ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಗ್ಯಾರಂಟಿ ವಿವಾದ: “ನನ್ನ ಮಾತು ತಪ್ಪಾಗಿ ಅರ್ಥೈಸಲಾಗಿದೆ” – ದೇಶಪಾಂಡೆ ಸ್ಪಷ್ಟನೆ

On: October 13, 2025 7:25 PM
Follow Us:

ಕಾರವಾರ, ಅಕ್ಟೋಬರ್​ 13: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಶಾಸಕ ಆರ್​.ವಿ. ದೇಶಪಾಂಡೆ ನೀಡಿದ ಹೇಳಿಕೆ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇಶಪಾಂಡೆಗೆ ಸ್ವತಃ ಕರೆ ಮಾಡಿ, ಹೇಳಿಕೆಯ ಬಗ್ಗೆ ಸ್ಪಷ್ಟನೆ ಕೇಳಿದ್ದಾರೆ ಎನ್ನಲಾಗಿದೆ.

ಮಾಹಿತಿ ಪ್ರಕಾರ, ಸಿಎಂ ಅವರೊಂದಿಗೆ ದೂರವಾಣಿ ಸಂಭಾಷಣೆಯಲ್ಲಿ ದೇಶಪಾಂಡೆ ಅವರು, “ನಾನು ಬೆಂಗಳೂರಿಗೆ ಬಂದು ಈ ಕುರಿತು ಸ್ವತಃ ಮಾತನಾಡುತ್ತೇನೆ” ಎಂದು ಹೇಳಿದ್ದಾರೆ. ಹುಬ್ಬಳ್ಳಿಯಿಂದ ರಾತ್ರಿ 8 ಗಂಟೆಗೆ ಬೆಂಗಳೂರಿಗೆ ತೆರಳಲಿರುವ ಅವರು ಇಂದು ರಾತ್ರಿ ಅಥವಾ ನಾಳೆ ಮುಖ್ಯಮಂತ್ರಿಯನ್ನು ಭೇಟಿಯಾಗುವ ಸಾಧ್ಯತೆಯಿದೆ.

ದೇಶಪಾಂಡೆ ಸ್ಪಷ್ಟನೆ

ಚರ್ಚೆ ತೀವ್ರಗೊಂಡ ಹಿನ್ನೆಲೆಯಲ್ಲಿ ಮಾಧ್ಯಮ ಪ್ರಕಟಣೆ ಮೂಲಕ ದೇಶಪಾಂಡೆ ಅವರು ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ.

“ದಾಂಡೇಲಿಯಲ್ಲಿ ನಡೆದ ಸಭೆಯಲ್ಲಿ ನಾನು ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡಿಲ್ಲ. ಸಿದ್ದರಾಮಯ್ಯ ಅವರು ಬಡವರ ಪರವಾಗಿ ಜಾರಿಗೆ ತಂದಿರುವ ಈ ಯೋಜನೆಗಳು ಶ್ಲಾಘನೀಯ. ನನ್ನ ಮಾತಿನ ಉದ್ದೇಶ ಟೀಕಿಸುವುದಲ್ಲ, ಪ್ರಶಂಸಿಸುವುದೇ. ಆದರೆ ಕೆಲವರು ನನ್ನ ಮಾತುಗಳನ್ನು ತಪ್ಪಾಗಿ ಅರ್ಥೈಸಿದ್ದಾರೆ ಎಂಬುದು ವಿಷಾದನೀಯ,” ಎಂದು ಅವರು ತಿಳಿಸಿದ್ದಾರೆ.

ಅವರು ಮುಂದುವರೆದು, “ಸಿದ್ದರಾಮಯ್ಯ ಅವರ ಜನಪರ ಆಡಳಿತ ಶಕ್ತಿ ಈ ಯೋಜನೆಗಳಲ್ಲಿದೆ. ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ತಂದಿದೆ ಎಂಬ ಮಾತು ನಾನು ಎಲ್ಲಿಯೂ ಹೇಳಿಲ್ಲ,” ಎಂದು ಸ್ಪಷ್ಟಪಡಿಸಿದ್ದಾರೆ.

ರಾಜ್ಯ ರಾಜಕಾರಣದಲ್ಲಿ ಈಗಾಗಲೇ ಗ್ಯಾರಂಟಿಗಳ ಆರ್ಥಿಕ ಪರಿಣಾಮಗಳ ಬಗ್ಗೆ ಚರ್ಚೆ ನಡೆಯುತ್ತಿರುವ ಹೊತ್ತಿನಲ್ಲಿ, ಸ್ವಪಕ್ಷದ ಹಿರಿಯ ನಾಯಕರ ಹೇಳಿಕೆ ಸಿಎಂಗೆ ಹೊಸ ತಲೆನೋವಾಗಿ ಪರಿಣಮಿಸಿದೆ.

K.M.Sathish Gowda

Join WhatsApp

Join Now

Facebook

Join Now

Read more

ಪ್ರಜಾಪ್ರಭುತ್ವದ ಶ್ರೇಷ್ಠತೆಗೆ ಸವಾಲೆಸೆದ ಶ್ರೀ ತರಳಬಾಳು ಜಗದ್ಗುರುಗಳು: ನಾಲ್ವಡಿಯವರ ‘ಜನಹಿತ’ದ ಮಾದರಿ ಇಂದೇಕೆ ಸಾಧ್ಯವಾಗುತ್ತಿಲ್ಲ!?ದಾವಣಗೆರೆಯಲ್ಲಿ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಪುತ್ಥಳಿ ಅನಾವರಣ: ವ್ಯವಸ್ಥೆಯ ಆತ್ಮಾವಲೋಕನಕ್ಕೆ ತರಳಬಾಳು ಶ್ರೀಗಳ ಕರೆ

ಮೂರು ಸಾವಿರ ಕಂಠಗಳು… ಒಂದೇ ನಾದ… ಬಸವಣ್ಣನವರ ವಚನಗಳಿಗೆ ದಾವಣಗೆರೆ ಸಾಕ್ಷಿ!: ‘ವಚನ ನಾದಲೋಕ’ದಲ್ಲಿ ಎಲ್ಲರೂ ಭಾಗವಹಿಸಿ ಎಂದು ಡಾ. ಶ್ರೀ ಬಸವ ಮರುಳಸಿದ್ಧ ಸ್ವಾಮೀಜಿ ಮನವಿ

‘ಗಲಾಟೆ ಗಣಪತಿ’ಗೆ ತೆರೆ: ಭಯದಿಂದ ಭಕ್ತಿಯ ಸಂಭ್ರಮದತ್ತ ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ: ಎಸ್‌ಪಿ ನಿಖಿಲ್ ಬಿ. ಅವರ ಕಾರ್ಯತಂತ್ರದಲ್ಲಿ ತಂತ್ರಜ್ಞಾನಾಧಾರಿತ ಕಣ್ಗಾವಲು: ಶಾಂತಿಯುತ ಮೆರವಣಿಗೆಗೆ ಸಾರ್ವಜನಿಕರ ಮೆಚ್ಚುಗೆ

​ಶ್ರೀ ಜಗದ್ಗುರು ರೇಣುಕಾಚಾರ್ಯರು-ಶರಣರನ್ನು ಬೇರ್ಪಡಿಸುವ ಕುತಂತ್ರ ನಿಲ್ಲಲಿ!: ಒಳಗಿನ ಶತ್ರುಗಳಿಂದಲೇ ಧರ್ಮಕ್ಕೆ ಕಂಟಕ, ಸ್ವಾರ್ಥಿಗಳ ಕಪಟ ನಾಟಕ ಇನ್ಮುಂದೆ ನಡೆಯಲ್ಲ!: ಧರ್ಮದ್ರೋಹಿಗಳಿಗೆ ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಖಡಕ್ ಎಚ್ಚರಿಕೆ!

ರೈತರೆ, ಸಾಲಕ್ಕೆ ಹೆದರಬೇಡಿ! ಆತ್ಮಹತ್ಯೆ ಮಾಡಿಕೊಳ್ಳಬೇಡಿ; ಎದೆತಟ್ಟಿ ‘ನಾನು ರೈತ’ ಎಂದು ಹೇಳಿ ಹೋರಾಡಿ: ಬರ ಪರಿಹಾರದ ಹೆಸರಿನಲ್ಲಿ ರೈತರನ್ನು ಕಾಯಿಸುವುದೇಕೆ? ಶಾಶ್ವತ ನೀರಾವರಿ ಕಲ್ಪಿಸಿ, ಸಾಲಮನ್ನಾ ಮಾಡಿ: ಸಿಎಂಗೆ ಎಚ್.ಆರ್. ಬಸವರಾಜಪ್ಪ ಒತ್ತಾಯ

​ಧರ್ಮ ಮತ್ತು ಕಾಯಕದ ಹಾದಿಯಲ್ಲಿ ‘ಶಿವನ ಕುಮಾರ’: ವೀರಶೈವ-ಲಿಂಗಾಯತ ವೇದಿಕೆಯಲ್ಲಿ ಸಿಎಂ ಡಿ.ಕೆ.ಶಿ ಭಾವನಾತ್ಮಕ ಧರ್ಮಸಂದೇಶ!: ‘ಜಾಗ ನನ್ನದು, ಕಟ್ಟಡ ನಿಮ್ಮದು’ – ಮಠಗಳಿಗೆ 2 ಎಕರೆ ಜಾಗ ನೀಡುವ ಭರವಸೆ

Leave a Comment