ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಜೆಪಿ ಪಾರ್ಕ್‌ನಲ್ಲಿ ಡಿಕೆಶಿ–ಮುನಿರತ್ನ ಘರ್ಷಣೆ: “ಕರಿ ಟೋಪಿ ಎಂಎಲ್‌ಎ ಬಾರಯ್ಯ” ವಿವಾದಕ್ಕೆ ಕಾರಣ

On: October 12, 2025 10:49 AM
Follow Us:

ಬೆಂಗಳೂರು, ಅಕ್ಟೋಬರ್ 12: ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಮುಂಜಾನೆ ಮತ್ತಿಕೆರೆಯ ಜೆಪಿ ಪಾರ್ಕ್‌ಗೆ ಭೇಟಿ ನೀಡಿ ವಾಯುವಿಹಾರಕ್ಕೆ ಬಂದ ಜನರೊಂದಿಗೆ ಸಂವಾದ ನಡೆಸಿದರು. ಆದರೆ ಈ ಸಂದರ್ಭ ಆರ್.ಆರ್. ನಗರ ಶಾಸಕ ಮುನಿರತ್ನ ಅವರ ಆಗಮನದಿಂದ ಸ್ಥಳದಲ್ಲೇ ಹೈಡ್ರಾಮಾ ನಡೆಯಿತು.

ಶಿವಕುಮಾರ್ ಅವರೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು. ಜನರ ಅಹವಾಲುಗಳನ್ನು ಆಲಿಸುತ್ತಿದ್ದ ವೇಳೆ ಆರ್‌ಎಸ್‌ಎಸ್ ಉಡುಪಿನಲ್ಲಿ ಹಾಗೂ ಕಪ್ಪು ಟೋಪಿ ಧರಿಸಿ ಬಂದ ಮುನಿರತ್ನ ಅವರು ಜನರ ಮಧ್ಯೆ ಕುಳಿತರು. ವೇದಿಕೆಯ ಮೇಲೆ ಡಿಕೆ ಶಿವಕುಮಾರ್ “ಹೇಯ್, ಕರಿ ಟೋಪಿ ಎಂಎಲ್‌ಎ, ಬಾರಯ್ಯ” ಎಂದು ಕರೆಯುತ್ತಿದ್ದರೂ, ಮುನಿರತ್ನ ವೇದಿಕೆಗೆ ಹೋಗದೇ “ನಾನು ಜನರ ಮಧ್ಯೆ ಕೂರುತ್ತೇನೆ” ಎಂದರು.

ನಂತರ ಮುನಿರತ್ನ ಅವರು ಎದ್ದು ನಿಂತು ಡಿಸಿಎಂ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರಿಗೂ ಆಹ್ವಾನ ನೀಡಿಲ್ಲ. ನಮ್ಮ ಫೋಟೋಗಳನ್ನೂ ಎಲ್ಲಿಯೂ ಹಾಕಿಲ್ಲ. ಇದು ಸಾರ್ವಜನಿಕ ಕಾರ್ಯಕ್ರಮವಲ್ಲ, ಕಾಂಗ್ರೆಸ್ ಕಾರ್ಯಕ್ರಮವಾಗಿದೆ, ಎಂದು ಅವರು ಆರೋಪಿಸಿದರು.

ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿ ಗದ್ದಲ ಸೃಷ್ಟಿಯಾಯಿತು. “ರೇಪಿಸ್ಟ್ ಮುನಿರತ್ನ” ಎಂದು ಕಾಂಗ್ರೆಸ್ ಕಾರ್ಯಕರ್ತರು ಘೋಷಣೆ ಕೂಗಿದರು. ಗಲಾಟೆ ತೀವ್ರಗೊಂಡ ಕಾರಣ ಪೊಲೀಸರು ಸ್ಥಳಕ್ಕೆ ಧಾವಿಸಿ ಮುನಿರತ್ನರನ್ನು ಜೆಪಿ ಪಾರ್ಕ್‌ನಿಂದ ಹೊರತಂದರು.

ಮುನಿರತ್ನ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತಾ, ನನಗೆ ಆಹ್ವಾನ ನೀಡದೇ ಅವಮಾನ ಮಾಡಿದ್ದಾರೆ. ಡಿಕೆ ಶಿವಕುಮಾರ್ ಅವರು ಸಾರ್ವಜನಿಕ ಕಾರ್ಯಕ್ರಮವನ್ನೂ ಪಕ್ಷದ ವೇದಿಕೆಯನ್ನಾಗಿ ಮಾಡಿದ್ದಾರೆ. ನನ್ನ ವಿರುದ್ಧ ಕೇಸ್‌ಗಳನ್ನು ಎತ್ತಿ ಹಿಡಿದು ರಾಜಕೀಯ ದಾಳಿಯನ್ನೇ ನಡೆಸುತ್ತಿದ್ದಾರೆ, ಎಂದು ಆಕ್ರೋಶ ವ್ಯಕ್ತಪಡಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment