ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಕರ್ನಾಟಕ ಸರ್ಕಾರದಿಂದ ಮಹಿಳಾ ಉದ್ಯೋಗಿಗಳಿಗೆ ‘ಋತುಚಕ್ರ ರಜೆ ನೀತಿ 2025’ ಜಾರಿಗೆ

On: November 12, 2025 9:40 PM
Follow Us:

ಬೆಂಗಳೂರು: ಮಹಿಳಾ ಉದ್ಯೋಗಿಗಳಿಗೆ ವರ್ಷದಲ್ಲಿ 12 ದಿನಗಳ ವೇತನ ಸಹಿತ ರಜೆ ನೀಡುವ ಪ್ರಸ್ತಾವನೆಗೆ ರಾಜ್ಯ ಸರ್ಕಾರವು ಹಸಿರು ನಿಶಾನೆ ತೋರಿಸಿದೆ. ಕಾರ್ಮಿಕ ಇಲಾಖೆ ಮಂಡಿಸಿದ ‘ಋತುಚಕ್ರ ರಜೆ ನೀತಿ 2025’ ಪ್ರಸ್ತಾವನೆಗೆ ನವೆಂಬರ್‌ 9ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

ಈ ನೀತಿಯಡಿ ಮಹಿಳಾ ನೌಕರರಿಗೆ ಪ್ರತಿ ತಿಂಗಳು ಋತುಚಕ್ರದ ಸಮಯದಲ್ಲಿ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನ ಸಹಿತ ರಜೆ ಸೌಲಭ್ಯ ದೊರೆಯಲಿದೆ. ಸರ್ಕಾರಿ ಕಚೇರಿಗಳು, ಗಾರ್ಮೆಂಟ್ಸ್‌, ಬಹುರಾಷ್ಟ್ರೀಯ ಕಂಪನಿಗಳು (MNCs), ಐಟಿ ಸಂಸ್ಥೆಗಳು ಹಾಗೂ ಖಾಸಗಿ ಕೈಗಾರಿಕೆಗಳು ಸೇರಿದಂತೆ ಎಲ್ಲಾ ವಲಯಗಳಿಗೂ ಈ ನೀತಿ ಅನ್ವಯವಾಗಲಿದೆ.

ನೀತಿಯ ಕುರಿತಂತೆ ಸಾರ್ವಜನಿಕ ಅಭಿಪ್ರಾಯ ಸಂಗ್ರಹಿಸಲಾಗಿದ್ದು, ಕಾರ್ಮಿಕರು, ಕಾರ್ಮಿಕ ಸಂಘಗಳು, ಮಾಲೀಕರು, ಮಹಿಳಾ ಸಂಘಟನೆಗಳು ಹಾಗೂ ಸಾರ್ವಜನಿಕರಿಂದ ಒಟ್ಟು 75 ಅಭಿಪ್ರಾಯಗಳು ಸ್ವೀಕೃತವಾಗಿವೆ. ಇವುಗಳಲ್ಲಿ 56 ಅಭಿಪ್ರಾಯಗಳು ಪ್ರಸ್ತಾಪಿತ ನೀತಿಯ ಪರವಾಗಿದ್ದು, 19 ಅಭಿಪ್ರಾಯಗಳು ವಿರೋಧ ವ್ಯಕ್ತಪಡಿಸಿವೆ. ಬೆಂಬಲಿಸಿದ 56 ಅಭಿಪ್ರಾಯಗಳಲ್ಲಿ 26 ಮಾಲೀಕರು, 7 ಕಾರ್ಮಿಕ ಸಂಘಗಳು, 19 ನೌಕರರು, 1 ಸಾರ್ವಜನಿಕ, 1 ಸರ್ಕಾರಿ ನೌಕರರ ಒಕ್ಕೂಟ ಹಾಗೂ 2 ಮಹಿಳಾ ಸಂಘಗಳು ಭಾಗಿಯಾಗಿವೆ.

ಇದಲ್ಲದೆ, 10 ಅಭಿಪ್ರಾಯಗಳಲ್ಲಿ ಪ್ರಸ್ತಾಪಿತ ವಾರ್ಷಿಕ 6 ರಜೆಗಳ ಬದಲಿಗೆ 12 ರಜೆಗಳನ್ನು ನೀಡುವಂತೆ ಸಲಹೆ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಮಿಕ ಇಲಾಖೆಯು ಮಹಿಳಾ ನೌಕರರ ಆರೋಗ್ಯ ಮತ್ತು ಯೋಗಕ್ಷೇಮವನ್ನು ಉತ್ತೇಜಿಸುವ, ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ‘ಋತುಚಕ್ರ ರಜೆ ನೀತಿ 2025’ ಅನ್ನು ಜಾರಿಗೆ ತರಲು ಆದೇಶ ಹೊರಡಿಸಿದೆ.

ಕಾರ್ಮಿಕ ಇಲಾಖೆ ಆಯುಕ್ತರ ಪ್ರಕಾರ, ಈ ಕ್ರಮದಿಂದ ಮಹಿಳೆಯರ ಉದ್ಯೋಗ ಕ್ಷೇತ್ರದ ಭಾಗವಹಿಸುವಿಕೆ ಹೆಚ್ಚಾಗುತ್ತದೆ, ಅವರ ಸಬಲೀಕರಣಕ್ಕೆ ಮಾರ್ಗ ಸಿಗುತ್ತದೆ ಮತ್ತು ಕರ್ನಾಟಕವು ಮಹಿಳಾ ಶ್ರಮದ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಉತ್ತಮ ಅಭ್ಯಾಸವನ್ನು ರೂಪಿಸಿರುವ ರಾಜ್ಯಗಳಲ್ಲಿ ಒಂದಾಗಿ ಹೊರಹೊಮ್ಮಲಿದೆ.

K.M.Sathish Gowda

Join WhatsApp

Join Now

Facebook

Join Now

Read more

ಪೊಲೀಸ್ ಇಲಾಖೆಯಲ್ಲಿ ‘ಮೇಜರ್ ಸರ್ಜರಿ’: 129 ಇನ್ಸ್‌ಪೆಕ್ಟರ್‌, 23 ಡಿವೈಎಸ್ಪಿಗಳಿಗೆ ವರ್ಗಾವಣೆ; ಬೆಂಗಳೂರು ಸಿಟಿ ಪಟ್ಟಿ ಇನ್ನೂ ಬಾಕಿ

ಸೂಡಾ ಕಾಮಗಾರಿಗಳ ಮೇಲೆ ಭ್ರಷ್ಟಾಚಾರ ನೆರಳು; ಡಿಸಿ ಕಚೇರಿ ಮುಂದೆ ಜೆಡಿಎಸ್ ಪ್ರತಿಭಟನೆ

‘ಕೊಟ್ಟ ಮಾತು ಉಳಿಯುತ್ತದೆಯೇ?’ – ಕಾಂಗ್ರೆಸ್ ಒಳಕಿಚ್ಚಿಗೆ ಸುರೇಶ್ ಮಾರ್ಮಿಕ ನುಡಿ, ಡಿಕೆಶಿ ದೆಹಲಿ ಪಯಣ ರಾಜಕೀಯ ಚರ್ಚೆ ತೀವ್ರ

“ಮೊದಲು ನಿಮ್ಮ ಹೈಕಮಾಂಡ್‌ ಹುಡುಕಿ, ಬಳಿಕ ಮೋದಿ ಬಗ್ಗೆ ಮಾತನಾಡಿ”: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ತೀವ್ರ ವಾಗ್ದಾಳಿ

ಪ್ಲಾಸ್ಟಿಕ್ ಮುಕ್ತ ಶಿವರಾತ್ರಿ ಉತ್ಸವಕ್ಕೆ ಹರಕೆರೆ ಹರಕೇಶ್ವರ ದೇವಸ್ಥಾನದಲ್ಲಿ ಸಂಕಲ್ಪ

ಜನಸೇವೆಗೆ ಬದ್ಧ ನಾಯಕತ್ವ: ಹಾರನಹಳ್ಳಿಯಲ್ಲಿ ಡಿ.ಎಸ್. ಅರುಣ್ ಅವರಿಂದ ಪಂಚಾಯಿತಿ ಕಟ್ಟಡ ಉದ್ಘಾಟನೆ ಹಾಗೂ ಹಕ್ಕುಪತ್ರ ವಿತರಣೆ

Leave a Comment