ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ದೆಹಲಿಯ ಸ್ಫೋಟ ಹಿನ್ನೆಲೆ: “ಚುನಾವಣೆ ಸಮಯದಲ್ಲಿ ಇಂತಹ ಘಟನೆಗಳು ಯಾಕೆ?” ಎಂದು ಸಿದ್ದರಾಮಯ್ಯ ಪ್ರಶ್ನೆ

On: November 11, 2025 11:34 PM
Follow Us:

ಮೈಸೂರು, ನವೆಂಬರ್‌ 11: ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ಸಂಜೆ ಸಂಭವಿಸಿದ ನಿಗೂಢ ಸ್ಫೋಟದಲ್ಲಿ 13 ಮಂದಿ ದುರ್ಮರಣ ಹೊಂದಿದ್ದು, 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ದೇಶದಲ್ಲಿ ಚುನಾವಣೆ ವೇಳೆಯಲ್ಲೇ ಇಂತಹ ಬಾಂಬ್‌ ಸ್ಫೋಟಗಳು ನಡೆಯುತ್ತಿರುವುದೇಕೆ ಎಂಬ ಪ್ರಶ್ನೆ ಮೂಡಿದೆ.

ನೆನ್ನೆಯ ದೆಹಲಿ ಬ್ಲಾಸ್ಟ್‌ ಇಂದು ನಡೆಯುತ್ತಿರುವ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರುತ್ತದೆಯೇ ಎಂಬ ಮಾಧ್ಯಮಗಳ ಪ್ರಶ್ನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.

ಮೈಸೂರಿನ ತಮ್ಮ ನಿವಾಸದಲ್ಲಿ ಸೋಮವಾರ ನಡೆದ ಕೆಡಿಪಿ (KDP) ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಚುನಾವಣೆ ವೇಳೆಯ ಬಾಂಬ್‌ ಸ್ಫೋಟಗಳ ಬಗ್ಗೆ ಕೇಂದ್ರ ಸರ್ಕಾರವೇ ಸ್ಪಷ್ಟನೆ ನೀಡಬೇಕು. ತನಿಖೆ ನಡೆಸಿ ನಿಜ ಹೊರತೆಗೆದು ರಾಷ್ಟ್ರದ ಮುಂದೆ ಸತ್ಯ ಹೇಳಬೇಕಾಗಿದೆ,” ಎಂದು ಹೇಳಿದರು.

ದೆಹಲಿಯ ಬ್ಲಾಸ್ಟ್‌ ಬಿಹಾರ ಚುನಾವಣೆಯ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂಬ ಪತ್ರಕರ್ತರ ಪ್ರಶ್ನೆಗೆ ಅವರು, “ಅಂತಹ ಘಟನೆಗಳು ಪ್ರಭಾವ ಬೀರುವುದೋ ಇಲ್ಲವೋ ಹೇಳಲು ಈಗಾಗಲೇ ಸಾಧ್ಯವಿಲ್ಲ. ಆದರೆ ಬಾಂಬ್‌ ಬ್ಲಾಸ್ಟ್‌ಗಳು ಆಗಬಾರದು, ಅಮಾಯಕರ ಜೀವಹಾನಿ ದುಃಖದ ಸಂಗತಿ,” ಎಂದು ಅಭಿಪ್ರಾಯಪಟ್ಟರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment