತ್ರಿವರ್ಣ ಧ್ವಜವನ್ನು 16 ಬಾರಿ ಹಾರಿಸಿದ್ದರು. ಸ್ವಾತಂತ್ರ್ಯ ದಿನಾಚರಣೆಯಂದು ಸತತವಾಗಿ ಅತಿ ಹೆಚ್ಚು ಬಾರಿ ಕೆಂಪು ಕೋಟೆಯ ಮೇಲೆ ಧ್ವಜಾರೋಹಣ ಮಾಡಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿ ಮತ್ತು ಸಚಿವ ಎಂಬ ಹೆಗ್ಗಳಿಕೆಗೆ ನರೇಂದ್ರ ಮೋದಿ ಪಾತ್ರರಾದರು.

K.M.Sathish Gowda

Join WhatsApp

Join Now

Facebook

Join Now

Leave a Comment