ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡಕ್ಕೆ ಶಿಲಾನ್ಯಾಸ

On: December 29, 2025 5:34 PM
Follow Us:

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ನೂತನ ಕಟ್ಟಡ ನಿರ್ಮಾಣಕ್ಕೆ ಶಿಲಾನ್ಯಾಸ ಹಾಗೂ ಗುದ್ದಲಿ ಪೂಜಾ ಕಾರ್ಯಕ್ರಮವು ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಡಿಎಆರ್ ಪೊಲೀಸ್ ಕ್ವಾರ್ಟರ್ಸ್ ಆವರಣದಲ್ಲಿ ನೆರವೇರಿತು. ಸಂಘದ ಹೆಸರಿಗೆ ಮಂಜೂರಾದ ಜಾಗದಲ್ಲಿ ನಡೆದ ಈ ಮಹತ್ವದ ಕಾರ್ಯಕ್ರಮವನ್ನು ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ. ಮಿಥುನ್ ಕುಮಾರ್ ಅವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ರಕ್ಷಣಾಧಿಕಾರಿಗಳಾದ ಜಿ.ಕೆ. ಮಿಥುನ್ ಕುಮಾರ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿಯ ಸದಸ್ಯರು ಹಾಗೂ ಎಲ್ಲಾ ಸದಸ್ಯರ ಬಹುದಿನಗಳ ಕನಸು ಇದೀಗ ನನಸಾಗಿರುವುದು ಸಂತಸದ ವಿಷಯ ಎಂದು ಹೇಳಿದರು. ಸಂಘದ ಕಟ್ಟಡ ನಿರ್ಮಾಣಕ್ಕೆ ಸಲ್ಲಿಸಿದ್ದ ಬೇಡಿಕೆ ಹಾಗೂ ಮನವಿಗೆ ಸ್ಪಂದಿಸಿ ಜಾಗ ಮಂಜೂರಾಗಿರುವುದು ಶ್ಲಾಘನೀಯ ಬೆಳವಣಿಗೆಯಾಗಿದೆ ಎಂದರು.

ನೂತನ ಕಟ್ಟಡ ನಿರ್ಮಾಣಕ್ಕೆ ಪೊಲೀಸ್ ಇಲಾಖೆಯಿಂದ ಅಗತ್ಯವಿರುವ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದ ಅವರು, ಅತ್ಯುತ್ತಮ ಸೌಲಭ್ಯಗಳೊಂದಿಗೆ ಬಹುಮಹಡಿ ಕಟ್ಟಡ ನಿರ್ಮಿಸುವಂತೆ ಶುಭಹಾರೈಸಿದರು. ನಿವೃತ್ತಿಯ ನಂತರ ನಾವು ಕೂಡ ಒಂದು ದಿನ ಇದೇ ಕಟ್ಟಡಕ್ಕೆ ಬಂದು ಸೇರಬೇಕಾಗುತ್ತದೆ. ಹೀಗಾಗಿ ಇದು ನಮ್ಮದೇ ಕನಸಿನ ಕಟ್ಟಡವಾಗಬೇಕು ಎಂದು ಹೇಳಿದರು. ಕಟ್ಟಡ ನಿರ್ಮಾಣದ ಹಂತದಲ್ಲಿ ಬೇಕಾಗುವ ಎಲ್ಲ ರೀತಿಯ ಸಹಾಯ, ಆರ್ಥಿಕ ನೆರವು ಸಹ ನೀಡಲಾಗುವುದು ಎಂದು ತಿಳಿಸಿದರು.

ಕಾರ್ಯಕ್ರಮದ ಪ್ರಾಸ್ತಾವಿಕ ಮಾತನಾಡಿದ ಸಂಘದ ಅಧ್ಯಕ್ಷರಾದ ಹೆಚ್.ಈ. ಮಂಜಪ್ಪ ಅವರು, ಸಂಘವು ಸ್ಥಾಪನೆಯಾಗಿ ಈಗಾಗಲೇ 28 ವರ್ಷಗಳು ಪೂರ್ಣಗೊಂಡಿವೆ ಎಂದು ತಿಳಿಸಿದರು. ಇತ್ತೀಚೆಗೆ ಡಿಜಿ ಹಾಗೂ ಐಜಿಪಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಘದ ಕಟ್ಟಡಕ್ಕಾಗಿ ಜಾಗ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗಿತ್ತು. ಅದಕ್ಕೆ ಸ್ಪಂದಿಸಿ ಜಿಲ್ಲಾ ರಕ್ಷಣಾಧಿಕಾರಿಗಳು ನಮ್ಮ ಮನವಿಯನ್ನು ತ್ವರಿತವಾಗಿ ಶಿಫಾರಸ್ಸು ಮಾಡಿ ಕಳುಹಿಸಿದ ಪರಿಣಾಮ 30×40 ಅಳತೆಯ ಜಾಗವನ್ನು ಸಂಘಕ್ಕೆ ಮಂಜೂರು ಮಾಡಲಾಗಿದೆ ಎಂದು ವಿವರಿಸಿದರು.

ಸಂಘದ ಅಧ್ಯಕ್ಷರಾದ ಹೆಚ್.ಈ. ಮಂಜಪ್ಪ ಅವರು ಮಾತನಾಡುತ್ತಾ, ಸಂಘವು ಸ್ಥಾಪನೆಯಾಗಿ ಈಗಾಗಲೇ 28 ವರ್ಷಗಳು ಪೂರ್ಣಗೊಂಡಿರುವುದನ್ನು ಸ್ಮರಿಸಿದರು. ಇತ್ತೀಚೆಗೆ ಡಿಜಿ ಹಾಗೂ ಐಜಿಪಿ ಅವರು ಶಿವಮೊಗ್ಗಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಘದ ನೂತನ ಕಟ್ಟಡಕ್ಕಾಗಿ ಜಾಗ ಮಂಜೂರು ಮಾಡುವಂತೆ ಮನವಿ ಸಲ್ಲಿಸಲಾಗಿತ್ತು ಎಂದು ತಿಳಿಸಿದರು. ಆ ಮನವಿಗೆ ಸ್ಪಂದಿಸಿದ ಜಿಲ್ಲಾ ರಕ್ಷಣಾಧಿಕಾರಿಗಳು ತ್ವರಿತವಾಗಿ ಶಿಫಾರಸ್ಸು ಮಾಡಿ ಕಳುಹಿಸಿದ ಪರಿಣಾಮವಾಗಿ ಸಂಘಕ್ಕೆ 30×40 ಅಳತೆಯ ಜಾಗ ಮಂಜೂರು ಆಗಿರುವುದು ಸಾಧ್ಯವಾಯಿತು ಎಂದು ವಿವರಿಸಿದರು.

ಈ ಜಾಗ ಮಂಜೂರಿಗೆ ಕಾರಣಕರ್ತರಾದ ಡಿಜಿ ಹಾಗೂ ಐಜಿಪಿ ಡಾ. ಎಂ.ಎ. ಸಲೀಂ ಹಾಗೂ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ಅವರಿಗೆ ಸಂಘದ ಪರವಾಗಿ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದರು. ಮುಂದಿನ ದಿನಗಳಲ್ಲಿ ಶೀಘ್ರದಲ್ಲೇ ಕಟ್ಟಡ ಕಾಮಗಾರಿಯನ್ನು ಆರಂಭಿಸಲಾಗುವುದು. ಈ ಕಾರ್ಯದಲ್ಲಿ ಸಂಘದ ಎಲ್ಲಾ ಸದಸ್ಯರ ಸಹಕಾರ ಅತ್ಯಗತ್ಯವಾಗಿದ್ದು, ಆರ್ಥಿಕವಾಗಿ ಸಹ ಕೈಜೋಡಿಸುವಂತೆ ಮನವಿ ಮಾಡಿದರು.

ಈ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಶಿವಮೊಗ್ಗ ಅಡಿಷನಲ್ ಎಸ್.ಪಿ., ಡಿವೈಎಸ್ಪಿ, ಡಿಎಆರ್ ಡಿವೈಎಸ್ಪಿ, ಆರ್.ಪಿ.ಐ ಸೇರಿದಂತೆ ಸಂಘದ ಎಲ್ಲಾ ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸದಸ್ಯರುಗಳು ಉಪಸ್ಥಿತರಿದ್ದರು.

K.M.Sathish Gowda

Join WhatsApp

Join Now

Facebook

Join Now

Leave a Comment