ಮೀರತ್: ರಜೆ ಮುಗಿಸಿ ಕರ್ತವ್ಯಕ್ಕೆ ವಾಪಸ್ ಹೋಗುತ್ತಿದ್ದ ಭಾರತೀಯ ಸೇನೆ ಯೋಧನ ಮೇಲೆ ಹಲ್ಲೆ ಮಾಡಿದ್ದ ಟೋಲ್ ಪ್ಲಾಜಾ ಸಿಬ್ಬಂದಿಗಳನ್ನು ಸ್ಥಳೀಯ ಗ್ರಾಮಸ್ಥರು ಒಗ್ಗೂಡಿ ಅಟ್ಟಾಡಿಸಿ ಹೊಡೆದಿರುವ ಘಟನೆ ವರದಿಯಾಗಿದೆ.
ಜಮ್ಮು ಕಾಶ್ಮೀರದಲ್ಲಿ ಸೈನಿಕನಾಗಿ ಕೆಲಸ ಮಾಡುತ್ತಿದ್ದ ಯೋಧ ಕಪಿಲ್ ಕವದ್ ಊರಿಗೆ ಬಂದು ರಜೆ ಮುಗಿಸಿ ವಾಪಸ್ ಹೋಗುತ್ತಿದ್ದ ವೇಳೆ ಟೋಲ್‌ಗೇಟ್‌ವೊಂದರಲ್ಲಿ ಅವರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಲಾಗಿತ್ತು.
ಉತ್ತರ ಪ್ರದೇಶದ ಮೀರತ್ ನ ಸರೂರ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಭೂನಿ ಟೋಲ್ ಪ್ಲಾಜಾದಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿತ್ತು.
ಗ್ರಾಮಸ್ಥರಿಂದ ಟೋಲ್ ಧ್ವಂಸ, ದಿಕ್ಕೆಟ್ಟು ಓಡಿದ ಸಿಬ್ಬಂದಿ
ಇನ್ನು ಯೋಧನ ಮೇಲಿನ ಟೋಲ್ ಸಿಬ್ಬಂದಿ ಹಲ್ಲೆ ಮಾಡಿರುವ ವಿಡಿಯೋ ವೈರಲ್ ಆಗುತ್ತಲೇ ಸಿಟ್ಟಿಗೆದ್ದ ಗ್ರಾಮಸ್ಥರು ಟೋಲ್ ಪ್ಲಾಜಾವನ್ನೇ ಧ್ವಂಸಗೊಳಿಸಿದ್ದಾರೆ. ಗ್ರಾಮಸ್ಥರು ಟೋಲ್ ಪ್ಲಾಜಾ ಮೇಲೆ ಹಲ್ಲೆಗೆ ಮುಂದಾಗುತ್ತಿದ್ದಂತೆಯೇ ಟೋಲ್ ಸಿಬ್ಬಂದಿ ದಿಕ್ಕಾಪಾಲಾಗಿ ಓಡಿದ್ದಾರೆ.