ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ವಂಚಕರ ಪರ ಒತ್ತಡದ ಆರೋಪದಲ್ಲಿ ಸಚಿವ ಜಮೀರ್ ಸಿಕ್ಕುಬಿದ್ದರೆ! ಆಡಿಯೋ ಸದ್ದು ಮಾಡುತ್ತಿದೆ!

On: October 25, 2025 7:24 PM
Follow Us:

ಬೆಂಗಳೂರು: ರಾಜ್ಯದ ರೈತರಿಗೆ ವಂಚನೆ ಮಾಡಿದ ತೆಲಂಗಾಣದ ವ್ಯಾಪಾರಿಗಳ ವಿರುದ್ಧದ ಪ್ರಕರಣವನ್ನು ಮುಚ್ಚಿಹಾಕಲು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಭಾವ ಬೀರಿದ್ದಾರೆ ಎನ್ನುವ ಆಡಿಯೋ ಸಂಭಾಷಣೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಪೆರೆಸಂದ್ರ ಪಿಎಸ್‌ಐ ಜಗದೀಶ್ ರೆಡ್ಡಿ ಅವರಿಗೆ ಕರೆಮಾಡಿರುವ ಜಮೀರ್ ಅಹ್ಮದ್ ಖಾನ್, ರೈತರ ಹಿತವಿರುದ್ಧವಾಗಿ ವಂಚಕರ ಪರ ನಿಂತು “ಕೇಸ್ ಸೆಟಲ್‌ಮೆಂಟ್ ಮಾಡಿ” ಎಂದು ಒತ್ತಡ ಹಾಕಿದ ಆಡಿಯೋ ಕ್ಲಿಪ್ ಈಗ ವೈರಲ್ ಆಗಿದೆ.

ಈ ಆಡಿಯೋವನ್ನು ಜೆಡಿಎಸ್ ಅಧಿಕೃತ ಖಾತೆಯಿಂದ ಎಕ್ಸ್ ನಲ್ಲಿ ಹಂಚಿಕೊಳ್ಳಲಾಗಿದ್ದು, ಪಕ್ಷದ ನಾಯಕರು ಸಚಿವ ಜಮೀರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಿಎಂ ಸಿದ್ದರಾಮಯ್ಯಗೆ ಜೆಡಿಎಸ್ ಸವಾಲು – “ಸೆಟಲ್‌ಮೆಂಟ್ ಸಚಿವರನ್ನು ವಜಾ ಮಾಡಿ” ಬೇಡಿಕೆ!

“ರಾಜ್ಯದ ಜವಾಬ್ದಾರಿಯುತ ಸಚಿವರಾಗಿರುವ ವ್ಯಕ್ತಿ ವಂಚಕರ ಪರವಾಗಿ ನಿಂತು ರೈತರ ಹಕ್ಕು ಕಸಿಯಲು ಪ್ರಯತ್ನಿಸುತ್ತಿರುವುದು ಅತ್ಯಂತ ವಿಷಾದಕರ. ಇಂಥವರು ಸಚಿವ ಸ್ಥಾನದಲ್ಲಿ ಮುಂದುವರಿಯುವುದು ಸರ್ಕಾರದ ನೈತಿಕತೆಗೂ ಅವಮಾನ,” ಎಂದು ಜೆಡಿಎಸ್ ಟೀಕಿಸಿದೆ.

ಅವರು ಮುಂದೆ ಹೇಳಿದ್ದು — “ರಾಜ್ಯದಲ್ಲಿ ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸುವ ಬದಲು, ಪೊಲೀಸ್‌ ಠಾಣೆಗಳು ಈಗ ಸೆಟಲ್‌ಮೆಂಟ್ ಕೇಂದ್ರಗಳಾಗಿವೆ, ಇದಕ್ಕೆ ಈ ಘಟನೆ ಜೀವಂತ ಉದಾಹರಣೆ. ಸಿಎಂ ಸಿದ್ದರಾಮಯ್ಯ ಅವರು ನೈತಿಕತೆ ತೋರಿಸಿ, ರೌಡಿಗಳು ಹಾಗೂ ವಂಚಕರ ಪರ ವಹಿಸುವ ಸೆಟಲ್‌ಮೆಂಟ್ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಕೂಡಲೇ ಸಂಪುಟದಿಂದ ವಜಾ ಮಾಡಬೇಕು,” ಎಂದು ಆಗ್ರಹ ವ್ಯಕ್ತಪಡಿಸಿದೆ.

ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ, ಜಮೀರ್ ಅಹ್ಮದ್ ಖಾನ್ ವಿರುದ್ಧ ವಿರೋಧಿ ಪಕ್ಷಗಳು ನೇರ ದಾಳಿ ಆರಂಭಿಸಿವೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment