ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ದಸರಾ ಮಹೋತ್ಸವ: ವೈಭವದ ಜಂಬೂ ಸವಾರಿ ಮೆರವಣಿಗೆಗೆ ಅದ್ದೂರಿ ಚಾಲನೆ

On: October 2, 2025 11:42 PM
Follow Us:

ಶಿವಮೊಗ್ಗ: ವಿಜಯದಶಮಿಯ ಶುಭ ಸಂದರ್ಭದಲ್ಲಿ ಶಿವಮೊಗ್ಗದ ವೈಭವದ ಜಂಬೂಸವಾರಿ ಮೆರವಣಿಗೆ ಇಂದು ಉದ್ಘಾಟನೆಯಾಯಿತು. ಶಿವಪ್ಪನಾಯಕ ಅರಮನೆ ಆವರಣದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ಅಂಬಾರಿ ಮೆರವಣಿಗೆಯಲ್ಲಿ ನಂದಿ ಧ್ವಜಕ್ಕೆ ಮೊದಲ ಪೂಜೆ ಸಲ್ಲಿಸುವ ಮೂಲಕ ಸಮಾರಂಭ ಅಧಿಕೃತವಾಗಿ ಆರಂಭವಾಯಿತು.

ಜಂಬೂಸವಾರಿ ಮೆರವಣಿಗೆಯಲ್ಲಿ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ ನವರು ನಾಡದೇವತೆ ಶ್ರೀ ಚಾಮುಂಡೇಶ್ವರಿ ತಾಯಿಗೆ ಪುಷ್ಪಾರ್ಚನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಮಸ್ತ ನಾಡಿನ ಜನತೆಗೆ ಸುಖ-ಶಾಂತಿ, ನೆಮ್ಮದಿ ಮತ್ತು ಆರೋಗ್ಯ ವೃದ್ಧಿ ಆಗಲಿ ಎಂದು ಹೃದಯಪೂರ್ವಕ ಪ್ರಾರ್ಥನೆ ನಡೆಸಲಾಯಿತು. ಈ ಸಂಭ್ರಮವು ನಗರದಲ್ಲಿ ಸಾವಿರಾರು ಜನರನ್ನು ಸೆಳೆದಿದ್ದು, ದಸರಾ ಹಬ್ಬದ ವೈಭವವನ್ನು ಮತ್ತಷ್ಟು ಬೆಳಗಿಸಿದೆ. ಶಿವಪ್ಪನಾಯಕ ಅರಮನೆ ಆವರಣದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ಅಂಬಾರಿ ಮೆರವಣಿಗೆಯಲ್ಲಿ ನಂದಿ ಧ್ವಜಕ್ಕೆ ಮೊದಲ ಪೂಜೆ ಸಲ್ಲಿಸುವ ಮೂಲಕ ಸಮಾರಂಭವನ್ನು ಅಧಿಕೃತವಾಗಿ ಉದ್ಘಾಟಿಸಲಾಯಿತು.

ಈ ಸಂದರ್ಭದಲ್ಲಿ ಶಾಸಕರಾದ  ಎಸ್.ಎನ್. ಚನ್ನಬಸಪ್ಪ (ಚನ್ನಿ), ವಿಧಾನಪರಿಷತ್ ಸದಸ್ಯರಾದ ಶ್ರೀಮತಿ ಬಲ್ಕಿಶ್ ಬಾನು, ಸೂಡಾ ಅಧ್ಯಕ್ಷ ಹೆಚ್.ಎಸ್. ಸುಂದರೇಶ್, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಎಸ್ಪಿ ಮಿಥುನ್ ಕುಮಾರ್, ಜಿಲ್ಲಾ ಪಂಚಾಯತ್ ಸಿಇಒ ಎನ್. ಹೇಮಂತ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿವಮೊಗ್ಗ ದಸರಾ ವೈಭವವು ಮೈಸೂರು ದಸರಾ ಮಾದರಿಯಂತೆ 11 ದಿನಗಳ ಕಾಲ ವಿವಿಧ ಸಾಂಸ್ಕೃತಿಕ, ಧಾರ್ಮಿಕ, ಕ್ರೀಡಾ ಮತ್ತು ಸಮಾಜ ಸೇವಾ ಕಾರ್ಯಕ್ರಮಗಳ ಮೂಲಕ ನಡೆಯುತ್ತದೆ. ರಾಜ್ಯದಲ್ಲಿ ಅತ್ಯಂತ ಪ್ರಖ್ಯಾತಿ ಹೊಂದಿರುವ ಈ ಹಬ್ಬವು ನಗರವಾಸಿಗಳಿಗೆ ಹೆಮ್ಮೆಯ ಸಂಗತಿ ಹಾಗೂ ಭಕ್ತರಿಗೆ ಆನಂದದಾಯಕ ಕ್ಷಣವಾಗಿದೆ.

ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ದಲ್ಲಿ ನಡೆದ “ಬನ್ನಿ ಮುಡಿಯುವ” ಕಾರ್ಯಕ್ರಮವನ್ನು ವಿ.ಎಸ್. ರಾಜೀವ್ ತಹಶೀಲ್ದಾರ್ ರವರು ನೆರವೇರಿಸಿದರು, ಇದು ಹಬ್ಬದ ಪ್ರಮುಖ ಆಕರ್ಷಣೆಯಾಗಿತ್ತು. ಮಕ್ಕಳು, ಯುವಕರು ಮತ್ತು ಹಿರಿಯರು ಎಲ್ಲರೂ ಸಂಭ್ರಮದೊಂದಿಗೆ ಪಾಲ್ಗೊಂಡರು. ರಾವಣ ಸಂಹಾರ ಕಾರ್ಯಕ್ರಮವು ದಸರಾ ಹಬ್ಬದ ಪ್ರಮುಖ ಆಕರ್ಷಣೆಯಾಗಿ ಪರಿಣಮಿಸಿತು. ಸಿಡಿಮದ್ದುಗಳ ಜ್ವಾಲೆ ಮತ್ತು ಶಬ್ದದ ನಡುವೆ, ಸಾವಿರಾರು ಜನರು ನೆರೆದಿದ್ದು, ಹಬ್ಬದ ವೈಭವವನ್ನು ಅನುಭವಿಸಿದರು. ಈ ದೃಶ್ಯವು ನಗರವಾಸಿಗಳಿಗೆ ಸಾಂಸ್ಕೃತಿಕ ಉತ್ಸವದ ಮೆರುಗು ನೀಡಿದ ಪ್ರಮುಖ ಕ್ಷಣವಾಯಿತು.

ಜಂಬೂಸವಾರಿ ಮೆರವಣಿಗೆಯಲ್ಲಿ ಶಿಕ್ಷಣ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧು ಬಂಗಾರಪ್ಪ, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಧನಂಜಯ ಸರ್ಜಿ, ಬಲ್ಕಿಶ್‌ ಬಾನು ಹಾಗೂ ಮಾಜಿ ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment