ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಎಸ್. ಬಂಗಾರಪ್ಪನವರ ಸ್ಮರಣೆಗೆ ಮತ್ತೊಂದು ಗೌರವ — ಶಿವಮೊಗ್ಗ ನಗರದ ನೂರು ಅಡಿ ರಸ್ತೆಗೆ ‘ಶ್ರೀ ಎಸ್. ಬಂಗಾರಪ್ಪ ಮಾರ್ಗ’ ಎಂದು ನಾಮಕರಣ

On: October 29, 2025 12:24 AM
Follow Us:

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಸಮ ಸಮಾಜದ ಸಮಾಜಮುಖಿ ನಾಯಕ ಹಾಗೂ ರಾಜ್ಯದ ಅಪರೂಪದ ರಾಜಕಾರಣಿ ಶ್ರೀ ಎಸ್. ಬಂಗಾರಪ್ಪನವರ 93ನೇ ಜನ್ಮ ದಿನಾಚರಣೆಯ ಸಂದರ್ಭದಲ್ಲಿ, ಅವರ ಜನ್ಮಸ್ಥಳವಾದ ಬಂಗಾರದಮವನ್ನು ರಾಜ್ಯ ಪ್ರವಾಸೋದ್ಯಮ ಇಲಾಖೆ ಐತಿಹಾಸಿಕ ಪ್ರವಾಸಿ ತಾಣವೆಂದು ಘೋಷಿಸಿರುವ ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿ ಮತ್ತೊಂದು ಗೌರವದ ಸುದ್ದಿ ಬಂದಿದೆ.

ಶಿವಮೊಗ್ಗ ನಗರದ ಗೋಪಾಲಗೌಡ ಬಡಾವಣೆಯ ನೂರು ಅಡಿ ರಸ್ತೆಯನ್ನು ಹಾಲ್ಕುಳ ರಸ್ತೆದಿಂದ ಡಿವಿಜಿ ಸರ್ಕಲ್‌ವರೆಗೆ “ಶ್ರೀ ಎಸ್. ಬಂಗಾರಪ್ಪ ಮಾರ್ಗ” ಎಂದು ನಾಮಕರಣ ಮಾಡಲು ಘನ ಸರ್ಕಾರ ಆದೇಶ ಹೊರಡಿಸಿದೆ.

ಈ ಆದೇಶವನ್ನು ಅತ್ಯಂತ ತುಂಬು ಹೃದಯದಿಂದ ಸ್ವಾಗತಿಸಿರುವ ಜಿಲ್ಲಾ ಆರ್ಯ ಈಡಿಗರ ಸಂಘದ ನಿರ್ದೇಶಕರು ಹಾಗೂ ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯ ಸಂಯೋಜಕರಾದ ಜಿ.ಡಿ. ಮಂಜುನಾಥ್, ಈ ನಾಮಕರಣಕ್ಕೆ ಕಾರಣಿ ಭೂತರಾದ ಎಲ್ಲ ಸಂಘ-ಸಂಸ್ಥೆಗಳು ಹಾಗೂ ಹಿರಿಯ ಮುಖಂಡರಿಗೆ ಎಸ್. ಬಂಗಾರಪ್ಪ ವಿಚಾರವೇದಿಕೆಯ ಪರವಾಗಿ ಧನ್ಯವಾದಗಳನ್ನು ತಿಳಿಸಿದ್ದಾರೆ.

“ಬಂಗಾರಪ್ಪನವರ ಸಮಾಜಮುಖಿ ಚಿಂತನೆ ಹಾಗೂ ಜನಪರ ಆಡಳಿತದಿಂದ ಅವರು ಎಲ್ಲ ಜನಾಂಗಗಳ ಹೃದಯದಲ್ಲಿ ಅಳಿಸಲಾಗದ ಗುರುತು ಬಿಟ್ಟಿದ್ದಾರೆ. ಈ ನಾಮಕರಣವು ಅವರ ಸ್ಮರಣೆಯನ್ನು ಶಾಶ್ವತಗೊಳಿಸುವ ಹೆಜ್ಜೆ,” ಎಂದು ಹೇಳಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment