ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ರಾಷ್ಟ್ರೀಯ ಏಕತಾ ದಿನಾಚರಣೆ ಹಿನ್ನೆಲೆಯಲ್ಲಿ ಶಿವಮೊಗ್ಗ ಪೊಲೀಸ್ ಇಲಾಖೆಯ ವತಿಯಿಂದ ವಿವಿಧ ಕಾರ್ಯಕ್ರಮಗಳು

On: October 30, 2025 6:15 PM
Follow Us:

ಶಿವಮೊಗ್ಗ: ರಾಷ್ಟ್ರದ ಏಕತಾ, ಅಖಂಡತೆ ಹಾಗೂ ಭಾವೈಕ್ಯತೆಯ ಪ್ರತೀಕವಾಗಿರುವ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನೋತ್ಸವದ ಅಂಗವಾಗಿ, ಪ್ರತಿ ವರ್ಷ ಅಕ್ಟೋಬರ್‌ 31ರಂದು ಆಚರಿಸಲಾಗುವ ರಾಷ್ಟ್ರೀಯ ಏಕತಾ ದಿನದ ಪ್ರಯುಕ್ತ, ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯು ವಿವಿಧ ಚಟುವಟಿಕೆಗಳನ್ನು ಆಯೋಜಿಸಿದೆ.

ಈ ಹಿನ್ನೆಲೆಯಲ್ಲಿ, ದಿನಾಂಕ 30-10-2025ರಂದು ಜಿಲ್ಲೆಯಾದ್ಯಂತ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಶಾಲೆ-ಕಾಲೇಜು ಹಾಗೂ ಶೈಕ್ಷಣಿಕ ಸಂಸ್ಥೆಗಳಲ್ಲಿ ಅರಿವು ಕಾರ್ಯಕ್ರಮಗಳು, ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಹಮ್ಮಿಕೊಳ್ಳಲಾಗಿತ್ತು.

ಪ್ರತಿ ಠಾಣಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಹಾಗೂ ಕಾಲೇಜುಗಳಲ್ಲಿ ರಾಷ್ಟ್ರೀಯ ಭಾವೈಕ್ಯತೆ, ಏಕತೆ ಹಾಗೂ ಪಟೇಲ್ ಅವರ ಜೀವನ ಸ್ಫೂರ್ತಿ ಕುರಿತಂತೆ ಅರಿವು ಕಾರ್ಯಕ್ರಮಗಳನ್ನು ನಡೆಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬಿದರು. ಈ ಕಾರ್ಯಕ್ರಮಗಳಲ್ಲಿ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಚಿತ್ರಕಲೆ, ಭಾಷಣ ಸ್ಪರ್ಧೆ ಮುಂತಾದ ಚಟುವಟಿಕೆಗಳನ್ನು ಆಯೋಜಿಸಲಾಯಿತು.

ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ರಾಷ್ಟ್ರಭಕ್ತಿಯ ಶ್ರದ್ಧೆ ತೋರಿದರು. ಸ್ಪರ್ಧೆಯಲ್ಲಿ ಜಯಗಳಿಸಿದ ವಿದ್ಯಾರ್ಥಿಗಳಿಗೆ ಪೊಲೀಸ್ ಇಲಾಖೆಯ ವತಿಯಿಂದ ಬಹುಮಾನಗಳನ್ನು ವಿತರಿಸಿ ಸನ್ಮಾನಿಸಲಾಯಿತು.

ಪೊಲೀಸ್ ಇಲಾಖೆಯು ನೀಡಿದ ಮಾಹಿತಿಯ ಪ್ರಕಾರ, ಇಂತಹ ಕಾರ್ಯಕ್ರಮಗಳು ಯುವ ಪೀಳಿಗೆಯಲ್ಲಿ ರಾಷ್ಟ್ರಪ್ರೇಮ, ಸಾಮಾಜಿಕ ಜವಾಬ್ದಾರಿ ಹಾಗೂ ಏಕತೆಯ ಮನೋಭಾವ ಬೆಳೆಸುವ ಉದ್ದೇಶದಿಂದ ಆಯೋಜಿಸಲಾಗಿತ್ತು.

ಶಿವಮೊಗ್ಗ ಜಿಲ್ಲೆಯ ಎಲ್ಲ ಠಾಣಾ ವ್ಯಾಪ್ತಿಗಳಲ್ಲಿ ಈ ಕಾರ್ಯಕ್ರಮಗಳು ಯಶಸ್ವಿಯಾಗಿ ನೆರವೇರಿದ್ದು, ಸಾರ್ವಜನಿಕರ ಸಹಕಾರದಿಂದ “ಏಕ ಭಾರತ – ಶ್ರೇಷ್ಠ ಭಾರತ” ಎನ್ನುವ ಸಂದೇಶವನ್ನು ಸಾರುಲಾಯಿತು.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment