ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಆಸ್ತಿ ನೋಂದಣಿಗೆ ಅಡ್ಡಿಯಾಗಿರುವ ಕಾವೇರಿ–2 ದೋಷ: ಹಿರಿಯ ನಾಗರಿಕರ ಪರ ಧ್ವನಿಯಾದ ಡಿ.ಎಸ್. ಅರುಣ್

On: December 17, 2025 3:58 PM
Follow Us:

ಬೆಳಗಾವಿ : ವಿಧಾನಪರಿಷತ್ ಸದನದಲ್ಲಿ ಇಂದು ಕಾವೇರಿ–2 ವ್ಯವಸ್ಥೆಯ ಸರ್ವರ್ ದೋಷ ಮತ್ತು ಇ–ಸ್ವತ್ತು ವ್ಯವಸ್ಥೆಯೊಂದಿಗೆ ಸಂಯೋಜನೆಯಿಂದ ಉಂಟಾಗಿರುವ ಗಂಭೀರ ತಾಂತ್ರಿಕ ಸಮಸ್ಯೆಗಳ ಕುರಿತು ತೀವ್ರ ಚರ್ಚೆ ನಡೆಯಿತು. ವಿಧಾನಪರಿಷತ್ ಸದಸ್ಯರಾದ ಡಿ.ಎಸ್. ಅರುಣ್ ಅವರು, ಈ ಸಮಸ್ಯೆಯಿಂದ ಸಾರ್ವಜನಿಕರು, ವಿಶೇಷವಾಗಿ ಹಿರಿಯ ನಾಗರಿಕರು ಮತ್ತು ಮೊದಲ ಬಾರಿಗೆ ಉಪನೋಂದಣಿ ಕಚೇರಿಗೆ ಬರುವವರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸರ್ಕಾರದ ಗಮನ ಸೆಳೆದರು.

ಕಾವೇರಿ–2 ವ್ಯವಸ್ಥೆಯನ್ನು ಇ–ಸ್ವತ್ತಿನೊಂದಿಗೆ ಸಂಯೋಜಿಸಿದ ಬಳಿಕ ವಿಭಾಗ ಪತ್ರಗಳ ಮೂಲಕ ಆಸ್ತಿ ನೋಂದಣಿ ಹಾಗೂ ಪಾರಂಪರಿಕ ಆಸ್ತಿಗಳ ವರ್ಗಾವಣೆಯಲ್ಲಿ ತಾಂತ್ರಿಕ ಅಡಚಣೆಗಳು ಎದುರಾಗುತ್ತಿವೆ. ಎರಡು ಪ್ರಮುಖ ಸಾಫ್ಟ್‌ವೇರ್‌ಗಳನ್ನು ಸಂಯೋಜಿಸುವಾಗ ಅಗತ್ಯ ಸರ್ವರ್ ಸಾಮರ್ಥ್ಯವನ್ನು ಹೆಚ್ಚಿಸದಿರುವುದೇ ಸಮಸ್ಯೆಗಳ ಮೂಲ ಕಾರಣವಾಗಿದ್ದು, ಇದರಿಂದ ಸರ್ಕಾರದ ರಾಜಸ್ವ ಸಂಗ್ರಹಕ್ಕೂ ಧಕ್ಕೆಯಾಗುತ್ತಿದೆ ಎಂದು ಡಿ.ಎಸ್. ಅರುಣ್ ವಿವರಿಸಿದರು.

ಇದಕ್ಕೂ ಜೊತೆಗೆ ಖಾತಾ ವಿಭಜನೆ ಸಂಬಂಧಿತ ಸಮಸ್ಯೆಗಳು ಹೆಚ್ಚಾಗಿದ್ದು, ಜನಸಾಮಾನ್ಯರಿಗೆ ಅನಗತ್ಯ ವಿಳಂಬ ಮತ್ತು ಅನಾನುಕೂಲ ಉಂಟಾಗುತ್ತಿದೆ ಎಂದು ಅವರು ಉಲ್ಲೇಖಿಸಿ, ತಕ್ಷಣ ಪರಿಹಾರ ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಆಗ್ರಹಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು, ಕಾವೇರಿ–2 ಮತ್ತು ಇ–ಸ್ವತ್ತು ಸಂಯೋಜನೆಯಿಂದ ಸರ್ವರ್ ಹಾಗೂ ಖಾತಾ ವಿಭಜನೆಗೆ ಸಂಬಂಧಿಸಿದ ಸಮಸ್ಯೆಗಳು ಉಂಟಾಗಿರುವುದನ್ನು ಒಪ್ಪಿಕೊಂಡರು. ನಗರಸಭೆಗಳು ಚೆಕ್‌ಬಂದಿ ಪ್ರಕ್ರಿಯೆಯಲ್ಲಿ ಆದಷ್ಟು ಬೇಗನೆ ಕ್ರಮ ವಹಿಸಿ ಸಾರ್ವಜನಿಕರಿಗೆ ಸಹಕಾರ ನೀಡುವಂತೆ ಸೂಚಿಸಲಾಗುವುದು ಎಂದು ಹೇಳಿದರು. ಜೊತೆಗೆ ಆರ್‌ಡಿಪಿಆರ್ ಇಲಾಖೆ ಮತ್ತು ನಗರಾಭಿವೃದ್ಧಿ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಶೀಘ್ರದಲ್ಲೇ ಸೂಕ್ತ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರಸ್ತುತ ಸರ್ವರ್ ಸಮಸ್ಯೆ ಗಂಭೀರವಾಗಿದ್ದು, ಅದನ್ನು ಸರಿಪಡಿಸಲು ಅಗತ್ಯ ತಾಂತ್ರಿಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಚಿವರು ಸ್ಪಷ್ಟಪಡಿಸಿದರು. ಅಲ್ಲದೆ, ಈ ಕ್ಷೇತ್ರದಲ್ಲಿ ಅನುಭವ ಹೊಂದಿರುವ ಡೀಡ್ ರೈಟರ್‌ಗಳಿಗೆ ಫಲಾನುಭವಿಗಳು ಹಾಗೂ ಸಾರ್ವಜನಿಕರ ವಿವರಗಳನ್ನು ಅಪ್‌ಲೋಡ್ ಮಾಡುವ ಅವಕಾಶ ನೀಡುವ ಕುರಿತು ಸಹ ಪರಿಗಣಿಸಲಾಗುವುದು ಎಂದು ತಿಳಿಸಿದರು. ಈ ಕುರಿತು ಡಿ.ಎಸ್. ಅರುಣ್ ಅವರು ನೀಡಿದ ಸಲಹೆಯನ್ನು ಸ್ವೀಕರಿಸಲಾಗಿದ್ದು, ಇದರಿಂದ ಸಾರ್ವಜನಿಕರಿಗೆ ತ್ವರಿತ ಮತ್ತು ಸುಲಭ ಸೇವೆ ದೊರೆಯಲಿದೆ ಎಂದು ಸಚಿವರು ಹೇಳಿದರು.

K.M.Sathish Gowda

Join WhatsApp

Join Now

Facebook

Join Now

Read more

ಯುವಕರು ಸಂಘಟಿತರಾಗಿ ನಾರಾಯಣ ಗುರುಗಳ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲಿ: ಸಚಿವ ಮಧು ಬಂಗಾರಪ್ಪ

ಧರ್ಮ, ಪರಂಪರೆ ಹಾಗೂ ಮಠಮಾನ್ಯಗಳ ಸಂರಕ್ಷಣೆಗೆ ಸಂಘಟಿತ ಪ್ರಯತ್ನ ಅಗತ್ಯ: ಭಿನ್ನಾಭಿಪ್ರಾಯ ಬದಿಗಿಟ್ಟು ಸಮಾಜದ ಹಿತಕ್ಕಾಗಿ ಒಂದಾಗ ಬೇಕು: ವೀರಶೈವ ಲಿಂಗಾಯತ ಸಮಾಜದ ಒಗ್ಗಟ್ಟು ಕಾಪಾಡುವುದು ಎಲ್ಲರ ಜವಾಬ್ದಾರಿ: ಬಿ.ವೈ. ವಿಜಯೇಂದ್ರ

ಭಕ್ತಿಯ ಮಹಾಪ್ರವಾಹದಲ್ಲಿ ಶಿವಮೊಗ್ಗ: ಹಿಂದೂ ಮಹಾಸಭಾ ಗಣಪತಿ ಮೆರವಣಿಗೆಗೆ ಲಕ್ಷಾಂತರ ಜನರ ಸಾಕ್ಷಿ! ಕಾಲಿಡಲೂ ಜಾಗವಿಲ್ಲ, ಬಾನಂಗಳದಲ್ಲಿ ಜೈಕಾರ! ಶಿವಮೊಗ್ಗದಲ್ಲಿ ಮೈ ನವಿರೇಳಿಸಿದ ಗಣೇಶೋತ್ಸವದ ಅದ್ಧೂರಿ ಮೆರವಣಿಗೆ!

ಸೆ.26-27ರಂದು ಬೆಂಗಳೂರಿನಲ್ಲಿ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಮಹಾಸಮ್ಮೇಳನ: ಪಂಚಪೀಠಾಧೀಶರ ಸಾನ್ನಿಧ್ಯ

ಶಿವಮೊಗ್ಗ ಹಿಂದೂ ಗಣಪತಿ ಮೆರವಣಿಗೆಗೆ ಭಕ್ತಿಯ ಸಾಥ್: ಐದು ಸಾವಿರ ಭಕ್ತರಿಗೆ ಅನ್ನದಾಸೋಹ: ಮೂರನೇ ವರ್ಷವೂ ಸೇವಾ ಪರಂಪರೆ ಮುಂದುವರಿಸಿದ ಎಸ್‌ಆರ್‌ವಿ ಎಂಟರ್‌ಪ್ರೈಸಸ್ ಗೆಳೆಯರ ಬಳಗ

50 ವರ್ಷಗಳ ದಾಂಪತ್ಯ ಜೀವನ ಸಮಾಜಕ್ಕೆ ಮಾದರಿ: ಸಂಸ್ಕಾರ, ಶಿಕ್ಷಣದೊಂದಿಗೆ ಬದುಕು ಕಟ್ಟಿಕೊಳ್ಳಿ: ತಾಯ್ನಾಡಿಗೆ ಮರಳಿ ಸೇವೆ ಸಲ್ಲಿಸಿ ಎಂದು ವಿದ್ಯಾರ್ಥಿಗಳಿಗೆ ಕೆ.ಈ. ಕಾಂತೇಶ್ ಕರೆ

Leave a Comment