ಭದ್ರಾವತಿ, ಸೆಪ್ಟೆಂಬರ್ 09: ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆಯ ವೇಳೆ ಕೆಲ ಮುಸಲ್ಮಾನ ಕಿಡಿಗೇಡಿಗಳು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವುದು ದೇಶಭಕ್ತಿಯ ಭಾವನೆಗಳಿಗೆ ತೀವ್ರ ಆಘಾತ ತಂದಿದೆ. ರಾಷ್ಟ್ರವಿರೋಧಿ ಈ ರೀತಿಯ ಕೃತ್ಯಗಳು ಯಾವುದೇ ಕಾರಣಕ್ಕೂ ಸಹಿಸಿಕೊಳ್ಳಲಾಗುವುದಿಲ್ಲ ಎಂದು ಬಿಜೆಪಿ ನಾಯಕರು ಖಂಡಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಮಿತಿ ಮೀರಿದ ತುಷ್ಟೀಕರಣ ರಾಜಕಾರಣದ ಪರಿಣಾಮವೇ ಇಂತಹ ಘಟನೆಗಳಿಗೆ ಪರೋಕ್ಷವಾಗಿ ಉತ್ತೇಜನವಾಗಿದೆ ಎಂದು ಆರೋಪಿಸಿದವರು, “ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ದೇಶದ್ರೋಹಿಗಳಿಗೆ ಬೆಂಬಲ ನೀಡುವುದು ಈ ಆಡಳಿತದ ಸಂಸ್ಕೃತಿಯಾಗಿದೆ” ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಭದ್ರಾವತಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ಶಾಸಕ ಚನ್ನಬಸಪ್ಪ, ಪಕ್ಷದ ಪ್ರಮುಖರು ಹಾಗೂ ನೂರಾರು ಹಿಂದೂ ಕಾರ್ಯಕರ್ತರು ಭಾಗವಹಿಸಿ ಆಕ್ರೋಶ ವ್ಯಕ್ತಪಡಿಸಿದರು.
“ಇನ್ನು ಮುಂದೆ ಯಾವುದೇ ಕಾರಣಕ್ಕೂ ಪಾಕಿಸ್ತಾನ ಪರ ಘೋಷಣೆ, ರಾಷ್ಟ್ರವಿರೋಧಿ ಚಟುವಟಿಕೆಗಳನ್ನು ಸಹಿಸುವುದಿಲ್ಲ. ಇಂತಹ ಕೃತ್ಯಗಳನ್ನು ಮಾಡಿದವರನ್ನು ಬೇರುಸಮೇತ ನಿರ್ಮೂಲಗೊಳಿಸಲು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಜನತೆಯೇ ಸರ್ಕಾರದ ವಿರುದ್ಧ ಸಿಡಿದೇಳುವ ಪರಿಸ್ಥಿತಿ ನಿರ್ಮಾಣವಾಗಲಿದೆ” ಎಂದು ಆಗ್ರಹಿಸಿದರು.