ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

“ಸಂವಿಧಾನ ಉಲ್ಲಂಘನೆ, ಅಭಿವೃದ್ಧಿ ಶೂನ್ಯ: ಸಿದ್ದರಾಮಯ್ಯ ಸರಕಾರದ ಆಡಳಿತಕ್ಕೆ ಮಾಜಿ ಮುಖ್ಯಮಂತ್ರಿ ಬೊಮ್ಮಾಯಿ ಟೀಕೆ”

On: October 29, 2025 10:41 PM
Follow Us:

ಹಾವೇರಿ, ಅ.29: ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹಾವೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ರಕ್ಷಣೆಯ ವಾದಿಸುತ್ತಿದ್ದರೂ, ಅವರ ಕ್ರಮಗಳು ಸಂವಿಧಾನದ ವಿರುದ್ಧ ನಡೆಯುತ್ತಿವೆ ಎಂದು ಖಂಡಿಸಿದರು. ಅವರು, “ಮಾತೆತ್ತಿದರೆ ಸಂವಿಧಾನ, ಆಚಾರ ಹೇಳುವುದು ಬದನೆಕಾಯಿ ತಿನ್ನುವುದು. ಹಲವು ಸಂದರ್ಭಗಳಲ್ಲಿ ಸಂವಿಧಾನದ ಉಲ್ಲಂಘನೆ ನಡೆದಿದೆ. ಜನರ ವಾಕ್ ಸ್ವಾತಂತ್ರ್ಯ ಮತ್ತು ನಾಗರಿಕ ಹಕ್ಕುಗಳನ್ನು ಮೊಟಕುಗೊಳಿಸಲು ಈ ರಾಜ್ಯದಲ್ಲಿ ಪೊಲೀಸ್ ಆಡಳಿತ ತರಲು ಸರ್ಕಾರ ಪ್ರಯತ್ನಿಸುತ್ತಿದೆ” ಎಂದು ಆರೋಪಿಸಿದರು.

ಹಾಗೆಯೇ, ಆರ್‌ಎಸ್‌ಎಸ್ ವಿರುದ್ಧ ರಾಜ್ಯ ಸರ್ಕಾರ ನೀಡಿದ ಆದೇಶವನ್ನು ಹೈಕೋರ್ಟ್ ತಡೆಹಿಡಿದ ಹಿನ್ನೆಲೆಯಲ್ಲಿ, ಬೊಮ್ಮಾಯಿ ಅವರು, “ಆದೇಶ ಸಂವಿಧಾನ ಬಾಹಿರವಾಗಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದರೆ, ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸುವುದಿಲ್ಲ. ಚುನಾವಣೆ ಆಯೋಗಕ್ಕೂ ಟೀಕೆ ಮಾಡುವ ಮೂಲಕ ಸಂವಿಧಾನಕ್ಕೆ ಅಪಚಾರ ಮಾಡುತ್ತಿದೆ. ಕಾಂಗ್ರೆಸ್‌ ದೇಶಕ್ಕೆ ದೊಡ್ಡ ಅಪಚಾರ ಮಾಡುತ್ತಿದೆ” ಎಂದು ಹೇಳಿದರು.

ಅವರು, ರಾಜ್ಯದಲ್ಲಿ ಅಭಿವೃದ್ಧಿಯಿಲ್ಲದ ಸ್ಥಿತಿ ಮತ್ತು ರಸ್ತೆ, ಮೂಲಸೌಕರ್ಯ ಕುಸಿತದ ಕುರಿತು, “ಸಿದ್ದರಾಮಯ್ಯ ಸರ್ಕಾರದಿಂದ ಜನರು ಬೇಸತ್ತಿದ್ದಾರೆ. ರಸ್ತೆ ಗುಂಡಿಗಳ ನಿರ್ವಹಣೆಗೂ ಹಣ ಇಲ್ಲ; ಮಳೆ ಬಂದಾಗ ರಸ್ತೆ ಸ್ಥಿತಿ ಹಾಳಾಗುತ್ತಿದೆ. ರಾಜ್ಯದ ಮಂತ್ರಿಗಳಲ್ಲಿ ಚಿಂತನೆ ಇಲ್ಲ. ಎಲ್ಲವೂ ಅಧೋಗತಿಗೆ ಹೋಗಿದೆ” ಎಂದು ಕಟುವಾಗಿ ಟೀಕಿಸಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment