ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

100 ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚು, ಸ್ಮಾರ್ಟ್‌ ಬೋರ್ಡ್‌ – ರೋಟರಿಯ ಯೋಜನೆಗೆ ಸಚಿವ ಮಧು ಬಂಗಾರಪ್ಪ ಮೆಚ್ಚುಗೆ

On: September 10, 2025 2:32 PM
Follow Us:

ಸರ್ಕಾರಿ ಶಾಲೆಗಳ ಚಿತ್ರವನ್ನು ಬದಲಿಸುವುದು ಕೇವಲ ಸರ್ಕಾರದ ಕೆಲಸವಲ್ಲ; ಅದು ಸಮಾಜದ ಜವಾಬ್ದಾರಿಯೂ ಹೌದು. ಇದೇ ಅಂಶವನ್ನು ದೃಢಪಡಿಸುವಂತೆ, ಬೆಂಗಳೂರು ರೋಟರಿ ಕ್ಲಬ್‌ ಹಾಗೂ ಶಿಕ್ಷಣ ಇಲಾಖೆಯ ನಡುವೆ ಸಹಿ ಆದ ಒಡಂಬಡಿಕೆ ಗಮನ ಸೆಳೆದಿದೆ.

ಮೇಜು-ಬೆಂಚುಗಳ ಕೊರತೆಯಿಂದ ನೆಲದಲ್ಲಿ ಕೂತು ಕಲಿಯುವ ಮಕ್ಕಳಿಗೆ ಉತ್ತಮ ಸೌಲಭ್ಯ ಒದಗಿಸುವುದಷ್ಟೇ ಅಲ್ಲ, 75 ಇಂಚಿನ ಇಂಟರಾಕ್ಟಿವ್‌ ಬೋರ್ಡ್‌ಗಳ ಮೂಲಕ ತಂತ್ರಜ್ಞಾನಾಧಾರಿತ ಕಲಿಕೆಯನ್ನು ಪರಿಚಯಿಸುವುದು ಈ ಯೋಜನೆಯ ವೈಶಿಷ್ಟ್ಯ. ಇದು ಗ್ರಾಮೀಣ ಮತ್ತು ಹಿಂದುಳಿದ ವಲಯದ ವಿದ್ಯಾರ್ಥಿಗಳಿಗೂ ಸಮಾನ ಅವಕಾಶ ನೀಡುವ ಬಲವಾದ ಹೆಜ್ಜೆ.

ಬೆಂಗಳೂರು, ಸೆಪ್ಟೆಂಬರ್ 9: ಬೆಂಗಳೂರು ರೋಟರಿ ಕ್ಲಬ್‌ (RCB) ಶಾಲಾ ಶಿಕ್ಷಣ ಇಲಾಖೆಯೊಂದಿಗೆ ರಾಜ್ಯದ ಸರ್ಕಾರಿ ಶಾಲೆಗಳಿಗೆ ಮೇಜು-ಬೆಂಚುಗಳ ಜೊತೆಗೆ ಇಂಟರಾಕ್ಟಿವ್‌ ಎಲ್‌ಇಡಿ ಬೋರ್ಡ್‌ಗಳನ್ನು ಒದಗಿಸಲು ಇಂದು ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಶ್ರೀ ಮಧು ಬಂಗಾರಪ್ಪನವರ ಸಮ್ಮುಖದಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು.

ರೋಟರಿ ಇಂಟರಾಕ್ಟಿವ್ ಲರ್ನಿಂಗ್ 2025-26” ಹೆಸರಿನ ಈ ಯೋಜನೆಯಡಿ, ರೋಟರಿ ಕ್ಲಬ್ ತನ್ನ ಟ್ರಸ್ಟ್‌ ಮುಖಾಂತರ ರಾಜ್ಯದ 100 ಸರ್ಕಾರಿ ಶಾಲಾ ತರಗತಿಗಳಿಗೆ ಬೆಂಚು-ಮೇಜುಗಳ ಜೊತೆಗೆ 75 ಇಂಚಿನ ಇಂಟರಾಕ್ಟಿವ್‌ ಬೋರ್ಡ್‌ಗಳನ್ನು ಯುಪಿಎಸ್‌ ಸೌಲಭ್ಯ ಸಹಿತ ಒದಗಿಸಲಿದೆ. ಸುಮಾರು ₹3.5 ಕೋಟಿ ವೆಚ್ಚದಲ್ಲಿ ಜಾರಿಗೊಳ್ಳುವ ಈ ಯೋಜನೆ 2026ರ ಜೂನ್ 30ರೊಳಗೆ ಪೂರ್ಣಗೊಳ್ಳುವ ಗುರಿ ಹೊಂದಿದೆ. ಹೆಚ್ಚುವರಿ CSR ನೆರವು ದೊರೆತರೆ, 2026-27ರಲ್ಲಿ ಇನ್ನಷ್ಟು ತರಗತಿಗಳನ್ನು ಈ ಯೋಜನೆಯ ವ್ಯಾಪ್ತಿಗೆ ತರಲಾಗುವುದು.

ಒಡಂಬಡಿಕೆಗೆ ಸಹಿ ಹಾಕಿದ ನಂತರ ಮಾತನಾಡಿದ ರೋಟರಿ ಕ್ಲಬ್ ಅಧ್ಯಕ್ಷ ಸುಖೇನ್ ಅವರು, ಕನಿಷ್ಠ 1,000 ಮೇಜು-ಬೆಂಚುಗಳು ಮತ್ತು ಸ್ಮಾರ್ಟ್‌ ಬೋರ್ಡ್‌ಗಳನ್ನು ಸರ್ಕಾರಿ ಶಾಲೆಗಳಲ್ಲಿ ಒದಗಿಸುವ ಉದ್ದೇಶವನ್ನು ಕ್ಲಬ್ ಹೊಂದಿದೆ ಎಂದು ಹೇಳಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರು ಈ ಸಹಯೋಗವನ್ನು ಸ್ವಾಗತಿಸಿ, “ಸಾರ್ವಜನಿಕ ಶಿಕ್ಷಣ ಬಲಪಡಿಸಲು ಇದು ಮಹತ್ವದ ಹೆಜ್ಜೆ” ಎಂದರು. ಇಲಾಖೆಯ “ನಮ್ಮ ಶಾಲೆ ನಮ್ಮ ಜವಾಬ್ದಾರಿ” ಕಾರ್ಯಕ್ರಮವು ಈಗಾಗಲೇ ಹಳೆಯ ವಿಧ್ಯಾರ್ಥಿಗಳು ಹಾಗೂ ಸಮುದಾಯದ ಬೆಂಬಲವನ್ನು ಪಡೆದುಕೊಂಡಿದೆ. ರೋಟರಿಯ ಈ ಪಾಲ್ಗೊಳ್ಳುವಿಕೆಯಿಂದ ಶಾಲೆಗಳ ಮೂಲಸೌಕರ್ಯವನ್ನು ಬಲಪಡಿಸುವಲ್ಲಿ ಹೆಚ್ಚಿನ ಸಮುದಾಯ ಪಾಲ್ಗೊಳ್ಳುವಿಕೆ ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರಶ್ಮಿ ಮಹೇಶ್, ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರಾದ ಡಾ. ಕೆ.ವಿ. ತ್ರಿಲೋಕ್‌ ಚಂದ್ರ, ಸಮಗ್ರ ಶಿಕ್ಷಣ ಕರ್ನಾಟಕ ರಾಜ್ಯ ಯೋಜನಾ ನಿರ್ದೇಶಕಿ ಶ್ರೀಮತಿ ವಿದ್ಯಾ ಕುಮಾರಿ, ರೋಟರಿ ಜಿಲ್ಲಾ ಗವರ್ನರ್ ಎಲಿಜಬೆತ್‌ ಚೆರಿಯನ್ ಹಾಗೂ ಹಿರಿಯ ಅಧಿಕಾರಿಗಳು ಮತ್ತು ರೋಟರಿಯನ್‌ಗಳು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment