ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಎಫ್‌ಆರ್‌ಪಿ ನಿಗದಿ ಕೇಂದ್ರದ ಜವಾಬ್ದಾರಿ; ಪ್ರಧಾನಿ ಮೋದಿ ಅವರಿಗೆ ಪತ್ರ ಬರೆಯುವ ನಿರ್ಧಾರ: ಸಿಎಂ ಸಿದ್ದರಾಮಯ್ಯ

On: November 6, 2025 7:31 PM
Follow Us:

ಬೆಂಗಳೂರು, ನ.6: ಬೆಳಗಾವಿಯಲ್ಲಿ ಕಬ್ಬಿಗೆ ಟನ್‌ಗೆ ₹3,500 ದರ ನಿಗದಿ ಮಾಡಬೇಕೆಂದು ರೈತರು ನಡೆಸುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಬ್ಬಿನ ಎಫ್‌ಆರ್‌ಪಿ (Fair and Remunerative Price) ನಿಗದಿ ಮಾಡುವುದು ಕೇಂದ್ರ ಸರ್ಕಾರದ ಜವಾಬ್ದಾರಿ ಎಂದು ಸ್ಪಷ್ಟಪಡಿಸಿದರು. ನಾಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯುವ ಮೂಲಕ ರೈತರ ಬೇಡಿಕೆಗಳನ್ನು ಗಮನಕ್ಕೆ ತರಲಿರುವುದಾಗಿ ಅವರು ಹೇಳಿದರು.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ರೈತರ ಪ್ರತಿಭಟನೆ ತಾರಕಕ್ಕೇರಿರುವುದರಿಂದ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾಗಿ ಹೇಳಿದರು. ರೈತರ ಹೋರಾಟವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಅವರು ತಿಳಿಸಿದರು. ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಮತ್ತು ಅಧಿಕಾರಿಗಳಿಗೆ ರೈತರ ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ಜೊತೆ ಮಧ್ಯಸ್ಥಿಕೆ ವಹಿಸಿ ಚರ್ಚೆ ನಡೆಸುವಂತೆ ಸೂಚನೆಯಿತ್ತು. ಬೆಳಗಾವಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಮಾತುಕತೆಯಲ್ಲಿ 11.25 ರಿಕವರಿ ಬಂದರೆ ₹3,200 ಮತ್ತು 10.25 ರಿಕವರಿ ಬಂದರೆ ₹3,100 ಪಾವತಿಸಲು ಕಾರ್ಖಾನೆ ಮಾಲೀಕರನ್ನು ಮನವೊಲಿಸಲಾಗಿದೆ. ಆದರೆ ವಿರೋಧ ಪಕ್ಷಗಳು ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸುತ್ತಿರುವುದರಿಂದ ಗೊಂದಲ ಉಂಟಾಗಿದೆ ಎಂದು ಅವರು ಆರೋಪಿಸಿದರು.

ಕಬ್ಬಿಗೆ ಎಫ್‌ಆರ್‌ಪಿ ನಿಗದಿ ಮಾಡುವ ಹಕ್ಕು ಸಂಪೂರ್ಣವಾಗಿ ಕೇಂದ್ರ ಸರ್ಕಾರದದ್ದೇ ಎಂಬುದನ್ನು ಸಿಎಂ ತಿಳಿಸಿದರು. 2018–19ರ ವರೆಗೆ ರಿಕವರಿ ಶೇಕಡಾ 9.5 ಇದ್ದರೆ, 2022–23ರಿಂದ ಶೇಕಡಾ 10.25 ಕ್ಕೆ ಏರಿಸಲಾಗಿದೆ. ಈ ಏರಿಕೆ ರೈತರಿಗೆ ಅನ್ಯಾಯ ಮಾಡಿರುವುದಾಗಿ ಸಿಎಂ ಹೇಳಿದರು. 2019ರಿಂದ ಸಕ್ಕರೆ ಎಂ.ಎಸ್.ಪಿ ಯಲ್ಲಿ ಪರಿಷ್ಕರಣೆ ಆಗದೆ ಇರುವುದರಿಂದಲೂ ರೈತರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ ಎಂದರು. ಜೊತೆಗೆ ಕೇಂದ್ರ ಸರ್ಕಾರ ಸಕ್ಕರೆ ರಫ್ತಿಗೆ ನಿರ್ಬಂಧ ವಿಧಿಸಿರುವುದು ಮತ್ತು ಎಥನಾಲ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಕಡಿಮೆ ಅವಕಾಶ ನೀಡಿರುವುದನ್ನೂ ಅವರು ಪ್ರಶ್ನಿಸಿದರು. ರಾಜ್ಯದಲ್ಲಿ 270 ಕೋಟಿ ಲೀಟರ್ ಸಾಮರ್ಥ್ಯ ಇದ್ದರೂ, ಕೇವಲ 47 ಕೋಟಿ ಲೀಟರ್ ಖರೀದಿಸಲು ಅವಕಾಶ ನೀಡಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರದ ಕ್ರಮಗಳ ಕುರಿತು ಸಿಎಂ ವಿವರಿಸಿದರು. ಸಕ್ಕರೆ ಕಾರ್ಖಾನೆಗಳಲ್ಲಿ ಡಿಜಿಟಲ್ ತೂಕ ಯಂತ್ರಗಳನ್ನು ಅಳವಡಿಸಲಾಗಿದೆ. ತೂಕ, ಇಳುವರಿ, ಕಟಾವು ಮತ್ತು ಬಿಲು ಪಾವತಿಗೆ ಸಂಬಂಧಿಸಿದಂತೆ ಪರಿಶೀಲನಾ ಸಮಿತಿಗಳು ರಚಿಸಲಾಗಿದೆ. ಎಪಿಎಂಸಿಗಳಲ್ಲಿ ಉಚಿತ ತೂಕ ವ್ಯವಸ್ಥೆ ಕಲ್ಪಿಸಲಾಗಿದೆ. 2024–25ರಲ್ಲಿ ರಾಜ್ಯದಲ್ಲಿನ ಸಕ್ಕರೆ ಕಾರ್ಖಾನೆಗಳು 522 ಲಕ್ಷ ಮೆಟ್ರಿಕ್ ಟನ್ ಕಬ್ಬು ಅರಿದು, ರೈತರಿಗೆ ಪಾವತಿಸಬೇಕಿದ್ದ ಮೊತ್ತ ₹18,221.88 ಕೋಟಿ. ಹೆಚ್ಚಿನ ರಿಕವರಿ ಬಂದ ಕಾರಣ ₹19,569.15 ಕೋಟಿ ಪಾವತಿಸಿಕೊಳ್ಳುವಂತೆ ಕ್ರಮ ಕೈಗೊಂಡಿದ್ದೇವೆ ಎಂದು ಸಿಎಂ ಹೇಳಿದರು.

ರೈತರ ಮುಗ್ಧತೆಯನ್ನು ವಿರೋಧ ಪಕ್ಷಗಳು ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಸಿದ್ದರಾಮಯ್ಯ ಎಚ್ಚರಿಸಿದರು. ರೈತರು ಯಾರ ಮಾತಿಗೂ ಬಲಿಯಾಗಬಾರದು, ಸರ್ಕಾರ ಸಂವಾದದ ಮೂಲಕ ಪರಿಹಾರ ಕಂಡುಕೊಳ್ಳಲು ಬದ್ಧವಾಗಿದೆ ಎಂದು ಹೇಳಿದರು. ನಾಳೆ ಬೆಳಿಗ್ಗೆ ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಹಾಗೂ ಮಧ್ಯಾಹ್ನ ರೈತ ಮುಖಂಡರೊಂದಿಗೆ ಸಭೆ ನಡೆಸಲಾಗುವುದು. ಎರಡೂ ಕಡೆಯ ಅಭಿಪ್ರಾಯ ಆಲಿಸಿ ರಾಜ್ಯ ಸರ್ಕಾರ ತನ್ನ ಕಾನೂನಿನ ಮಿತಿಯೊಳಗೆ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ರೈತರ ಬೇಡಿಕೆಗಳನ್ನು ಪ್ರಧಾನಮಂತ್ರಿಯವರ ಮುಂದೆ ನೇರವಾಗಿ ಮಂಡಿಸಲು ಸಿದ್ದರಾಮಯ್ಯ ತೀರ್ಮಾನಿಸಿದ್ದು, ನಾಳೆ ಭೇಟಿ ನೀಡಲು ಅವಕಾಶ ಕುರಿತಂತೆ ಪ್ರಧಾನಿ ಅವರಿಗೆ ಪತ್ರ ಬರೆಯಲಾಗುವುದಾಗಿ ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment