ತಾಜಾ ಸುದ್ದಿ ರಾಜಕೀಯ ಕ್ರೈಂ ನ್ಯೂಸ್ ರಾಜ್ಯ-ಜಿಲ್ಲೆ ದೇಶ-ವಿದೇಶ ಸೋಷಿಯಲ್ ಮೀಡಿಯಾ ಮನರಂಜನೆ ಕಾನೂನು ಜೀವನಶೈಲಿ ಕ್ರೀಡೆ ಗುರುಪರಂಪರೆ ವಿಡೀಯೋ English News

ಬಹಿಷ್ಕಾರ ಪದ್ಧತಿ ವಿರುದ್ಧ ಕರವೇ ಸ್ವಾಭಿಮಾನಿ ಬಣದಿಂದ ಮನವಿ: ನೂತನ ಎಸ್ಪಿ ನಿಖಿಲ್ ಸ್ಪಂದನೆ

On: January 2, 2026 6:46 PM
Follow Us:

ಶಿವಮೊಗ್ಗ, : ಶಿವಮೊಗ್ಗ ಜಿಲ್ಲೆಯ ನೂತನ ಜಿಲ್ಲಾ ರಕ್ಷಣಾಧಿಕಾರಿಗಳಾಗಿ ಅಧಿಕಾರ ಸ್ವೀಕರಿಸಿದ ಬಿ. ನಿಖಿಲ್ ರವರಿಗೆ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ವತಿಯಿಂದ ಶುಭಾಶಯಗಳನ್ನು ಕೋರಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಸೊರಬ, ಹೊಸನಗರ ಹಾಗೂ ಸಾಗರ ತಾಲೂಕುಗಳಲ್ಲಿ ನಡೆಯುತ್ತಿರುವ ಬಹಿಷ್ಕಾರ ಪದ್ಧತಿಯ ಕುರಿತು ಮಹತ್ವದ ಮಾಹಿತಿಯನ್ನು ರಕ್ಷಣಾಧಿಕಾರಿಗಳಿಗೆ ತಿಳಿಸಿದರು.

ಕರವೇ ಸ್ವಾಭಿಮಾನಿ ಬಣದ ಜಿಲ್ಲಾ ಅಧ್ಯಕ್ಷರಾದ ಕಿರಣ್ ಕುಮಾರ್ ಎಚ್.ಎಸ್. ಅವರು ಮಾತನಾಡಿ, ಕೆಲ ಹಳ್ಳಿಗಳಲ್ಲಿ ಸಂವಿಧಾನಕ್ಕೆ ವಿರುದ್ಧವಾಗಿ ಪ್ರತ್ಯೇಕ ಸಂವಿಧಾನದಂತೆ ವರ್ತನೆ ನಡೆಯುತ್ತಿರುವುದು ಅತ್ಯಂತ ಆತಂಕಕಾರಿ ವಿಷಯ ಎಂದು ಹೇಳಿದರು. ಸಾಮಾಜಿಕ ಬಹಿಷ್ಕಾರ, ಮಾನವೀಯ ಹಕ್ಕುಗಳ ಉಲ್ಲಂಘನೆ ಹಾಗೂ ಸಾರ್ವಜನಿಕ ಜೀವನದಲ್ಲಿ ಅಸಮಾನತೆ ಉಂಟಾಗುತ್ತಿರುವ ಬಗ್ಗೆ ಅವರು ರಕ್ಷಣಾಧಿಕಾರಿಗಳ ಗಮನ ಸೆಳೆದರು.

ಈ ಸಂಬಂಧ ಬಹಿಷ್ಕಾರ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆಗೊಳಿಸುವಂತೆ ಮನವಿ ಪತ್ರವನ್ನು ಕರವೇ ಸ್ವಾಭಿಮಾನಿ ಬಣದ ವತಿಯಿಂದ ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಸಲ್ಲಿಸಲಾಯಿತು. ಮನವಿಯನ್ನು ಸ್ವೀಕರಿಸಿ ಮಾತನಾಡಿದ ಜಿಲ್ಲಾ ರಕ್ಷಣಾಧಿಕಾರಿ ಬಿ. ನಿಖಿಲ್ ಅವರು, ವಿಷಯದ ಗಂಭೀರತೆಯನ್ನು ಒಪ್ಪಿಕೊಂಡು, ಹಂತ ಹಂತವಾಗಿ ಸಮಸ್ಯೆಯನ್ನು ಸರಿಪಡಿಸುವ ಭರವಸೆಯನ್ನು ನೀಡಿದರು. ಕಾನೂನುಬಾಹಿರ ಪದ್ಧತಿಗಳಿಗೆ ಅವಕಾಶ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ)ದ ಜಿಲ್ಲಾ ಉಪಾಧ್ಯಕ್ಷರಾದ ವಿಜಯಕುಮಾರ್, ಜಿಲ್ಲಾ ಖಜಾಂಚಿ ಗಣೇಶ್,
ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ನೂರಲ್ಲ,
ಜಿಲ್ಲಾ ಯುವ ಘಟಕದ ಅಧ್ಯಕ್ಷ ಸದನ, ಯುವ ಘಟಕದ ಕಾರ್ಯದರ್ಶಿ ಪ್ರವೀಣ್ ಕುಮಾರ್,
ಮಾಧ್ಯಮ ಸಲಹೆಗಾರ ಅನಿಲ್ ಕುಮಾರ್,
ಪದಾಧಿಕಾರಿ ಸತೀಶ್, ಆನ್ಸರ್ ಸೇರಿದಂತೆ ಅನೇಕ ಕಾರ್ಯಕರ್ತರು ಹಾಜರಿದ್ದರು.

ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ ಹಾಗೂ ಸಮಾನತೆಯ ಸಮಾಜ ನಿರ್ಮಾಣಕ್ಕಾಗಿ ಕರವೇ ಸ್ವಾಭಿಮಾನಿ ಬಣ ನಿರಂತರವಾಗಿ ಹೋರಾಟ ನಡೆಸಲಿದೆ ಎಂದು ಪದಾಧಿಕಾರಿಗಳು ತಿಳಿಸಿದ್ದಾರೆ.

K.M.Sathish Gowda

Join WhatsApp

Join Now

Facebook

Join Now

Leave a Comment